ಕರ್ನಾಟಕ ಚುನಾವಣೆ: ಮತದಾನ ಮಾಡುವಂತೆ ಯುವ ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ

ಬೆಂಗಳೂರು, ಮೇ.10: ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಇಂದು ರಾಜ್ಯದ ಮತದಾರರು ಸಂಜೆ 6 ಗಂಟೆಯವರೆಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದಲ್ಲಿ 224 ಕ್ಷೇತ್ರಗಳಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಮತದಾನದ ದಿನದಂದು ಮೊದಲ ಬಾರಿಗೆ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ಯುವ ಜನತೆಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕರ್ನಾಟಕದ ಜನರು, ವಿಶೇಷವಾಗಿ ಯುವಜನರು ಮತ್ತು ಮೊದಲ ಬಾರಿಗೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಗೊಳಿಸಬೇಕು" ಎಂದು ಹೇಳಿದ್ದಾರೆ.

narendra modi

ರಾಜ್ಯದಲ್ಲಿ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಜನಾದೇಶವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಕರ್ನಾಟಕದಲ್ಲಿ 11.17 ಲಕ್ಷ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಒಟ್ಟು 41,000 ಅರ್ಜಿದಾರರು ಏಪ್ರಿಲ್ 1 ರ ವೇಳೆಗೆ 18 ವರ್ಷಕ್ಕೆ ಕಾಲಿಟ್ಟಿದ್ದಾರೆ. ಇವರೆಲ್ಲಾ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ಚುನಾವಣಾ ಆಯೋಗ ಈಗಾಗಲೇ ಮತದಾನ ಮಾಡಲು ರಜೆ ಘೋಷಿಸಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನವಾಗುವ ನಿರೀಕ್ಷೆ ಇದೆ.

2018 ರ ವಿಧಾನಸಭಾ ಚುನಾವಣೆಯಲ್ಲಿ, ಕರ್ನಾಟಕವು ಶೇಕಡಾ 71.13 ರಷ್ಟು ಮತದಾನವನ್ನು ಮಾಡಿದೆ. ಇದು 1952 ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ 37,777 ಸ್ಥಳಗಳಲ್ಲಿ 58,545 ಮತಗಟ್ಟೆಗಳಲ್ಲಿ ಒಟ್ಟು 5.3 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. ಇವರಲ್ಲಿ 12,15,920 ಮಂದಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವೆ ತ್ರಿಕೋನ ಹೋರಾಟ ನಡೆಯಲಿದೆ. ಮೇ 13 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+