ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್‌ಶೋ: ಕೇವಲ ಬ್ಯಾರಿಕೇಡ್‌ಗೆ 52 ಲಕ್ಷ ರೂಪಾಯಿ ವ್ಯಯಿಸಿದ ರಾಜ್ಯ ಸರ್ಕಾರ

ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಅವರ ರೋಡ್‌ಶೋಗಾಗಿ ರಾಜ್ಯ ಸರ್ಕಾರವು 52 ಲಕ್ಷ ರೂಪಾಯಿ ವೆಚ್ಚದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದೆ ಎಂದು ರಾಜ್ಯ ಹಣಕಾಸು ಇಲಾಖೆಯಿಂದ ಪಡೆದ ದಾಖಲೆಗಳು ಹೇಳಿವೆ. ಈ ವರದಿ ಓದಿ

ಬೆಂಗಳೂರು, ಮಾರ್ಚ್‌ 02: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಅವರ ರೋಡ್‌ಶೋಗಾಗಿ ರಾಜ್ಯ ಸರ್ಕಾರವು 52 ಲಕ್ಷ ರೂಪಾಯಿ ವೆಚ್ಚದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದೆ ಎಂದು ರಾಜ್ಯ ಹಣಕಾಸು ಇಲಾಖೆಯಿಂದ ಪಡೆದ ದಾಖಲೆಗಳು ಹೇಳಿವೆ.

ರಾಷ್ಟ್ರೀಯ ಯುವಜನೋತ್ಸವ (ಎನ್‌ವೈಎಫ್) ಉದ್ಘಾಟಿಸಲು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಎನ್‌ವೈಎಫ್‌ನ ಉದ್ಘಾಟನೆಯ ಸ್ಥಳವಾದ ರೈಲ್ವೆ ಮೈದಾನಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 7 ಕಿಮೀ ರೋಡ್‌ಶೋವನ್ನು ಮೋದಿ ನಡೆಸಿದ್ದರು.

PM Narendra Modi’s roadshow in Hubballi : Rs 52 lakh spent on barricading the route

ಈ ರೋಡ್‌ಶೋ ಅನ್ನು ಆರಂಭದಲ್ಲಿ ಕೆಲವು ಜಂಕ್ಷನ್‌ಗಳಲ್ಲಿ ಸಂಕ್ಷಿಪ್ತ ನಿಲುಗಡೆಯಾಗಿ ಯೋಜಿಸಲಾಗಿತ್ತು. ಅಂತಿಮವಾಗಿ ರಸ್ತೆಯುದ್ದಕ್ಕೂ ನಿಂತಿದ್ದ ಜನರಿಗೆ ಕೈಬೀಸುವ ಮೂಲಕ ಪ್ರಧಾನಿ ಮೋದಿ ರೋಡ್‌ಶೋ ಅನ್ನು ಮಾಡಿದರು. ಏಳು ಕಿಮೀ ಮಾರ್ಗದುದ್ದಕ್ಕೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸುಮಾರು 2,500 ಪೊಲೀಸರನ್ನು ನಿಯೋಜಿಸಲಾಗಿತ್ತು. ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ರೋಡ್‌ಶೋವನ್ನು ಆಯೋಜಿಸುವ ಉಸ್ತುವಾರಿ ವಹಿಸಲಾಗಿತ್ತು.

ಈ ಕುರಿತು ಮಾತನಾಡಿರುವ ಹುಬ್ಬಳ್ಳಿ-ಧಾರವಾಡ ಜಿಲ್ಲಾಡಳಿತದ ಅಧಿಕಾರಿಯೊಬ್ಬರು, 'ಬ್ಯಾರಿಕೇಡ್‌ಗಳನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಮುಖ ಖರ್ಚುಗಳಿಲ್ಲ' ಎಂದು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಗೆ ಕೆಲವೇ ದಿನಗಳು ಬಾಕಿ ಇರುವಾಗಿ ಪ್ರಧಾನಿ ಮೋದಿ ಪದೇಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಬೆಳಗಾವಿಯಲ್ಲಿ ರೋಡ್‌ಶೋ ನಡೆಸಿದ್ದಾರೆ. ಮೊನ್ನೆ ಶಿವಮೊಗ್ಗಕ್ಕೂ ಭೇಟಿ ನೀಡಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಮಾರ್ಚ್‌ 12 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬೆಂಗಳೂರು-ಮೈಸೂರು ಎಕ್ಸಪ್ರೆಸ್‌ವೇ ಅನ್ನು ಉದ್ಘಾಟಿಸಲಿದ್ದಾರೆ.

PM Narendra Modi’s roadshow in Hubballi : Rs 52 lakh spent on barricading the route

'ಪ್ರಧಾನಿ ಪ್ರವಾಸಿಯಾಗಿದ್ದಾರೆ' ಎಂದ ಕಾಂಗ್ರೆಸ್

ನರೇಂದ್ರ ಮೋದಿ ಅವರು ರಾಜ್ಯಕ್ಕೆ ಪದೇಪದೇ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವ್ಯಂಗ್ಯವಾಡಿದ್ದು, 'ಪ್ರಧಾನಿ ಪ್ರವಾಸಿಯಾಗಿದ್ದಾರೆ' ಎಂದು ಹೇಳಿದೆ. ಕರ್ನಾಟಕದ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಸೋಮವಾರ ಉದ್ಘಾಟಿಸಿದರು.

'ಕಳೆದ ವರ್ಷ ಕರ್ನಾಟಕವು ಅತಿವೃಷ್ಟಿ ಸಂಭವಿಸಿತ್ತು. ಘೋರ ಪ್ರವಾಹವನ್ನು ಎದುರಿಸಿತ್ತು. ಆ ವೇಳೆ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಮೋದಿ ತಲೆಕೆಡಿಸಿಕೊಂಡಿಲ್ಲ. ರಾಜ್ಯಕ್ಕೆ ಒಂದೇ ಒಂದು ರೂಪಾಯಿ ನೀಡಲಿಲ್ಲ. ಮುಂಬರುವ ಚುನಾವಣೆಗೆ ಧನ್ಯವಾದಗಳು. ಪ್ರಧಾನಿ ಮೋದಿ ರಾಜ್ಯದಲ್ಲೀಗ ಪ್ರವಾಸ ಮಾಡುತ್ತಿದ್ದಾರೆ' ಎಂದು ಟೀಕಿಸಿದೆ.

'ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರರ ಪತ್ರಕ್ಕೆ ಪ್ರಧಾನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಕರ್ನಾಟಕವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು' ಎಂದೂ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಪ್ರಧಾನಿ ಮೋದಿ ಸರ್ವಶಕ್ತ. ಏನು ಬೇಕಾದರೂ ಮಾಡಬಹುದು ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾವಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.

'ಅವರಿಗೆ ಹಣದುಬ್ಬರವನ್ನು ಏಕೆ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ? ಈ ಪ್ರಶ್ನೆಯನ್ನು ಕೇಳಿದಾಗಲೆಲ್ಲಾ ಅವರು ಪಾಕಿಸ್ತಾನದ ಕಡೆಗೆ ಏಕೆ ಬೆರಳು ತೋರಿಸುತ್ತಾರೆ? ಪ್ರಧಾನಿ ಮೋದಿ ಅವರು ಗ್ಯಾಸ್ ಬೆಲೆ 1,000 ರೂ. ದಾಟುವಂತೆ ಮಾಡಿದ್ದಾರೆ. ಪೆಟ್ರೋಲ್ ಬೆಲೆ 100 ರೂ. ಮೀರಿ ಹೋಗುವುದಕ್ಕೆ ಕುಮ್ಮಕ್ಕು' ಎಂದು ಕಾಂಗ್ರೆಸ್‌ ಹೇಳಿದೆ.

'ಕರ್ನಾಟಕ ಭ್ರಷ್ಟಾಚಾರದಲ್ಲಿ ದುಪ್ಪಟ್ಟು ವೇಗದಲ್ಲಿ ಸಾಗುತ್ತಿದೆ' ಎಂದು ಕಾಂಗ್ರೆಸ್ ಹೇಳಿದೆ.

'ಭ್ರಷ್ಟಾಚಾರದ ಬಗ್ಗೆ ಯಾವುದೇ ವಿಚಾರಣೆ ನಡೆಸದ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು, ಯಾವುದೇ ಹಿಂಜರಿಕೆಯಿಲ್ಲದೆ ಬಿಜೆಪಿ ಮುಖಂಡರು ಶೇಕಡಾ 40 ಕಮಿಷನ್ ತೆಗೆದುಕೊಂಡಿದ್ದಾರೆ' ಎಂದೂ ಕಾಂಗ್ರೆಸ್‌ ಹರಿಹಾಯ್ದಿದೆ.

ಇನ್ನೆರಡು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+