ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುನಾಡ ಪ್ರವಾಸದ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

|
Google Oneindia Kannada News

ಬೆಂಗಳೂರು, ಜೂನ್ 20: ಕರ್ನಾಟಕಕ್ಕೆ ಎರಡು ದಿನ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯಕ್ಕೆ ಆಗಮಿಸುವುದಕ್ಕೂ ಮುನ್ನ ಕನ್ನಡದಲ್ಲಿ ತಮ್ಮ ಪ್ರವಾಸದ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.

"ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಬೆಂಗಳೂರಿ ಐಐಎಸ್ ಸಿ ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು," ಎಂದು ಪ್ರಧಾನಿ ಮೋದಿ ತಮ್ಮ ಮೊದಲ ಟ್ವೀಟ್ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.

PM Modi Karnataka Visit Live: 12 ಗಂಟೆಗೆ ಬೆಂಗಳೂರಿಗೆ ಮೋದಿ ಆಗಮನPM Modi Karnataka Visit Live: 12 ಗಂಟೆಗೆ ಬೆಂಗಳೂರಿಗೆ ಮೋದಿ ಆಗಮನ

ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಪ್ರವಾಸದಕ್ಕೆ ಸಂಬಂಧಿಸಿದಂತೆ ಸ್ವತಃ ಪ್ರಧಾನಿಯೇ ಮತ್ತೆರೆಡು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನ 27 ಸಾವಿರ ಕೋಟಿ ಯೋಜನೆ ಉದ್ಘಾಟನೆ:

"ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ," ಎಂದು ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

PM Narendra Modi Tweets in Kannada ahead of his Visit to Karnataka

ಸಂಜೆ ವೇಳೆ ಮೈಸೂರಿಗೆ ಪ್ರಧಾನಿ ಮೋದಿ:

Recommended Video

ಕಾಲ್ ಮಾಡಿ ಕರಣ್ ಜೋಹರ್ ಗೆ ಬೆದರಿಸಿದ ಬಿಷ್ಣೊಯ್ ತಂಡ!! | OneIndia Kannada

"ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ," ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

English summary
PM Narendra Modi Tweets in Kannada about his tour information ahead of his Visit to Karnataka. He is attending events in bengaluru and mysuru on june 20, 21. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X