POCSO Case: ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
B.S.Yediyurappa: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌ವೈ ಮತ್ತು ಸಂತ್ರಸ್ತೆ ಪರ ವಕೀಲರ ವಾದ-ಪ್ರತಿವಾದವನ್ನು ಹೈಕೋರ್ಟ್ ಆಲಿಸಿದ್ದು, ಇದೀಗ ಕೊನೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ನೀಡಿದೆ. ಮುಂದಿನ ಆದೇಶದವರೆಗೂ ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ಆದೇಶ ನೀಡಿದ್ದು, ಮುಂದಿನ ಎರಡು ವಾರ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದಾಖಲಾದ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ. ಅಲ್ಲದೆ, ಬಲ್ಲವಂತದ ಕ್ರಮ ಬೇಡ ಅಂತಲೂ ತಿಳಿಸಿದೆ.

ಕೋರ್ಟ್‌ನ ಮುಂದಿನ ವಿಚಾರಣೆವರೆಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಆದೇಶ ಹೊರಡಿಸಿದೆ. ಇದರಿಂದ ಸಿಐಡಿ ಅಧಿಕಾರಿಗಳಿಂದ ಬಂಧನದ ಭೀತಿಯಲ್ಲಿ ಯಡಿಯೂರಪ್ಪನವವರಿಗೆ ತಾತ್ಕಾಲಿಕ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಇನ್ನು ಜೂನ್ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕೆಂದು ಯಡಿಯೂರಪ್ಪ ಅವರಿಗೆ ಕೋರ್ಟ್ ಸೂಚಿಸಿದ್ದು, ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ.
POCSO case against former Karnataka CM and senior BJP leader B.S. Yediyurappa | Coercive proceedings of arrest and detention are kept on hold till the next date of hearing. The petitioner to appear before jurisdictional police on June 17.
— ANI (@ANI) June 14, 2024
ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದ್ದು, ಪೋಕ್ಸೊ ಕೇಸ್‌ನಲ್ಲಿ ಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ, ಮತ್ತೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
"ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್‌ಮೇಲ್ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ" ಎಂದು ಹೇಳಿದರು.
2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್ 14ರಂದು ಪೋಕ್ಸೊ ಕಾಯ್ದೆಯಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್ ದಾಖಲಾದ 3 ತಿಂಗಳ ಬಳಿಕ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ












Click it and Unblock the Notifications