ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಜನವರಿ 12ರಂದು ಕರ್ನಾಟಕಕ್ಕೆ ನರೇಂದ್ರ ಮೋದಿ ಆಗಮನ

|
Google Oneindia Kannada News

ಬೆಳಗಾವಿ, ಡಿಸೆಂಬರ್ 15; ಭಾರತದ ಪ್ರಧಾನಿ ನರೇಂದ್ರ ಮೋದಿ ಜನವರಿ ತಿಂಗಳಿನಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಒಂದು ದಿನದ ಭೇಟಿಗಾಗಿ ಅವರು ರಾಜ್ಯಕ್ಕೆ ಬರಲಿದ್ದಾರೆ.

ಎರಡು ದಿನಗಳ 'ರಾಷ್ಟ್ರೀಯ ಯುವಜನೋತ್ಸವ' ಉದ್ಘಾಟನೆಗೆ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.

Yuva Budget 2023 : ಯುವ ನೀತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ: ಕೌಶಲ್ಯ ತರಬೇತಿಗೆ ಒತ್ತು Yuva Budget 2023 : ಯುವ ನೀತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ: ಕೌಶಲ್ಯ ತರಬೇತಿಗೆ ಒತ್ತು

ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದ ಜನ್ಮದಿನ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ಈ ಅಂಗವಾಗಿ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದನ್ನು ಮೋದಿ ಉದ್ಘಾಟಿಸಲಿದ್ದಾರೆ.

Breaking; ಬೆಳಗಾವಿ-ದೆಹಲಿ ವಿಮಾನ ಮತ್ತೆ ಆರಂಭಿಸುವಂತೆ ಒತ್ತಾಯ Breaking; ಬೆಳಗಾವಿ-ದೆಹಲಿ ವಿಮಾನ ಮತ್ತೆ ಆರಂಭಿಸುವಂತೆ ಒತ್ತಾಯ

PM Narendra Modi To Visit Karnataka On January 12

ಬೆಳಗಾವಿಯ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ ಸುಮಾರು 6 ಸಾವಿರಕ್ಕೂ ಹೆಚ್ಚು ಯುವಕ/ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಗಡಿ ವಿವಾದ: 'ಸುಪ್ರೀಂ' ತೀರ್ಪು ಅಂತಿಮ ಎಂದ ಅಮಿತ್ ಶಾ ಗಡಿ ವಿವಾದ: 'ಸುಪ್ರೀಂ' ತೀರ್ಪು ಅಂತಿಮ ಎಂದ ಅಮಿತ್ ಶಾ

ಈ ಕಾರ್ಯಕ್ರಮದ ಅಂಗವಾಗಿ ಪುಸ್ತಕ ಮೇಳವನ್ನು ಸಹ ಸಿಪಿಇಡಿ ಕ್ರೀಡಾಂಗಣ, ಸರ್ದಾರ್ ಹೈಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಗಣ್ಯರಿಗಾಗಿ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ.

ಪ್ರತಿ ವರ್ಷ ಒಂದು ರಾಜ್ಯದಲ್ಲಿ ಆಯೋಜನೆ; ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಪ್ರತಿ ವರ್ಷ ಒದೊಂದು ರಾಜ್ಯದಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಜನವರಿ 12ರಂದು ಆಯೋಜನೆ ಮಾಡುತ್ತದೆ.

ಕೇಂದ್ರ ಸರ್ಕಾರ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜನವರಿ 12 ಅನ್ನು ರಾಷ್ಟ್ರೀಯ ಯುವ ದಿನವಾಗಿ ಘೋಷಣೆ ಮಾಡಿದೆ. ರಾಷ್ಟ್ರೀಯ ಯುವಜನೋತ್ಸವಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸುತ್ತಾರೆ. ಈ ಬಾರಿ ಕರ್ನಾಟಕದ ಬೆಳಗಾವಿಯಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಯುವಜನೋತ್ಸವದ ಮೂಲಕ ದೇಶದ ಯುವಕರನ್ನು ಒಟ್ಟುಗೂಡಿಸುವುದು, ಯುವಕರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುವುದು ಉದ್ದೇಶವಾಗಿದೆ. ಯುವಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅನನ್ಯತೆಯ ವಿನಿಮಯಕ್ಕೆ ಇದು ವೇದಿಕೆಯಾಗಿದೆ.

English summary
Prime Minister of India Narendra Modi will visit Belagavi, Karnataka on January 12, 2023 to inaugurate two day national youth conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X