Breaking: ಬೆಂಗಳೂರಿನಲ್ಲಿ ಜೂ. 20ರಂದು ಪ್ರಧಾನಿ ಕಾರ್ಯಕ್ರಮ: ಕೆಲವು ಕಾಲೇಜುಗಳಿಗೆ ರಜೆ

ಬೆಂಗಳೂರು, ಜೂ.18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ. 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಕೆಲವು ಭಾಗಗಳ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧ ಶನಿವಾರ ಆದೇಶ ಹೊರಡಿಸಲಾಗಿದೆ.

PM Narendra modi Bengaluru visit on June 20th: Holiday for some colleges

ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+