PM Modi: ಕೇಂದ್ರ ಸರ್ಕಾರದ ಸಹಕಾರ ಕೋರಿದ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ಎರಡು ವರ್ಷಗಳ ಡಿಕೆ ಶಿವಕುಮಾರ್ ಅವರ ಅಧಿಕಾರಾವಧಿ ಬಗ್ಗೆ ಮಾತನಾಡಿ ಶುಭಾಶಯ ತಿಳಿಸಿದ್ದಾರೆ. ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲಿದೆ ಎಂದು ಅವರು ರಾಜ್ಯದ ನೂತನ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅವರು ಸಹಿತ ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಶ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್ ಅವರು ಧನ್ಯವಾದ ತಿಳಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದ ಜನತೆ ತಮ್ಮ ಮೇಲೆ ದೊಡ್ಡ ಜವಾಬ್ದಾರಿ ವಹಿಸಿದ್ದು, ಅದನ್ನು ವಿನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುವುದಾಗಿ ತಿಳಿಸಿದರು.

ನಾವೀನ್ಯತೆ, ಉದ್ಯಮಶೀಲತೆ, ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಸಹಕಾರಿ ಒಕ್ಕೂಟ ವ್ಯವಸ್ಥೆಯಡಿ ರಾಜ್ಯವನ್ನು ಬಲಪಡಿಸಲು ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ರಾಜ್ಯದ ಜನರ ಆಕಾಂಕ್ಷೆಗಳನ್ನು ಈಡೇರಿಸಲು, ಬಲಿಷ್ಠ ಭಾರತಕ್ಕೆ ಕೊಡುಗೆ ನೀಡುವ ಬಲಿಷ್ಠ ಕರ್ನಾಟಕ ನಿರ್ಮಾಣಕ್ಕೆ ಶ್ರಮಿಸುತ್ತೇನೆ. ನಿಮ್ಮ ಸಹಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ಕರ್ನಾಟಕ ಮುಖ್ಯಮಂತ್ರಿ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಅನೇಕ ರಾಜಕೀಯ ಗಣ್ಯರು, ಕೇಂದ್ರ ಸಚಿವರು ಹಾಗೂ ಸಿನಿ ತಾರೆಯರು ವಿಶ್ ಮಾಡುತ್ತಿದ್ದಾರೆ. ಅದರ ಬೆನ್ನಲ್ಲೆ ಇಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿಶ್ ಮಾಡಿ ಶುಭಕೋರಿದ್ದಾರೆ.
ಸಿಎಂ ಡಿಸಿಎಂಗೆ ಪ್ರಹ್ಲಾದ್ ಜೋಶಿಗೆ ವಿಶ್
ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ನಟ ರಮೇಶ್ ಅರವಿಂದ್ ಸೇರಿದಂತೆ ಅನೇಕರು ಡಿಕೆ ಶಿವಕುಮಾರ್ ಅವರಿಗೆ ಶುಭಕೋರಿದ್ದಾರೆ.
ಪ್ರಹ್ಲಾದ್ ಜೋಶಿಯವರು 'ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಾ. ಜಿ. ಪರಮೇಶ್ವರ್ ಅವರಿಗೆ ಹಾರ್ದಿಕ ಅಭಿನಂದನೆಗಳು' ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಕೇಂದ್ರ ಸರ್ಕಾರದ ವತಿಯಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಜನಕಲ್ಯಾಣದ ಕಾರ್ಯಗಳಿಗೆ ನಮ್ಮ ಸಂಪೂರ್ಣ ಸಹಕಾರ ಹಾಗೂ ಬೆಂಬಲ ಯಾವಾಗಲೂ ಇರಲಿದೆ ಎಂದು ಭರವಸೆ ನೀಡಿದ್ದಾರೆ.
https://kannada.oneindia.com/news/sports/virat-kohli-injury-update-ruturaj-gaikwad-likely-replacement-for-afghan-odi-series-know-details-456515.html?ref_source=OI-KN&ref_medium=Home-Page&ref_campaign=News-Cards












Click it and Unblock the Notifications