PM Modi Karnataka Visit : ಮಾರ್ಚ್‌ನಲ್ಲಿ ರಾಜ್ಯಕ್ಕೆ 3 ಬಾರಿ ಮೋದಿ ಆಗಮನ! ಬಿಜೆಪಿ ಲೆಕ್ಕಾಚಾರವೇನು?
ವಿಧಾನಸಭಾ ಚುನಾವಣೆ ಹಿನ್ನಲೆ ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ 3 ಬಾರಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರು,ಮಾರ್ಚ್ 2: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನ ಜೋರಾಗಿ ನಡೆಸುತ್ತಿವೆ. ಈಗಾಗಲೇ ಸರ್ಕಾರದ ವಿರುದ್ದ 40% ಕಮಿಷನ್ ಆರೋಪ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದು, ಹೈಕಮಾಂಡ್ ನಾಯಕರನ್ನ ರಾಜ್ಯಕ್ಕೆ ಹೆಚ್ಚಾಗಿ ಕರೆಸುವ ಮೂಲಕ ಬಿಜೆಪಿ ಅಲೆಯನ್ನ ಸೃಷ್ಟಿಸಲು ರಾಜ್ಯ ಬಿಜೆಪಿ ನಾಯಕರು ಪ್ಲಾನ್ ಮಾಡಿದ್ದಾರೆ.
ಈಗಾಗಲೇ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಭಿವೃದ್ದು ಕಾರ್ಯಕ್ರಮದ ನೆಪದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಮತ್ತೆ ಮಾರ್ಚ್ ತಿಂಗಳಿನಲ್ಲಿ ಬರೋಬ್ಬರಿ ಮೂರು ಬಾರಿ ಆಗಮಿಸಲಿದ್ದಾರೆ.

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ಇನ್ನೂ ಈ ತಿಂಗಳ 25ರಂದು ದಾವಣಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರ ಮೆಡಿಕಲ್ ಆಸ್ಪತ್ರೆ ಉದ್ಘಾಟನೆಗೆ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟಿರುವ ಬಿಜೆಪಿ, ಮಂಡ್ಯ ಜಿಲ್ಲೆಯಲ್ಲಿ ಮೈಸೂರು ಬೆಂಗಳೂರು ದಶಪಥ ಹೆದ್ದಾರಿಯನ್ನ ಉದ್ಘಾಟಿಸಲು ಬಿಜೆಪಿ ಪ್ಲಾನ್ ಮಾಡಿದೆ. ಒಂದು ಕಡೆ ಜೆಡಿಎಸ್ ಭದ್ರಕೋಟೆಯಗಿರುವ ಮಂಡ್ಯದಲ್ಲಿ ಕಮಲ ಅರಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ಲಾನ್ ನಡೆಸಿದ್ದು, ಈ ಹಿಂದೆ ಮಂಡ್ಯ ಮೆಗಾ ಡೈರಿ ಲೋಕಾರ್ಪಣೆ ಹಾಗೂ ಚುನಾವಣಾ ಪ್ರಚಾರ ಕಾರ್ಯಕ್ರಮ ಬಿಜೆಪಿ ಸಮಾವೇಶ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೆಡಿಸ್ ಭದ್ರಕೋಟೆಯನ್ನು ಬೇಧಿಸಲು ಮಂಡ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಹಳೆ ಮೈಸೂರು ಭಾಗದಲ್ಲಿ ನಾಯಕತ್ವ ಗಟ್ಟಿಸಿ, ಬಿಜೆಪಿ ಪರವಾದ ಅಲೆ ಜೋರು ಮಾಡವ ತಂತ್ರಗಾರಿಕೆಯನ್ನ ಹೈಕಮಾಂಡ್ ಹಾಕಿಕೊಂಡಿದೆ. ಚುನಾವಣಾ ಸಿದ್ದತೆಯಲ್ಲಿರುವ ಕಾರ್ಯಕರ್ತರನ್ನ ಹೆಚ್ಚಾಗಿ ಸೆಳೆಯುವ ಮೂಲಕ, ಬಿಜೆಪಿ ಅಭ್ಯರ್ಥಿ ಗಳು ಗೆಲ್ಲುವಂತ ನಿಟ್ಟಿನಲ್ಲಿ ಪೂರಕವಾದ ವಾತಾವರಣ ನಿರ್ಮಾಣ ಮಾಡವ ಸಿದ್ದತೆಯನ್ನ ನಡೆಸಲಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಮತಬೇಟೆ ಮಾಡುವ ಮೂಲಕ ವಿವಿಧ ಸಮುದಾಯ ಗಳನ್ನು ಸೆಳೆದು ರಾಜ್ಯದಲ್ಲಿ ಬಿಜೆಪಿ ವರ್ಚಸ್ಸು ಜಾಸ್ತಿ ಮಾಡುವುದು ಹೈಕಮಾಂಡ್ ಪ್ಲಾನ್ ಹಾಕಿಕೊಂಡಿದೆ ಎನ್ನಲಾಗಿದೆ.












Click it and Unblock the Notifications