• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಓಬವ್ವ ಜಯಂತಿ; ವೀರ ವನಿತೆಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

|
Google Oneindia Kannada News

ಬೆಂಗಳೂರು, ನವೆಂಬರ್ 11; ಒನಕೆ ಓಬವ್ವ ಜಯಂತಿ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವೀರ ವನಿತೆಗೆ ನಮನವನ್ನು ಸಲ್ಲಿಸಿದ್ದಾರೆ. ನವೆಂಬರ್ 11ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಓಬವ್ವ ಜಯಂತಿ ಆಚರಣೆ ಮಾಡಲಾಗತ್ತಿದೆ.

ಗುರುವಾರ ಕನ್ನಡದಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, "ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಹೆಣ್ಣುಮಕ್ಕಳ ರಕ್ಷಣೆಗೆ ಸಿದ್ಧಗೊಂಡಿದೆ ಓಬವ್ವ ಪೊಲೀಸ್ ಪಡೆ ಬೆಂಗಳೂರಲ್ಲಿ ಹೆಣ್ಣುಮಕ್ಕಳ ರಕ್ಷಣೆಗೆ ಸಿದ್ಧಗೊಂಡಿದೆ ಓಬವ್ವ ಪೊಲೀಸ್ ಪಡೆ

"ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ" ಎಂದು ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ನರೇಂದ್ರ ಮೋದಿ ಮನ್ ಕೀ ಬಾತ್; 82ನೇ ಸಂಚಿಕೆ ಮುಖ್ಯಾಂಶಗಳು ನರೇಂದ್ರ ಮೋದಿ ಮನ್ ಕೀ ಬಾತ್; 82ನೇ ಸಂಚಿಕೆ ಮುಖ್ಯಾಂಶಗಳು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11ರಂದು ಆಚರಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರವು ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸುವಂತೆ ಆದೇಶಿಸಿತ್ತು.

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಆದ್ದರಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ.

ಯುದ್ಧ ಮುಗಿಯುವವರೆಗೂ ಶಸ್ತ್ರಾಸ್ತ್ರ ಕೆಳಗಿಳಿಸಬೇಡಿ: ನರೇಂದ್ರ ಮೋದಿಯುದ್ಧ ಮುಗಿಯುವವರೆಗೂ ಶಸ್ತ್ರಾಸ್ತ್ರ ಕೆಳಗಿಳಿಸಬೇಡಿ: ನರೇಂದ್ರ ಮೋದಿ

ಜಯಂತಿ ಆಚರಣೆ ಮುಂದೂಡಿಕೆ; ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒನಕೆ ಓಬವ್ವ ಜಯಂತಿಯನ್ನು ಮುಂದೂಡಿ ಆದೇಶವನ್ನು ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಆಚರಣೆ ಮುಂದೂಡಲಾಗಿದೆ.

ಈ ಕುರಿತು ಬುಧವಾರ ಆದೇಶವನ್ನು ಹೊರಡಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ (1) ಸರ್ಕಾರದ ಆದೇಶದಂತೆ ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ನವೆಂಬರ್ 11ರಂದು ಜಿಲ್ಲಾ ಮತ್ತು ತಾಲೂಕುಗಳಲ್ಲಿ ಆಚರಿಸುವಂತೆ ಉಲ್ಲೇಖಿತ (2)ರ ಪತ್ರದಲ್ಲಿ ತಿಳಿಸಲಾಗಿರುತ್ತದೆ.

ಆದರೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ದಿನಾಂಕ 11/11/2021ರಂದು ಮಾಡಲು ಉದ್ದೇಶಿಸಿರುವ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ವಿಷಯವನ್ನು ನಿಮಗೆ ತಿಳಿಸಿದೆ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿದೆ.

ಚಿತ್ರದುರ್ಗದ ಇತಿಹಾಸದಲ್ಲಿ ಒನಕೆ ಓಬವ್ವರನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಕರ್ನಾಟಕದ ವೀರ ವನಿತೆಯರ ಸಾಲಿನಲ್ಲಿ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಸಾಲಿನಲ್ಲಿ ಓಬವ್ವರನ್ನು ಸಹ ಪರಿಗಣಿಸಲಾಗುತ್ತದೆ.

ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನವರ ಹೆಂಡತಿಯಾಗಿದ್ದರು.
ಚಿತ್ರದುರ್ಗ ಕೋಟೆಯ ಮೇಲೆ ಹೈದರಾಲಿಯ ಸೇನೆ ಹಠತ್ತಾಗಿ ಆಕ್ರಮಣ ಮಾಡಿದ್ದರು. ಆಗ ಓಬವ್ವ ತನ್ನ ಒನಕೆಯನ್ನು ಅಸ್ತ್ರ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದರು.

ಕೋಟೆಯ ಕಿಟಿಕಿಯಿಂದ ತೂರಿ ಬಂದ ನೂರಾರು ಶತ್ರುಗಳನ್ನು ಒನಕೆಯಿಂದ ಜಜ್ಜಿ, ಹೊಡೆದು ಹೊಡೆದು ಕೊಂದಿದ್ದರು. ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದದ್ದನ್ನು ಗಮನಿಸಲಾಗದೇ ಶತ್ರುವಿನ ಕತ್ತಿಗೆ ಬಲಿಯಾಗಿದ್ದರು.

ಚಿತ್ರದುರ್ಗ ಕೋಟೆಯಲ್ಲಿರುವ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಓಬವ್ವನ ಕ್ರೀಡಾಂಗಣ ಎಂದು ಹೆಸರಿಡಲಾಗಿದೆ.

ಮುಖ್ಯಮಂತ್ರಿಗಳ ಟ್ವೀಟ್; ಒನಕೆ ಓಬವ್ವ ಜಯಂತಿ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 'ನಾಡಿನ ಸಮಸ್ತ ಜನತೆಗೆ ಒನಕೆ ಓಬವ್ವ ಜಯಂತಿಯ ಹಾರ್ದಿಕ ಶುಭಕಾಮನೆಗಳು. ಓಬವ್ವನವರ ಶೌರ್ಯ, ಮಾತೃಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು' ಎಂದು ಹೇಳಿದ್ದಾರೆ.

   Pakistan ಹಾಗು China ಭಾರತದ ಆಮಂತ್ರಣವನ್ನು ನಿರಾಕರಿಸಿದ್ದೇಕೆ | Oneindia Kannada

   ಬಸವರಾಜ ಬೊಮ್ಮಾಯಿ ಸಂಪುಟದ ಸಚಿವರು, ಪ್ರತಿಪಕ್ಷಗಳ ನಾಯಕರು ಸಹ ಒನಕೆ ಓಬವ್ವ ಜಯಂತಿ ಹಿನ್ನಲೆಯಲ್ಲಿ ಟ್ವೀಟ್ ಮೂಲಕ ವೀರ ವನಿತೆಗೆ ನಮನಗಳನ್ನು ಸಲ್ಲಿಸಿದ್ದಾರೆ.

   English summary
   Prime minister of India Narendra Modi tweeted on the day of Obavva Jayanthi on November 11, 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X