BS Yediyurappa: ಯಡಿಯೂರಪ್ಪ ಅರೆಸ್ಟ್ ಆಗ್ತಾರಾ: ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು, ಜೂನ್ 13: ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು. ಇದೀಗ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅರೆಸ್ಟ್ ಆಗ್ತಾರಾ ಎಂಬ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್ಗೆ ಉತ್ತರ ನೀಡಬೇಕಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕು ಎಂದು ಇದೆ. ಹೀಗಾಗಿ ಯಡಿಯೂರಪ್ಪನವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ರೆ ಸಿಐಡಿಯವರು ಯಡಿಯೂರಪ್ಪರನ್ನ ಬಂಧಿಸ್ತಾರೆ. ಈ ಬಗ್ಗೆ ನಾನು ಏನೂ ಹೇಳಲು ಆಗದು ಎಂದು ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಅವರು ದೂರಿದ್ದ ಸಂತ್ರಸ್ತೆಯ ಮೇ 26 ರಂದು ಮೃತಪಟ್ಟಿದ್ದರು.
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ನಗರದ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ, ಅಪಾಯ ಮನಗಂಡ ಯಡಿಯೂರಪ್ಪ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ಗೂ ಉತ್ತರ ನೀಡಿರುವ ಅವರು, ಜೂನ್ 17 ರಂದು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.












Click it and Unblock the Notifications