ಧಾರವಾಡದ ಐಐಟಿ ಉದ್ಘಾಟನೆಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ- ಯಾವ ದಿನಾಂಕ, ಏನೇನು ಕಾರ್ಯಕ್ರಮ ತಿಳಿಯಿರಿ
ಧಾರವಾಡ ಐಐಟಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಯಾವ ದಿನಾಂಕ ತಿಳಿಯಿರಿ
ಬೆಂಗಳೂರು, ಫೆಬ್ರವರಿ 25: ಫೆಬ್ರವರಿ 27 ರಂದು ಬೆಳಗಾವಿಯಲ್ಲಿ ಒಟ್ಟು 2,252 ಕೋಟಿ ರೂ.ಗಳ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಸಚಿವ ಗೋವಿಂದ ಕಾರಜೋಳ ಹೇಳಿದರು.
ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಯೋಜನೆಗಳ ಕುರಿತು ಮಾಹಿತಿ ನೀಡಿದ ಕಾರಜೋಳ, 190 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. 932 ಕೋಟಿ ವೆಚ್ಚದ ಬೆಳಗಾವಿ-ಲೋಂಡಾ ಜೋಡಿ ರೈಲು ಮಾರ್ಗವನ್ನು ಅವರು ಉದ್ಘಾಟಿಸಲಿದ್ದಾರೆ.

ಇದರ ಹೊರತಾಗಿ, 1,130 ಕೋಟಿ ರೂಪಾಯಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಯೋಜನೆಗೆ ಪ್ರಧಾನಿ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಯೋಜನೆಯಿಂದ 7 ಲಕ್ಷ ಜನರಿಗೆ ಕುಡಿಯುವ ನೀರು ದೊರೆಯಲಿದೆ.
ಬೆಳಗಾವಿಯ ಮಾಲಿನಿ ನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ ಎಂದು ಕಾರಜೋಳ ತಿಳಿಸಿದರು. ಬೆಳಗಾವಿ ಕ್ಷೇತ್ರದಿಂದ ನಾವು ಸುಮಾರು 3 ಲಕ್ಷ ಜನರನ್ನು ನಿರೀಕ್ಷಿಸುತ್ತಿದ್ದೇವೆ. ವೇದಿಕೆಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅನುದಾನ ಬಿಡುಗಡೆ ಮಾಡಲಿದ್ದಾರೆ.

ಬೆಳಗಾವಿಯ ಸುಮಾರು 5.1 ಲಕ್ಷ ರೈತರು ರೂ 102 ಕೋಟಿ ಯೋಜನೆಯಿಂದ ಪ್ರಯೋಜನ ಪಡೆಯಲಿದ್ದಾರೆ. ಕೇಂದ್ರವು ಪ್ರತಿ ವರ್ಷ ಪ್ರತಿ ರೈತರಿಗೆ ಮೂರು ಕಂತುಗಳಲ್ಲಿ 6,000 ರೂ. ಜೊತೆಗೆ ರಾಜ್ಯವು 4,000 ರೂ ನೀಡುತ್ತದೆ. ಹೀಗಾಗಿ ಪ್ರತಿ ರೈತರು ವಾರ್ಷಿಕ 10 ಸಾವಿರ ರೂ. ಪಡೆಯುತ್ತಾರೆ ಎಂದರು.
ಬೆಳಗಾವಿಯಲ್ಲಿ ಮೋದಿ 6 ಕಿಮೀ ರೋಡ್ ಶೋ ನಡೆಸಲಿದ್ದಾರೆ ಎಂದು ಕಾರಜೋಳ ಹೇಳಿದರು. ಈ ರೋಡ್ ಶೋ ಸಿಪಿಇಡಿ ಮೈದಾನದಿಂದ ಆರಂಭಗೊಂಡು ಮಾಲಿನಿ ನಗರದ ಸಾರ್ವಜನಿಕ ಸಭೆಯ ಸ್ಥಳದಲ್ಲಿ ಮುಕ್ತಾಯಗೊಳ್ಳಲಿದೆ. 'ಪ್ರಧಾನಿ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಳಗಾವಿಗೆ ಆಗಮಿಸುತ್ತಾರೆ' ಎಂದು ಅವರು ಹೇಳಿದರು.
ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಲಿರುವ ಸಿಎಂ
ನಗರದಿಂದ 20 ಕಿ.ಮೀ ದೂರದಲ್ಲಿರುವ ರಾಜಹಂಸಗಡ ಕೋಟೆಯ ಮೇಲಿರುವ ಛತ್ರಪತಿ ಶಿವಾಜಿ ಪ್ರತಿಮೆಯನ್ನು ಮಾರ್ಚ್ 2 ರಂದು ಸಿಎಂ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ ಎಂದು ಜಿಲ್ಲಾ ಸಚಿವ ಕಾರಜೋಳ ಮಾಹಿತಿ ನೀಡಿದರು.
ಕಳೆದೆರಡು ವಾರಗಳಿಂದ ಈ ಕೋಟೆ ವಿವಾದದ ಕೇಂದ್ರವಾಗಿದೆ. ಕೋಟೆಯ ಅಭಿವೃದ್ಧಿಯ ಶ್ರೇಯಸ್ಸು ಪಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಸಂಘರ್ಷದಲ್ಲಿ ತೊಡಗಿದ್ದಾರೆ.
ಇತ್ತೀಚೆಗಷ್ಟೇ ಸ್ಥಳೀಯ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರನ್ನು ಮಾರ್ಚ್ 5 ರಂದು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸುವುದಾಗಿ ಹೇಳಿದ್ದರು. ಇದು ಶಿಷ್ಟಾಚಾರದ ಉಲ್ಲಂಘನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಮುಖಂಡರು ಹೇಳಿದ್ದಾರೆ. ಇದೀಗ ಕಾರಜೋಳ ಪ್ರತಿಮೆಯನ್ನು ಮಾರ್ಚ್ 2 ರಂದು ಸಿಎಂ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿಯಿಂದ ಧಾರವಾಡ ಐಐಟಿ ಉದ್ಘಾಟನೆ
ಮಾರ್ಚ್ 11 ರಂದು ಧಾರವಾಡ ಐಐಟಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮಾರ್ಚ್ 11 ರಂದು ಮುಮ್ಮಿಗಟ್ಟಿಯಲ್ಲಿ ಐಐಟಿ ಧಾರವಾಡ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಜೋಶಿ ಶುಕ್ರವಾರ ಧಾರವಾಡದಲ್ಲಿ ತಿಳಿಸಿದರು.
ಮಾರ್ಚ್ 11 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಮತ್ತು ರಾಜ್ಯದಿಂದ ಅನುದಾನಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಭೂಮಿಪೂಜೆ ಮಾಡಲಿದ್ದಾರೆ ಎಂದು ಸಚಿವರು ಹೇಳಿದರು.












Click it and Unblock the Notifications