Pocso Case: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ
ಬೆಂಗಳೂರು , ಫೆಬ್ರವರಿ 28: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಿನ್ನೆಯಷ್ಟೇ(ಫೆಬ್ರವರಿ 27) ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಹುಟ್ಟು ಹಬ್ಬದ ಮರುದಿನವೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಮಾರ್ಚ್ 15 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಬಿಎಸ್ ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದೆ.
ಇಂದು(ಶುಕ್ರವಾರ) ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ಕೋರ್ಟಿಗೆ ಸಲ್ಲಿಸಿದ ಆರಂಭ ಪಟ್ಟಿಯನ್ನು ಪರಿಗಣಿಸಿತು. ಬಳಿಕ ನ್ಯಾಯಾಲಯವು ಮಾರ್ಚ್ 15 ರಂದು ಕೋರ್ಟಿಗೆ ಖುದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ಖುದ್ದು ಹಾಜರಾಗಿ ಎಂದು ಸಮನ್ಸ್ ಜಾರಿ ಮಾಡಿದೆ. ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗೆ ಪೋಕ್ಸೋ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ.

ಕೆಲ ದಿನಗಳ ಹಿಂದಷ್ಟೇ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆಕರ್ನಾಟಕ ಹೈಕೋರ್ಟ್ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ಹಾಜರಾಜುವಂತೆ ದಿನಾಂಕ ನಿಗದಿಪಡಿಸಿದೆ.
ಈ ಪ್ರಕರಣ ಹಿನ್ನೆಲೆ ಏನು?
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಆ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಈ ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಈ ಪ್ರಕರಣದ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಸಂತ್ರಸ್ತೆಯ ತಾಯಿ ಹೇಳಿದ್ದೇನು?
ನಾನು ಸಹಾಯ ಕೇಳಿಕೊಂಡು ಯಡಿಯೂರಪ್ಪ ಅವರ ಮನೆಗೆ ಹೋದ ಸಂದರ್ಭದಲ್ಲಿ ತನ್ನ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು. ಇನ್ನೂ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅಲ್ಲದೇ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡಿದ್ದು, ಈ ಪ್ರಕರಣದ ಕುರಿತು ಹೋರಾಟ ನಡೆಸುತ್ತಲೇ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ 2024ರ ಮೇ ತಿಂಗಳಲ್ಲಿ ಮೃತಪಟ್ಟಿದ್ದರು.












Click it and Unblock the Notifications