ಕುಮಾರಣ್ಣನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮೋದಿ
ಬೆಂಗಳೂರು, ಡಿಸೆಂಬರ್ 16 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಕುಟುಂಬದವರ ಜೊತೆ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡರು.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಶುಭಾಶಯ ಸಲ್ಲಿಸಿದ್ದಾರೆ. ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಇಂದು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿ ಅವರು ಇದ್ದು, ಕುಟುಂಬದವರ ಜೊತೆ ಸರಳವಾಗಿ ಹುಟ್ಟು ಹಬ್ಬ ಆಚರಿಸಿಕೊಂಡರು.

ಇಂದು ಅಭಿಮಾನಿಗಳು, ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಿಲ್ಲ. ಬೆಳಗಾವಿ ಅಧಿವೇಶನದ ಬಳಿಕ ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಬಹುದಾಗಿದೆ.
ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿ ಫ್ಲೆಕ್ಸ್, ಬ್ಯಾನರ್ ಹಾಕಿ ಪರಿಸರವನ್ನು ಹಾಳುಮಾಡದಂತೆ ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
Birthday greetings to Karnataka CM Shri @hd_kumaraswamy Ji. Praying for his long and healthy life.
— Narendra Modi (@narendramodi) December 16, 2018
ಸೋಮವಾರ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications