ಎಚ್. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮೋದಿ
ಬೆಂಗಳೂರು, ಮೇ 18: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಮೇ 18ರ ಶನಿವಾರ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.
ಎಚ್. ಡಿ. ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ, "ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾವುದೇ ಆಚರಣೆ ಮಾಡದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ" ಎಂದು ಮನವಿ ಮಾಡಿದ್ದರು.

ಶುಭಾಶಯ ಕೋರಿದ ಮೋದಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, "ಎಚ್. ಡಿ. ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ" ಎಂದು ಹಾರೈಸಿದ್ದಾರೆ.
Best wishes to Shri @H_D_Devegowda Ji on his birthday. He is respected across the political spectrum for his service to the nation. His passion towards agriculture and rural development are remarkable. Praying for his long and healthy life.
— Narendra Modi (@narendramodi) May 18, 2024
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, "ಹಿರಿಯ ಮುತ್ಸದ್ದಿ ನಾಯಕರು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಶುಭ ಕೋರಿದ್ದಾರೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, 'ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು. ವಯಸ್ಸು ಲೆಕ್ಕಿಸದ ಅವರ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ, ಗ್ರಾಮೀಣ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅವರು ಅತ್ಯಮೂಲ್ಯ ಮಾರ್ಗದರ್ಶನ ನೀಡುವಂತಾಗಲಿ ಎಂದು ಪ್ರಾರ್ಥಿಸುವೆ' ಎಂದು ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ, ಎಚ್. ಡಿ. ದೇವೇಗೌಡರ ಪುತ್ರ ಎಚ್. ಡಿ. ಕುಮಾರಸ್ವಾಮಿ, 'ಭಾರತ ಗಣರಾಜ್ಯದ 11ನೇ ಪ್ರಧಾನಮಂತ್ರಿಗಳು, Janata Dal Secular ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ ಡಾ. ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಇನ್ನಷ್ಟು ಆಯುರಾರೋಗ್ಯ ನೀಡಲಿ ಹಾಗೂ ಅವರ ಮಾರ್ಗದರ್ಶನ, ಜನಸೇವೆ ದೀರ್ಘಕಾಲ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶುಭಾಶಯ ಕೋರಿದ್ದಾರೆ.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾತನ ಫೋಟೋವನ್ನು ಹಾಕಿ, 'ಈ ದೇಶ ಕಂಡ ಅಪರೂಪದ ಜನನಾಯಕ, ರೈತನಾಯಕ, ಕನ್ನಡ ನಾಡಿನ ಅಗ್ರಮಾನ್ಯ ನೇತಾರ, ಹಿರಿಯ ಮುತ್ಸದ್ದಿ, ನೀರಾವರಿ ಹರಿಕಾರ, ಮಾಜಿ ಪ್ರಧಾನಮಂತ್ರಿಗಳು, ನನ್ನ ಆದರ್ಶ ಮತ್ತು ನನ್ನ ಪ್ರೀತಿಯ ತಾತ, ಸನ್ಮಾನ್ಯ ಶ್ರೀ ದೇವೇಗೌಡರವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನನ್ನಂತ ಯುವಕರಿಗೆ ಸ್ಪೂರ್ತಿ ಹಾಗೂ ಮಾರ್ಗದರ್ಶಕರಾಗಿರುವ ತಮಗೆ ಭಗವಂತ ಇನ್ನಷ್ಟು ಆಯಸ್ಸು ,ಆರೋಗ್ಯ ನೀಡಿ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶುಭ ಹಾರೈಸಿದ್ದಾರೆ.
ಮಾಜಿ ಸಚಿವ, ಬಿಜೆಪಿ ನಾಯಕ ಡಾ. ಸಿ. ಎನ್. ಅಶ್ವತ್ಥ ನಾರಾಯಣ, 'ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹಾಗೂ ನಮ್ಮೆಲ್ಲರ ಮಾರ್ಗದರ್ಶಕರಾದ ಮಣ್ಣಿನ ಮಗ ಶ್ರೀ ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಈ ನಾಡಿನ ಅಭ್ಯುದಯಕ್ಕಾಗಿ ಸದಾ ತುಡಿಯುವ ನಿಮ್ಮಲ್ಲಿರುವ ಉತ್ಸಾಹ ಹಾಗೂ ಅನುಭವ ನಮ್ಮಂತಹ ಅನೇಕರಿಗೆ ಸದಾ ಪ್ರೇರಣೆ. ಉತ್ತಮ ಆರೋಗ್ಯ ಹಾಗೂ ಆಯಸ್ಸಿಗಾಗಿ ಕಾಲ ಭೈರವನಲ್ಲಿ ಪ್ರಾರ್ಥಿಸುವೆ' ಎಂದು ಶುಭಾಶಯ ಕೋರಿದ್ದಾರೆ.
ಕಾರ್ಯಕರ್ತರಿಗೆ ಕರೆ: ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿರುವ ರಾಜ್ಯಸಭಾ ಸದಸ್ಯ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಪಕ್ಷದ ಕಾರ್ಯಕರ್ತರಿಗೆ ಕರೆಯೊಂದನ್ನು ನೀಡಿದ್ದಾರೆ.
"ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಣೆ ನಿರ್ವಹಿಸಬೇಕು' ಎಂದು ಕೋರಿದ್ದಾರೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications