ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೊಬೈಲ್‌ ಕೇಳಿದ ಪೊಲೀಸರು: ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 03: ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನವಾಗಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, 'ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.

'ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ' ಎಂದು ಆರೋಪಿದ್ದಾರೆ.

Police asked the mobile phone of the businessman who committed suicide: Siddaramaiah

'ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಾಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು' ಎಂದು ಹೇಳಿದ್ದಾರೆ.

'ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ?' ಎಂದು ಪ್ರಶ್ನಿಸಿದ್ದಾರೆ.

ಉದ್ಯಮಿ ಪ್ರದೀಪ್‌ ಆತ್ಮಹತ್ಯೆ: ಸಿದ್ದರಾಮಯ್ಯ ಹಂಚಿಕೊಂಡ ವಿಡಿಯೊದಲ್ಲಿ ಕುಟುಂಬಸ್ಥರು ಹೇಳಿದ್ದೇನು?ಉದ್ಯಮಿ ಪ್ರದೀಪ್‌ ಆತ್ಮಹತ್ಯೆ: ಸಿದ್ದರಾಮಯ್ಯ ಹಂಚಿಕೊಂಡ ವಿಡಿಯೊದಲ್ಲಿ ಕುಟುಂಬಸ್ಥರು ಹೇಳಿದ್ದೇನು?

'ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ?' ಎಂದು ಕೇಳಿದ್ದಾರೆ.

'ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು.ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿಯವರ ಹಣದಾಸೆಗೆ ಇಂಥಾ ಇನ್ನೆಷ್ಟು ಜೀವಗಳು ಬಲಿಯಾಗಬೇಕು?' ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

English summary
Opposition leader Siddaramaiah has demanded that MLA Arvind Limbavali be arrested in connection with businessman Pradeep's suicide case
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X