Social Media: ನಿಮ್ಮ ಸೋಷಿಯಲ್‌ ಮೀಡಿಯಾ ಮೇಲೆ ಪೊಲೀಸ್‌ ಕಣ್ಣು: ಹುಷಾರ್‌!

ನೀವು ಫೇಸ್‌ಬುಕ್‌, ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಮ್‌ನತಂಹ ಸೋಷಿಯಲ್‌ ಮೀಡಿಯಾಗಳನ್ನು ಬಳಸುತ್ತಿದ್ದರೆ. ಇನ್ಮುಂದೆ ಈ ಸೋಷಿಯಲ್‌ ಮೀಡಿಯಾವನ್ನು ಬಳಸುವ ಮುಂಚೆ ಎಚ್ಚರಿಕೆಯಿಂದ ಇರಿ. ಯಾಕೆಂದರೆ ರಾಜ್ಯ ಸರ್ಕಾರವು ಹೊಸ ಕಾನೂನನ್ನು ಜಾರಿ ಮಾಡಿದ್ದು. ಸೋಷಿಯಲ್‌ ಮೀಡಿಯಾದಲ್ಲಿ ನೀವು ಸಣ್ಣ ತಪ್ಪು ಮಾಡಿದರೂ ಸಂಕಷ್ಟ ಎದುರಾಗಲಿದೆ. ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಸಮೀರ್ ವಿಡಿಯೋ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಸರ್ಕಾರದ ಹೊಸ ನಿಯಮ ಜಾರಿಗೆ ತಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ. ಅಷ್ಟಕ್ಕೂ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಹೊಸ ನಿರ್ಧಾರವೇನು ಎನ್ನುವ ವಿವರ ಇಲ್ಲಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರವು ಸೋಷಿಯಲ್‌ ಮೀಡಿಯಾದ ಮೇಲೆ ಕಣ್ಣಿಡುವುದಕ್ಕೆ ಮುಂದಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ತೆಗೆಯುವುದಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಜಿ. ಪರಮೇಶ್ವರ್‌ ಅವರು, ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನದ ಉಭಯ ಸದನಗಳ ಕಾರ್ಯಕಲಾಪಗಳಲ್ಲಿ ಭಾಗವಹಿಸಿದೆ.

Police are watching your social media Beware

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಹೆಚ್ಚು ಒತ್ತು ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲೂ ಸಾಮಾಜಿಕ ಜಾಲತಾಣ ನಿಗಾ ಘಟಕ ಸ್ಥಾಪಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದೆ ಎಂದು ಹೇಳಿದ್ದಾರೆ.

ಸೈಬರ್ ಅಪರಾಧಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಪ್ರತ್ಯೇಕ ಘಟಕವನ್ನು ಸ್ಥಾಪಿಸಿ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಜಿಪಿ) ಹುದ್ದೆಯನ್ನು ಪ್ರತ್ಯೇಕವಾಗಿ ಸೃಷ್ಟಿ ಮಾಡಲಾಗಿದೆ. ಡಿಜಿ ಅವರ ಕೆಳಗೆ ಎಡಿಜಿಪಿ, ಐಜಿಪಿ ಹಾಗೂ 7 ಜನ ಎಸ್‌ಪಿಗಳು ಸೇರಿದಂತೆ, ಇತರೆ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ. ಸೈಬರ್ ಅಪರಾಧಗಳ ಬಗ್ಗೆ ದೂರುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Police are watching your social media Beware

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತಿಯ ಕ್ರಮ ಕೈಗೊಂಡು ಸಾರ್ವಜನಿಕರ ನೆಮ್ಮದಿಯನ್ನು ಕಾಪಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್ (ಟ್ವೀಟರ್), ಇನ್‌ಸ್ಟಾಗ್ರಾಮ್‌, ಯೂಟ್ಯೂಬ್ ಚಾನೆಲ್‍ಗಳ ಮೇಲೆ ನಿಗಾವಹಿಸಲು ರಾಜ್ಯಾದ್ಯಂತ ಪ್ರತ್ಯೇಕ ಸಾಮಾಜಿಕ ಜಾಲತಾಣ ನಿಗಾ ಘಟಕಗಳನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಪ್ರತಿ ಪೊಲೀಸ್ ಠಾಣೆಗಳಲ್ಲೂ ಪ್ರಾರಂಭಿಸಿ ಸೂಕ್ತ ತರಬೇತಿ ಪಡೆದ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಜನರ ಸೋಷಿಯಲ್‌ ಮೀಡಿಯಾದ ಮೇಲೆ ಕಣ್ಣಿರಿಸಲಾಗಿದೆ.

ಈ ಘಟಕವು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯೂಟ್ಯೂಬ್‌ಗಳಲ್ಲಿ ಪ್ರಸಾರವಾಗುವ ಪ್ರಚೋದನಕಾರಿ ಸಂದೇಶಗಳ/ ಸುಳ್ಳು ಸುದ್ದಿಗಳ/ ದ್ವೇಷ ಭಾಷಣಗಳ ಮೇಲೆ ಸಮಾಜದ ಸಾಮರಸ್ಯ ಹಾಳು ಮಾಡುವಂತವರ ಮೇಲೆ ನಿರಂತರವಾಗಿ ನಿಗಾ ವಹಿಸಲಾಗುತ್ತಿದೆ. ಸುಳ್ಳು ಸುದ್ದಿಗಳ ಬಗ್ಗೆ ಕೆಎಸ್‌ಪಿ ಫ್ಯಾಕ್ಟ್‌ಚೆಕ್‌ ಆ್ಯಪ್ ಮೂಲಕ ಫ್ಯಾಕ್ಟ್‌ಚೆಕ್‌ ಮಾಡಿಸಿ ನೈಜ ಮಾಹಿತಿಯನ್ನು ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಹಂಚಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.

ಈ ರೀತಿ ನಿಗಾ ವಹಿಸುವ ಸಂದರ್ಭದಲ್ಲಿ ಕಂಡುಬರುವ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಪೋಸ್ಟ್‌ಗಳನ್ನು ಕೂಡಲೇ ಅಧಿಕಾರಿಗಳ ಹಾಗೂ ರಾಜ್ಯ ಸಾಮಾಜಿಕ ಜಾಲತಾಣ ನಿಗಾ ಘಟಕದ ಗಮನಕ್ಕೆ ತರಲಾಗುತ್ತದೆ. ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಪೊಲೀಸ್ ಇಲಾಖೆಯು ಯಾವುದೇ ಹೆಚ್ಚುವರಿ ಹಣವನ್ನು ಭರಿಸುತ್ತಿಲ್ಲ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೂ ಸಹ ವಹಿಸಿರುವುದಿಲ್ಲ ಎಂದೂ ಅವರು ವಿವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+