ಡಿ.23ರಂದು ನಡೆಯಬೇಕಿದ್ದ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಡಿಸೆಂಬರ್ 10 : 2ನೇ ಬಾರಿಗೆ ಕರ್ನಾಟಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್ ಇಲಾಖೆ ಶೀಘ್ರದಲ್ಲಿಯೇ ಪರೀಕ್ಷೆಯ ಹೊಸ ದಿನಾಂಕವನ್ನು ಪ್ರಕಟಿಸಲಿದೆ.

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ನವೆಂಬರ್ 25ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿತ್ತು. ಡಿಸೆಂಬರ್ 23ರಂದು ಮರು ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿತ್ತು.

Police Constable Recruitment paper leak case : Re exam postponed

ಆದರೆ, ಸೋಮವಾರ ಸಂಜೆ ಪೊಲೀಸ್ ಇಲಾಖೆ ಮರು ಪರೀಕ್ಷೆಯ ದಿನಾಂಕವನ್ನು 2ನೇ ಬಾರಿಗೆ ಮುಂದೂಡಿದೆ. ಡಿಸೆಂಬರ್ 23ರಂದು ಪರೀಕ್ಷೆ ನಡೆಯುತ್ತಿಲ್ಲ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ.

ಕಿಂಗ್ ಪಿನ್ ಬಂಧನ : ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಕಿಂಗ್‌ಪಿನ್ ಶಿವಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 116 ಆರೋಪಿಗಳನ್ನು ನವೆಂಬರ್ 25ರಂದು ಬಂಧಿಸಿ, ಪ್ರಶ್ನೆ ಪತ್ರಿಕೆ, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ನವೆಂಬರ್ 25ರಂದು ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ತುಮಕೂರಿನಲ್ಲಿ ಜೆರಾಕ್ಸ್ ಮಾಡಿಸಿ ಸಕಲೇಶಪುರದಲ್ಲಿ 6 ರಿಂದ 8 ಲಕ್ಷಕ್ಕೆ ಮಾರಾಟ ಮಾಡಲಾಗುತ್ತಿತ್ತು. ಸಿಸಿಬಿ ಪೊಲೀಸರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+