ಕನ್ನಡ ರಾಜ್ಯೋತ್ಸವಕ್ಕೆ ನರೇಂದ್ರ ಮೋದಿ ಶುಭಾಶಯ

Written By: Ramesh
Subscribe to Oneindia Kannada

ಬೆಂಗಳೂರು, ನವೆಂಬರ್. 01 : ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗಿದೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಮೋದಿ ಅವರು ಟ್ವಿಟ್ಟರ್ ನಲ್ಲಿ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದು ವಿಶೇಷವಾಗಿದೆ. [ಕರ್ನಾಟಕ ಏಕೀಕರಣಕ್ಕೆ 60ರ ಸಂಭ್ರಮ, ರಾಜ್ಯದ ಎಲ್ಲೆಡೆ ಕನ್ನಡ ರಥ]

PM Narendra Modi wished people of Karnataka on Kannada Rajyotsava

"ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PM Narendra Modi wished people of Karnataka on Kannada Rajyotsava day by tweet in Kannada.
Please Wait while comments are loading...