Get Updates
Get notified of breaking news, exclusive insights, and must-see stories!

ಮೋದಿ ಜನಪ್ರಿಯತೆ ಎಕ್ಸ್‌ಪೈರಿ ಡೇಟ್ ಮುಗಿದಿದೆ: ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಎಂದ ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕಡಿಮೆಯಾಗುತ್ತಿದ್ದು, ಕಾಂಗ್ರೆಸ್ ಕಡೆ ಮತದಾರರು ಒಲವು ತೋರಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಸಾಧನೆ, ಪಂಚ ರಾಜ್ಯಗಳ ಚುನಾವಣೆ ಕುರಿತಂತೆ ಸರಣಿ ಟ್ವೀಟ್ ಮಾಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ಪ್ರಮುಖ ಪಾತ್ರ ವಹಿಸಲಿದೆ ಎಂದಿರುವ ಅವರು, ಬಿಜೆಪಿ ಇದನ್ನು ಸಹಿಸದೆ ಅಪಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

PM Narendra Modis popularity has expired, Congress Will Win in Telangana: CM Siddaramaiah

ಸಿದ್ದರಾಮಯ್ಯ ಹೇಳಿದ್ದೇನು?

ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, "ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭಯದಲ್ಲಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ." ಎಂದು ಆರೋಪಿಸಿದ್ದಾರೆ.

ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವಾಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನೂ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ನರೇಂದ್ರಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ಟವೇ ಹೊರತು ಲಾಭ ಇಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮೇಲೆ ಮತದಾರರ ವಿಶ್ವಾಸ

ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ಗಳಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಖಾರ್ಜುನ ಖರ್ಗೆ ಅವರು ತಮ್ಮ ಭಾಷಣಗಳಲ್ಲಿ "ಕರ್ನಾಟಕ ಮಾದರಿ" ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ಬಿಆರ್‌ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣುತ್ತಿದ್ದು ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೋದಿ ಜನಪ್ರಿಯತೆ ಎಕ್ಸ್ ಪೈರಿ ಡೇಟ್ ಮುಗಿದಿದೆ!

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಇದು ಮತ್ತೆ ಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂದು ಪಕ್ಷದ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿದ್ದು ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ ಎಂದಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಕಾಂಗ್ರೆಸ್ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು ತಡವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಬಿಆರ್‌ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್‌ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ, ಬಿಆರ್‌ಎಸ್ ಪಕ್ಷಗಳ ಸವಾಲನ್ನು ಎದುರಿಸಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವನ್ನು ದಾಖಲಿಸಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 3ರಂದು ಫಲಿತಾಂಶ

ಐದು ರಾಜ್ಯಗಳಲ್ಲಿ ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಮತದಾನ ಮುಕ್ತಾಯವಾಗಿದ್ದು, ತೆಲಂಗಾಣದಲ್ಲಿ ನವೆಂಬರ್ 30ರಂದು ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+