ಕಾರ್ತಿಕ ಮಾಸದಲ್ಲಿ ಧರ್ಮಸ್ಥಳಕ್ಕೆ ಮೋದಿ: ಭಕ್ತರಿಗೆ ದೇವಾಲಯದ ಮನವಿ

Posted By:
Subscribe to Oneindia Kannada
   ಅಕ್ಟೋಬರ್ 29ರಂದು ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ | ಭಕ್ತರಿಗೆ ಪ್ರವೇಶ ನಿಷೇಧ | Oneindia Kannada

   ಧರ್ಮಸ್ಥಳ, ಅ 25: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಡಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಧರ್ಮಸ್ಥಳಕ್ಕೆ ಭಾನುವಾರ (ಅ 29) ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯೊಂದನ್ನು ಹೊರಡಿಸಿದೆ.

   In Pics : ಮೋದಿ ಸ್ವಾಗತಕ್ಕೆ ಸಿಂಗಾರಗೊಂಡ ಧರ್ಮಸ್ಥಳ

   ಅ 29ಕ್ಕೆ ಬೆಳಗ್ಗೆ ದೇವಾಲಯಕ್ಕೆ ಮೋದಿ ಭೇಟಿ ನೀಡುತ್ತಿರುವುದರಿಂದ, ಶನಿವಾರ (ಅ 28) ಮಧ್ಯಾಹ್ನ ಎರಡು ಗಂಟೆಯಿಂದ, ಅ 29 ಮಧ್ಯಾಹ್ನ ಎರಡು ಗಂಟೆಯವರೆಗೆ ಭಕ್ತಾದಿಗಳಿಗೆ ಪ್ರವೇಶವಿರುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

   PM Narendra Modi visit to Dharmathala temple, restriction to devotees

   ಧರ್ಮಸ್ಥಳಕ್ಕೆ ಆಗಮಿಸುವ ಮೋದಿಗೆ ತುಳುನಾಡಿನ ಶೈಲಿಯಲ್ಲಿ ಸ್ವಾಗತ

   ಭದ್ರತೆಯ ದೃಷ್ಟಿಯಿಂದ ನಿರ್ಬಂಧ ಹೇರಬೇಕಾಗಿರುವುದರಿಂದ, 24ಗಂಟೆ ದೇವಾಲಯಕ್ಕೆ ಪ್ರವೇಷ ನಿಷಿದ್ದಿಸಲಾಗಿದೆ, ಭಕ್ತರು ಸಹಕರಿಸಬೇಕಾಗಿ ದೇವಾಲಯ ಮನವಿ ಮಾಡಿದೆ.

   ಕಾರ್ತಿಕ ಮಾಸ ಮತ್ತು ಅ30 ರಂದು ಎರಡನೇ ಕಾರ್ತಿಕ ಸೋಮವಾರವಿರುವುದರಿಂದ ದೇವಾಲಯದಲ್ಲಿ ಭಾರೀ ಜನಸಂದಣಿ ಇರುವುದು ವಾಡಿಕೆ. ಹಾಗಾಗಿ, ಒಂದು ದಿನ ಮುಂಚಿತವಾಗಿ ದೇವಾಲಯಕ್ಕೆ ಬರುವವರಿಗೆ ಅನಾನುಕೂಲ ಆಗದಿರಲು, ದೇವಾಲಯ ಭಕ್ತರಲ್ಲಿ ಮನವಿ ಮಾಡಿಕೊಂಡಿದೆ.

   ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಬೆಳಗ್ಗೆ 11ಕ್ಕೆ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಮೋದಿ ಬಹಿರಂಗ ಸಭೆ ನಡೆಸಲಿದ್ದಾರೆ.

   ತುಳುನಾಡಿನ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತ ನಡೆಸಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬ್ಯಾಂಕುಗಳ ಸಹಭಾಗಿತ್ವದಲ್ಲಿ ರಾಜ್ಯದ 12 ಲಕ್ಷ ಸ್ವಸಹಾಯ ಸಂಘಗಳ ಸದಸ್ಯರಿಗೆ ಜನ್ ಧನ್ ಯೋಜನೆ ಅನ್ವಯ ಬ್ಯಾಂಕ್ ಖಾತೆಗಳನ್ನು ತೆರೆದಿದ್ದು, ಈ ಸದಸ್ಯರಿಗೆ ರೂಪೇ ಕಾರ್ಡ್ ಗಳನ್ನು ಪ್ರಧಾನಿ ಈ ಸಂದರ್ಭದಲ್ಲಿ ವಿತರಿಸಲಿದ್ದಾರೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Prime Minister Narendra Modi visit to Dharmathala Manjunathaswamy temple on Oct 29th. Restriction to devotees to enter temple from 2PM (Oct 28) to 2Pm (Oct 29)

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ