ಏಪ್ರಿಲ್ 14 ರಂದು ಕರ್ನಾಟಕಕ್ಕೆ ಮೋದಿ: ಎಲೆಲ್ಲಿ ರೋಡ್ ಶೋ? ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್ 07: 2024ರ ಲೋಕಸಭಾ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಮಾಸ್ಟರ್ ಪ್ಲಾನ್ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ಮಹಾ ರಣತಂತ್ರ ರೆಡಿಯಾಗಿದೆ. ಈಗಾಗಲೇ ರಾಜ್ಯದ 28 ಕ್ಷೇತ್ರಗಳ ಫೈಕಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೋದಿ ಮಾಸ್ಟರ್ ಪ್ಲಾನ್ ಹಾಕಿದ್ದಾರೆ.
ಕಳೆದ ಬಾರಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೋಟೆಯಿಂದಲೇ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ರಣಕಹಳೆ ಮೊಳಗಿಸಲಿದ್ದು, ಇದೀಗ ಮತ್ತೆ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಪ್ರಚಾರದ ಅಬ್ಬರ ಶುರುವಾಗಿದ್ದು, ದೇಶಾದ್ಯಂತ ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಏಪ್ರಿಲ್ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರುನಾಡಿಗೆ ಆಗಮಿಸಲಿದ್ದು, ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶವನ್ನು ನಡೆಸಲಿದ್ದಾರೆ. ಅಲ್ಲದೇ ಬೆಂಗಳೂರು ವ್ಯಾಪ್ತಿಯಲ್ಲೂ ಪ್ರಚಾರ ನಡೆಸಲಿರುವ ಪ್ರಧಾನಿ ಮೋದಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ರಾಜ್ಯ ಬಿಜೆಪಿ ಸಜ್ಜಾಗಿದೆ. ಇನ್ನೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಕುರಿತು ರಾಜ್ಯ ಬಿಜೆಪಿಯು ಇಂದು ರೋಡ್ ಮ್ಯಾಪ್ ಅನ್ನು ಸಿದ್ಧಪಡಿಸಲಿದೆ.
ಇನ್ನೂ ಚಿಕ್ಕಬಳ್ಳಾಪುರ ನಡೆಯುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕುರಿತು ಮಾಜಿ ಸಚಿವ ಡಾ. ಕೆ ಸುಧಾಕರ್ ಮಾತನಾಡಿ, ಏಪ್ರಿಲ್ 14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ದೇವನಹಳ್ಳಿ ಬಳಿ ಬಿಜೆಪಿ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಮೊನ್ನೆ ಅಷ್ಟೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಹಲವು ಸರಣಿ ಸಭೆಗಳನ್ನು ಮಾಡಿದ್ದರು.ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳಲ್ಲಿ ಗೆಲ್ಲಲು ರಾಜ್ಯ ಬಿಜೆಪಿ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿ ದೆಹಲಿಗೆ ತೆರಳಿದ್ರು, ಇದೀಗ ರಾಜ್ಯಕ್ಕೆ ಮೋದಿ ಎಂಟ್ರಿ ಕೊಡುತ್ತಿದ್ದು, ರಾಜ್ಯ ಬಿಜೆಪಿ ನಾಯಕರಲ್ಲಿ ಮತ್ತಷ್ಟು ಉತ್ಸುಹ ತಂದಿದೆ.
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಏಪ್ರಿಲ್ 14 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ. ಪ್ರಧಾನಿ ಮೋದಿ ಅವರು ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪಕ್ಷದ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ರೋಡ್ ಶೋ ಹಾಗೂ ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications