ಪೊಲೀಸ್ ಇಲಾಖೆ ಅಂತರ ಜಿಲ್ಲಾ ವರ್ಗಾವಣೆ; ಸಚಿವರು ಕೊಟ್ಟ ಮಾಹಿತಿ
ಬೆಂಗಳೂರು, ಡಿಸೆಂಬರ್ 13; ವರ್ಗಾವಣೆಗಾಗಿ ಕಾದಿರುವ ಕರ್ನಾಟಕದ ಪೊಲೀಸ್ ಸಿಬ್ಬಂದಿಗೆ ಮಾಹಿತಿಯೊಂದಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 'ಸಿ' ಮತ್ತು 'ಡಿ' ಗ್ರೂಪಿನ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆ ಕುರಿತು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ವಿಧಾನಸಭೆಯಲ್ಲಿ ಮಂಡ್ಯದ ಶಾಸಕ ರವಿಕುಮಾರ ಗೌಡ (ಗಣಿಗ) ಕೇಳಿದ್ದ ಪ್ರಶ್ನೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಉತ್ತರ ನೀಡಿದ್ದಾರೆ. ಶಾಸಕರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿ ಮತ್ತು ಡಿ ಗ್ರೂಪಿನ ಸಿಬ್ಬಂದಿಗಳಿಗೆ ಕೆಸಿಎಸ್‌ಆರ್ ನಿಯಮ 16ಎ ಅಂತರ್ ಜಿಲ್ಲಾ ವರ್ಗಾವಣೆ ಮಾಡಲು ನಿಯಮ ಇರುವ ಮಾನದಂಡಗಳೇನು? ಎಂದು ಪ್ರಶ್ನಿಸಿದ್ದರು.

ಗೃಹ ಸಚಿವರ ಉತ್ತರ; ಗೃಹ ಸಚಿವರು ತಮ್ಮ ಉತ್ತರದಲ್ಲಿ ಸರ್ಕಾರದ ಅಧಿಸೂಚನೆ ದಿನಾಂಕ 9/3/2023ರಲ್ಲಿ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ಕ್ಕೆ ನಿಯಮ 16ಎ ಅನ್ನು ಸೇರ್ಪಡೆಗೊಳಿಸಲಾಗಿದೆ. ಅದರ ಪ್ರಕಾರ ಪತಿ-ಪತ್ನಿ ಇಬ್ಬರೂ
ಸರ್ಕಾರಿ ಸೇವೆಯಲ್ಲಿ ಇರುವ ಪ್ರಕರಣಗಳಿಗೆ ಮಾತ್ರ ಗುಂಪು ಸಿ ಅಥವಾ ಡಿ ಸೇವೆಗೆ ಸೇರಿದ ಒಬ್ಬ ಸದಸ್ಯರನ್ನು ಮತ್ತು ಈ ಅಡಿಯಲ್ಲಿ ಪತಿ ಅಥವಾ ಪತ್ನಿ ಇವರಲ್ಲಿ ಯಾರಾದರೊಬ್ಬರಿಂದ ಕೋರಿಕೆ ಬಂದಲ್ಲಿ ಹುದ್ದೆಯ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕದಲ್ಲಿನ ಅದೇ ಕೇಡರಿನ ಸಮಾನ ಹುದ್ದೆಗೆ ಷರತ್ತಿಗೆ ಒಳಪಟ್ಟು ವರ್ಗಾವಣೆ ಮಾಡಬಹುದಾಗಿರುತ್ತದೆ ಎಂದು ಹೇಳಿದ್ದಾರೆ.
ಆದರೆ ಅದಕ್ಕೆ ಒಬ್ಬ ಸರ್ಕಾರಿ ನೌಕರನು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಕನಿಷ್ಟ 7 ವರ್ಷ ಸೇವೆಯನ್ನು ಪೂರ್ಣಗೊಳಿಸಿರಬೇಕು. ವರ್ಗಾಯಿಸಬೇಕಾದ ಘಟಕ ಅಥವಾ ಸ್ಥಳದಲ್ಲಿ ಮಂಜೂರಾದ ಹುದ್ದೆಯು ಖಾಲಿರತಕ್ಕದ್ದು. ಅಂತಹ ವರ್ಗಾವಣೆಯನ್ನು ಒಂದು ಕೇಡರ್‌ನಿಂದ ಮತ್ತೊಂದು ಕೇಡರಿಗೆ ಮಾಡತಕ್ಕದ್ದಲ್ಲ. ವರ್ಗಾವಣೆಯನ್ನು ಸರ್ಕಾರಿ ನೌಕರನ ಕೋರಿಕೆ ಮೇಲೆ ಅವರ ಜೇಷ್ಠತೆಯನ್ನು ಮಾಡಿರುವುದರಿಂದ ವರ್ಗಾವಣೆಗೊಂಡ ಘಟಕದಲ್ಲಿನ ಕೇಡರ್‌ನ ಕೊನೆಯ ವ್ಯಕ್ತಿಯ ಕೆಳಗಿರಿಸತಕ್ಕದ್ದು. ವರ್ಗಾವಣೆಯನ್ನು ಸರ್ಕಾರಿ ನೌಕರನ ಸೇವೆಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಮಾಡತಕ್ಕುದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶಾಸಕರು ನೂತನ ವರ್ಗಾವಣೆ ನೀತಿಯಿಂದಾಗಿ ಈ ಸಿಬ್ಭಂದಿಗಳಿಗೆ ತೊಂದರೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಬಂದಿದ್ದಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂದು ಕೇಳಿದ್ದರು. ಸಚಿವರು ಉತ್ತರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ/ ಸಿಬ್ಬಂದಿಗಳಿಗೆ ಅಂತರ್ ವಲಯ/ ಜಿಲ್ಲೆಗೆ ವರ್ಗಾವಣೆ ಅವಕಾಶ ಕಲ್ಪಿಸುವ ಸಲುವಾಗಿ ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ವರ್ಗಾವಣೆ) (ವಿಶೇಷ) ನಿಯಮಗಳು 2022ನ್ನು ರಚಿಸಲಾಗಿದ್ದು ಸದರಿ ನಿಯಮವು ದಿನಾಂಕ 22/02/2023ರಿಂದ ಜಾರಿಗೆ ಬಂದಿರುತ್ತದೆ.
ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆಯಲ್ಲಿ ಪಾರದರ್ಶಕತೆಯನ್ನು ತರುವ ಸಲುವಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರತ್ಯೇಕವಾದ ವರ್ಗಾವಣೆ ಪೋರ್ಟಲ್‌ನ್ನು ರೂಪಿಸಲಾಗಿರುತ್ತದೆ. ಈ ಪೋರ್ಟಲ್‌ನಲ್ಲಿ ಅಧಿಕಾರಿ/ ಸಿಬ್ಬಂದಿಗಳಿಂದ ಅರ್ಜಿಗಳನ್ನು
ಸ್ವೀಕರಿಸಲಾಗುತ್ತಿರುತ್ತದೆ ಎಂದು ಹೇಳಿದ್ದಾರೆ.
ಇಲಾಖೆಯ ವರ್ಗಾವಣೆ ಪೋರ್ಟ್‌ಲ್‌ನಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ಅಧಿಕಾರಿ/ ಸಿಬ್ಬಂದಿಗಳು ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾವಣೆ ಕೋರಿ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಸದರಿ ಅರ್ಜಿಗಳನ್ನು ಒಂದೇ ಬಾರಿಗೆ ಪರಿಗಣಿಸಿದ್ದಲ್ಲಿ ಕೆಲವು ಘಟಕಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಿಕ್ತಸ್ಥಾನಗಳು ಉಂಟಾಗಿ ಇಲಾಖೆಯ ಕಾರ್ಯ ನಿರ್ವಹಣೆಗೆ ತೊಂದರೆಯುಂಟಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ವರ್ಗಾವಣಾ ಅರ್ಜಿಗಳನ್ನು ಇಲಾಖೆಯ ಆಡಳಿತ ನಿರ್ವಹಣೆ ಹಾಗೂ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದ ರೀತಿಯಲ್ಲಿ ಪರಿಗಣಿಸಬೇಕಾಗಿರುತ್ತದೆ ಎಂದು ವಿವರಿಸಿದ್ದಾರೆ.
ಶಾಸಕರು ಈ ಹಿಂದೆ ಪತಿ-ಪತ್ನಿ ಪ್ರಕರಣದಡಿ ಎರಡೂವರೆ ವರ್ಷ ಖಾಯಂ ಪೂರ್ವ ಸೇವಾ ಪೂರ್ಣಗೊಳಿಸಿದ ಸಿಬ್ಬಂದಿಗಳಿಗೆ ವರ್ಗಾವಣೆ ಮಾಡುವ ನಿಯಮಾವಳಿಯನ್ನು 7 ವರ್ಷಗಳಿಗೆ ಹೆಚ್ಚಳ ಮಾಡಿದ್ದು, ಇದರಿಂದ ಸಿಬ್ಬಂದಿಗಳಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?, ಬಂದಿದ್ದಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ಎಂದು ಕೇಳಿದ್ದರು.
ಸಚಿವರು ಪತಿ-ಪತ್ನಿ ಪ್ರಕರಣದಡಿ ಈ ಹಿಂದೆ ನಿಗಧಿಪಡಿಸಲಾಗಿದ್ದ ಕನಿಷ್ಠ ಸೇವಾ ಅವಧಿಯನ್ನು 07 ವರ್ಷಗಳಿಗೆ ಹೆಚ್ಚಳ ಮಾಡಿ ನಿಗಧಿಪಡಿಸಿರುವ ಸಂಬಂಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಮತ್ತು ಜನ ಪ್ರತಿನಿಧಿಗಳಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲಿಸಲಾಗುತ್ತಿರುತ್ತದೆ ಎಂದು ಹೇಳಿದ್ದಾರೆ. ಅಲ್ಲದೇ ಏಳು ವರ್ಷ ಸೇವಾವಧಿ ಪೂರೈಸಿದವರಿಗೆ ಮಾತ್ರ ವರ್ಗಾವಣೆಗೆ ಅವಕಾಶ ಕಲ್ಪಿಸಿರುವ ಅವಧಿಯನ್ನು ಮಾರ್ಪಾಡು ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ಹೇಳಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications