ರೊದ್ದಂ ನರಸಿಂಹ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಬೆಂಗಳೂರು, ಡಿಸೆಂಬರ್ 15: ಖ್ಯಾತ ವಿಜ್ಞಾನಿ, ಪದ್ಮ ವಿಭೂಷಣ ಪುರಸ್ಕೃತ ರೊದ್ದ ನರಸಿಂಹ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ರೊದ್ದಂ ನರಸಿಂಹ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ರೊದ್ದಂ ನರಸಿಂಹ ಅವರು ಭಾರತದ ಅತ್ಯುತ್ತಮ ಜ್ಞಾನ ಮತ್ತು ವಿಚಾರಣೆಯ ಸಂಪ್ರದಾಯವನ್ನು ನಿರೂಪಿಸಿದ್ದಾರೆ. ಅವರು ಅತ್ಯುತ್ತಮ ವಿಜ್ಞಾನಿಯಾಗಿ, ಭಾರತದ ಪ್ರಗತಿಗೆ ವಿಜ್ಞಾನ ಮತ್ತು ನಾವೀನ್ಯತೆಯ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ಕುರಿತಂತೆ ಉತ್ಸುಕರಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

''ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು'' ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಿಸಿದ್ದಾರೆ.
''ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂಬುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
''ಖ್ಯಾತ ಏರೋಸ್ಪೇಸ್ ವಿಜ್ಞಾನಿ, ಪದ್ಮ ವಿಭೂಷಣ ಪ್ರೊಫೆಸರ್ ರೊದ್ದಂ ನರಸಿಂಹ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಭಾರತೀಯ ವಿಜ್ಞಾನಕ್ಕೆ ಅವರ ಕೊಡುಗೆ ಅಪಾರ. ಭಾರತದ ಸರ್ಕಾರದ ಬಾಹ್ಯಾಕಾಶ ಆಯೋಗ, ಪ್ರಧಾನಮಂತ್ರಿಗಳ ವಿಜ್ಞಾನ ಸಲಹಾ ಮಂಡಳಿ ಮತ್ತು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಗಳಲ್ಲಿನ ಅವರ ಸೇವೆಯನ್ನು ಸದಾ ಸ್ಮರಿಸಲಾಗುತ್ತದೆ'' ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
''ನಾಡಿನ ಹೆಸರಾಂತ ವಿಜ್ಞಾನಿ,ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ರೊದ್ದಂ ನರಸಿಂಹ ಅವರ ನಿಧನ ಅಪಾರ ನೋವನ್ನುಂಟು ಮಾಡಿದೆ. ವೈಜ್ಞಾನಿಕ ಕ್ಷೇತ್ರದಲ್ಲಿ ರೊದ್ದಂ ನರಸಿಂಹ ಅವರ ಕೊಡುಗೆ ಅವಿಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications