ದಸರಾ ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಮೈಸೂರು ಮೇ 08: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ(67) ಆನೆ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ.
ಕರ್ನಾಟಕದ ನಾಡಹಬ್ಬ ದಸರಾದಲ್ಲಿ ಜಂಬೂಸವಾರಿಗೆ ವಿಶೇಷ ಮಹತ್ವವಿದ್ದು, ಇಂತಹ ಇತಿಹಾಸ ಪ್ರಸಿದ್ಧ ಜಂಬೂಸವಾರಿಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿರುವ ಬಲರಾಮ ಆನೆ ಅಗಲಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಬಲರಾಮ ಆನೆಯ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ' ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿ ಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ' ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ ಎಲ್ಲರ ಪ್ರೀತಿ ಪಾತ್ರವಾಗಿತ್ತು. ಇತ್ತಿಚಿಗೆ ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಜೊತೆಗೆ ಬಾಯಿಯಲ್ಲಿ ಹುಣ್ಣಿನಿಂದ ಬಳಲುತ್ತಿದ್ದ ಬಲರಾಮ ಆಹಾರ ಸೇವಿಸದೇ ನೀರು ಕುಡಿಯದೇ ಅಸ್ವಸ್ಥಗೊಂಡಿತ್ತು. ವೈದ್ಯರ ಚಿಕಿತ್ಸೆಗೆ ಸ್ಪಂದಿಸದ ಬಲರಾಮ ಭಾನುವಾರ ಕೊನೆಯುಸಿರೆಳೆದಿದೆ.

ಇನ್ನು ಬಲರಾಮ ಆನೆ ಅಗಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ' ಮೈಸೂರು ದಸರೆಯ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ ಆನೆ 'ಬಲರಾಮ' ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು. 14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ' ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications