ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PM Narendra Modi Birthday : ಕರ್ನಾಟಕದಲ್ಲಿ ಸೆ.17ರಿಂದ ಅ.2ವರೆಗಿನ ಕಾರ್ಯಕ್ರಮಗಳ ಪಟ್ಟಿ ಹೀಗಿದೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್‌ 16: ಸೆಪ್ಟೆಂಬರ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಇದೆ. ಈ ಪ್ರಯುಕ್ತ ಸೆಪ್ಟೆಂಬರ್‌ 17 ರಿಂದ ಅಕ್ಟೋಬರ್‌ 2ರ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

ಒಟ್ಟು ಸುಮಾರು 15ದಿನಗಳ ಕಾಲ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಯಲಿದೆ. ಇದರ ಭಾಗವಾಗಿ ಕಾರ್ಯಕ್ರಮಗಳ ರೂಪರೇಷೆ ಸಿದ್ಧಪಡಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ವಿವಿಧ ಆಸ್ಪತ್ರೆಗಳ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳ ಜತೆ ಶುಕ್ರವಾರ ಆನ್‌ಲೈನ್‌ ಮೂಲಕ ಸಭೆ ನಡೆಸಿದರು.

ತಮಿಳುನಾಡು: ಮೋದಿ ಜನ್ಮದಿನದಂದು ಹುಟ್ಟಿದ ಮಕ್ಕಳಿಗೆ ಚಿನ್ನದ ಉಂಗುರ ಗಿಫ್ಟ್‌!ತಮಿಳುನಾಡು: ಮೋದಿ ಜನ್ಮದಿನದಂದು ಹುಟ್ಟಿದ ಮಕ್ಕಳಿಗೆ ಚಿನ್ನದ ಉಂಗುರ ಗಿಫ್ಟ್‌!

ವಿಶೇಷ ಅಭಿಯಾನಕ್ಕೆ ಸೆಪ್ಟೆಂಬರ್‌ 17 ರಂದು ಶನಿವಾರು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ( ಬಿಎಂಸಿಆರ್ಐ)ಯಲ್ಲಿ ಚಾಲನೆ ದೊರೆಯಲಿದೆ.

ಸಭೆಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಇಲ್ಲ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ರಾಜ್ಯದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಾಗಿ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಮಧುಮೇಹ, ಬಿಪಿ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಬೇಕಿದೆ. ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಈ ಕಾರ್ಯ ನಡೆಯಬೇಕಿದೆ ಎಂದರು.

ಕೋವಿಡ್ 3ನೇ ಹೆಚ್ಚಿಸಲು ಕ್ರಮವಹಿಸಿ

ಕೋವಿಡ್ 3ನೇ ಹೆಚ್ಚಿಸಲು ಕ್ರಮವಹಿಸಿ

ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತಿಳಿಸಿ, ಗುರಿ ನಿಗದಿ ಮಾಡಿ ಜನರನ್ನು ಉಪಕೇಂದ್ರಕ್ಕೆ ಕರೆದುಕೊಂಡು ಬರಲು ಸೂಚಿಸಬೇಕು. ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಪ್ರಮಾಣ ಶೇ.20 ರಷ್ಟು ಮಾತ್ರ ಆಗಿದೆ. ಈ ಹದಿನೈದು ದಿನಗಳಲ್ಲಿ ಲಸಿಕಾಕರಣವು ದೊಡ್ಡ ಮಟ್ಟದಲ್ಲಿ ನಡೆಯಲು ಕ್ರಮ ವಹಿಸಬೇಕು. ಎನ್‌ಜಿಒಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳನ್ನು ಆಹ್ವಾನಿಸಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಕರೆ ನೀಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಕ್ಯಾನ್ಸರ್ ತಪಾಸಣೆಗೆ ವ್ಯವಸ್ಥೆ ಮಾಡಿ

ಕ್ಯಾನ್ಸರ್ ತಪಾಸಣೆಗೆ ವ್ಯವಸ್ಥೆ ಮಾಡಿ

ನವಜಾತ ಶಿಶುವಿನಿಂದ ಆರಂಭವಾಗಿ, ವಯೋವೃದ್ಧರವೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆಯ ಸೌಲಭ್ಯಗಳ ಬಗ್ಗೆ ಅನೇಕರಿಗೆ ಗೊತ್ತೇ ಇಲ್ಲ. ಅಂತಹವರಿಗೆ ಜಾಗೃತಿ ಮೂಡಿಸಿ ತಪಾಸಣೆ ಮಾಡಿಸಿಕೊಳ್ಳಲು ಹೇಳಬೇಕು. ಕ್ಯಾನ್ಸರ್‌ ತಪಾಸಣೆಗಾಗಿ ಜಿಲ್ಲೆ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ. ತಪಾಸಣೆ ಕುರಿತು ಅರಿವು ಮೂಡಿಸುವ ಜತೆಗೆ 35 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ ಪುರುಷರನ್ನು ಕರೆದುಕೊಂಡು ಬಂದು ತಪಾಸಣೆ ಮಾಡಿಸಬೇಕು.


ಐದು ವರ್ಷಕ್ಕೊಮ್ಮೆ ಇಂತಹ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಬೇಕು. ಇವುಗಳಿಂದ ಸಾವುಗಳನ್ನು ತಪ್ಪಿಸಬಹುದು, ಜನರ ಆರೋಗ್ಯ ಸುಧಾರಿಸಲು ಸಹಕಾರಿಯಾಗುತ್ತದೆ. ಅಲ್ಲದೇ 8, 9, 10ನೇ ವರ್ಷ ವಯಸ್ಸಿನ ಮಕ್ಕಳಿಗೆ ಕಣ್ಣಿನ ತಪಾಸಣೆ ಮಾಡಬೇಕು ಎಂದು ಅವರು ನಿರ್ದೇಶಿಸಿದರು.

ಒಂದು ಕೋಟಿ ಆಯುಷ್ಮಾನ್‌ ಕಾರ್ಡ್‌ ವಿತರಣೆ ಗುರಿ

ಒಂದು ಕೋಟಿ ಆಯುಷ್ಮಾನ್‌ ಕಾರ್ಡ್‌ ವಿತರಣೆ ಗುರಿ

ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು 35 ಲಕ್ಷ ಜನರಿಗೆ ನೀಡಲಾಗಿದೆ. ಇನ್ನೂ 65 ಲಕ್ಷದಷ್ಟು ಕಾರ್ಡ್‌ಗಳನ್ನು ನೀಡಿ ಉದ್ದೇಶಿತ ಒಂದು ಕೋಟಿಯ ಗುರಿ ತಲುಪಬೇಕು. ದೇಶದಲ್ಲಿ ಕರ್ನಾಟಕವೇ ಒಂದು ಕೋಟಿಯ ಗುರಿಯನ್ನು ಮೊದಲು ತಲುಪಬೇಕು ಎಂದು ಸುಧಾಕರ್‌ ತಿಳಿಸಿದರು.


ಪ್ರತಿ ದಿನ ಮಾಡುವ ಕೆಲಸಗಳೇ ಆರೋಗ್ಯ ರಕ್ಷಣೆಗೆ ಸಾಕು ಎಂಬ ತಪ್ಪು ಭಾವನೆ ಜನರಲ್ಲಿದೆ. ಆದ್ದರಿಂದ ಯೋಗ, ಧ್ಯಾನ, ಪ್ರಾಣಾಯಾಮದ ಬಗ್ಗೆಯೂ ಈ ಅಭಿಯಾನದಲ್ಲಿ ಒತ್ತು ನೀಡಬೇಕು. ಇದಕ್ಕಾಗಿ ಯೋಗ ಸಂಸ್ಥೆಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳ ಸಹಕಾರ ಪಡೆಯಬಹುದು. ಮಾತೃ ಮರಣ, ಶಿಶು ಮರಣ ಇಳಿಕೆಗೂ ಈ ಅಭಿಯಾನದಲ್ಲಿ ಗಮನಹರಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ರಾಜ್ಯದಲ್ಲಿ 248 ರಕ್ತನಿಧಿ ಕೇಂದ್ರ

ರಾಜ್ಯದಲ್ಲಿ 248 ರಕ್ತನಿಧಿ ಕೇಂದ್ರ

ಪ್ರತಿ ಆರೋಗ್ಯ ಕೇಂದ್ರಗಳಿಗೆ ಈ ಹದಿನೈದು ದಿನಗಳಲ್ಲಿ ಒಂದು ಗುರಿಯನ್ನು ನೀಡಿ ರಕ್ತ ಸಂಗ್ರಹ ಮಾಡಬೇಕು. ಹಾಗೆಯೇ ಅಂಗಾಂಗಗಳ ದಾನಕ್ಕೆ ಹೆಸರು ನೋಂದಾಯಿಸುವ ಚಟುವಟಿಕೆ ನಡೆಸಬೇಕು ಎಂದು ಸಚಿವರು ತಿಳಿಸಿದರು.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ ಅವರು, ರಾಜ್ಯದಲ್ಲಿ 248 ರಕ್ತನಿಧಿ ಕೇಂದ್ರಗಳಿದ್ದು, ಇವುಗಳಿಗೆ ಸೂಚನೆ ನೀಡಿ ರಕ್ತ ಸಂಗ್ರಹ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಇದೇ ರೀತಿ ಕ್ಷಯ ಮುಕ್ತ ಅಭಿಯಾನದ ಬಗ್ಗೆಯೂ ಅರಿವು ಮೂಡಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ಮಾತೃ ಮರಣದ ಕುರಿತು ಡೆತ್‌ ಆಡಿಟ್‌ ನಡೆಸಬೇಕು. ಹಾಗೆಯೇ ಪ್ರತಿ ಆಸ್ಪತ್ರೆಗಳಲ್ಲಿ ಪ್ರತಿ ಮರಣದ ಬಗ್ಗೆಯೂ ಡೆತ್‌ ಆಡಿಟ್‌ ಮಾಡುವ ಕ್ರಮ ಜಾರಿ ಮಾಡಬೇಕು ಎಂದು ಸಚಿವರು ತಾಕೀತು ಮಾಡಿದರು.

15ದಿನ ಹತ್ತಾರು ಆರೋಗ್ಯ ತಪಾಸಣೆಗಳು

15ದಿನ ಹತ್ತಾರು ಆರೋಗ್ಯ ತಪಾಸಣೆಗಳು

ರಕ್ತದಾನ, ಆಯುಷ್ಮಾನ್‌ ಭಾರತ್‌ ಕಾರ್ಡ್‌ ವಿತರಣೆ, ಅಂಗಾಂಗ ದಾನ ಅಭಿಯಾನ, ಕೋವಿಡ್‌ ಬೂಸ್ಟರ್‌ ಲಸಿಕೆ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ, ಕ್ಯಾನ್ಸರ್‌ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ವೃದ್ಧರು ಮತ್ತು ಶಾಲಾ ಮಕ್ಕಳಿಗೆ ಕನ್ನಡಕ ವಿತರಣೆ, ಮಕ್ಕಳು ಹಾಗೂ ವೃದ್ಧರಿಗೆ ಕಿವಿ ಆರೋಗ್ಯ ತಪಾಸಣೆ, ಗರ್ಭಿಣಿ ಹಾಗೂ ಮಕ್ಕಳಿಗಾಗಿ ಅನೀಮಯಾ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ, ವಿಶೇಷವಾಗಿ ಯುವಜನರಲ್ಲಿ ಹಾಗೂ ಮಕ್ಕಳಲ್ಲಿ ಹೃದಯ ಸಂಬಂಧಿ ರೋಗಗಳ ತಪಾಸಣೆ, ಮಧುಮೇಹ ತಪಾಸಣೆ, ಆಹಾರ ಸುರಕ್ಷತೆಯಡಿ ಈಟ್ ರೈಟ್ ಅಭಿಯಾನ ನಡೆಯಲಿದೆ ಎಂದು ಸುಧಾಕರ್ ತಿಳಿಸಿದರು.

English summary
PM Narendra Modi birthday on September 17th. The several health programs list in Karnataka from September 17 to August 2nd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X