ರಾಜ್ಯದಲ್ಲಿ ರ‍್ಯಾಲಿಗೆ ಅನುಮತಿ ನಿರಾಕರಿಸಿದ ಪೊಲೀಸ್ ಇಲಾಖೆ
ಬೆಂಗಳೂರು ಜೂ. 17: ಪ್ರವಾದಿ ಮೊಹಮ್ಮದರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿಯ ಇಬ್ಬರು ನಾಯಕರ ವಿರುದ್ಧ ದೇಶವ್ಯಾಪಿ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸಿ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಮತ್ತು ಭಜರಂಗದಳ ಆಯೋಜಿಸಿದ್ದ ರ‍್ಯಾಲಿಗಳಿಗೆ ಪೊಲೀಸ್ ಇಲಾಖೆ ಅನುಮತಿ ನೀಡಿಲ್ಲ. ಹೀಗಾಗಿ ಎರಡು ಸಂಘಟನೆಗಳಿಗೆ ರ‍್ಯಾಲಿ ನಡೆಸಲಾಗಿಲ್ಲ ಎಂದು ತಿಳಿದು ಬಂದಿದೆ.
ಗುರುವಾರ ಮಂಗಳೂರಿನ ಪಿವಿಎಸ್ ವೃತ್ತದಲ್ಲಿ ಎರಡು ಸಂಘಟನೆಗಳು ರ‍್ಯಾಲಿ ನಡೆಸುವುದಾಗಿ ಸಾಮಾಜಿಕ ಜಾಲತಾಣ ಮೂಲಕ ತಿಳಿಸಿದ್ದವು. ಆದರೆ ಪ್ರತಿಭಟನೆ ಇಲ್ಲವೇ ರ‍್ಯಾಲಿ ನಡೆಸಲು ಅನುಮತಿ ಕೋರಿ ಇಲಾಖೆಗೆ ಯಾವುದೇ ಪತ್ರಗಳ ಬಂದಿಲ್ಲ. ನಾವು ಯಾವುದೇ ಪತ್ರಗಳನ್ನು ಸ್ವೀಕರಿಸಿಲ್ಲ. ಪ್ರತಿಭಟನೆ ಕುರಿತು ಯಾವ ಸಂಘಟನೆಗಳಿಗೂ ಅನುಮತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಹೀಗಾಗಿ ಎರಡು ಸಂಘಟನೆಗಳಿಂದ ರ‍್ಯಾಲಿ ನಡೆಸಲು ಸಾಧ್ಯವಾಗಿಲ್ಲ.
ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ದೇಶದ ನಾನಾ ಕಡೆಗಳಲ್ಲಿ ಉಗ್ರ ಪ್ರತಿಭಟನೆ, ಕಲ್ಲು ತೂರಾಟ, ರಸ್ತೆ ತಡೆದು ಸಂಚಾರಕ್ಕೆ ಸಮಸ್ಯೆ ಉಂಟು ಮಾಡಲಾಗಿತ್ತು. ಕೆಲವೆಡೆ ಹಿಂಸಾಚಾರಕ್ಕೆ ತಿರುಗಿದ್ದ ಪ್ರತಿಭನೆಯಲ್ಲಿ ಲಾಠಿ ಚಾರ್ಜ ಮಾಡಿ ಜನರನ್ನು ಚದರಿಸಲಾಗಿತ್ತು. ಇದರ ಬೆನ್ನಲ್ಲೇ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಿಗಿ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಿದ್ದರು. ಪ್ರತಿಭಟನೆ, ರ‍್ಯಾಲಿಗಳಿಂದ ಕಾನೂನು ಸುವ್ಯವಸಗೆ ಧಕ್ಕೆ ಆಗದಂತೆ ನೋಡಿಕೊಳ್ಳಿ ಎಂದಿದ್ದರು. ಈ ಕಾರಣಕ್ಕೆ ಮಂಗಳೂರಿನಲ್ಲಿ ರ‍್ಯಾಲಿ ನಡೆಸಲು ಅನುಮತಿ ದೊರೆತಿಲ್ಲ ಎನ್ನಲಾಗಿದೆ.

ಜಿಲ್ಲಾಧಿಕಾರಿಗಳ ಮೂಲಕ ಮನವಿ
ದೇಶಗಳಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡನೀಯ. ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಇದರಿಂದ ಸಾರ್ವಜನಿಕರಿಗೆ, ನಾಗರಿಕರಿಗೆ ತೊಂದರೆ ಆಗಲಿದೆ ಎಂದು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ವಿಶ್ವ ಹಿಂದೂ ಪರಿಷದ್ ಸದಸ್ಯ ಶರಣ್ ಎಂಬುವವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮಾಹಿತಿ ಪ್ರಕಾರ ಪ್ರವಾದಿ ವಿರುದ್ಧ ಹೇಳಿಕೆ ನೀಡಿದವರ ವಿರುದ್ಧ ಮಂಗಳೂರಿನಲ್ಲಿ ಸಹ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಚಿಂತನೆಯಲ್ಲಿವೆ.

ಈ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಸ್ಲಿಂಮ ಮುಖಂಡರ ಜತೆಗೆ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
Recommended Video
ಅಲ್ಲದೇ ಧಾರ್ಮಿಕ ಮತ್ತು ಕೋಮು ಸಂಘರ್ಷ ವಿಚಾರದಲ್ಲಿ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಅದರಲ್ಲೂ ಮಂಗಳೂರು ಪ್ರದೇಶ ಹೆಚ್ಚು ಸೂಕ್ಷ್ಮ ಪ್ರದೇಶ ಎನ್ನಲಾಗುತ್ತದೆ. ಈ ಜಿಲ್ಲೆಗಳು ಕಳೆದ ಒಂದು ವರ್ಷದಲ್ಲಿ ಸುಮಾರು 120ಕ್ಕೂ ಅಧಿಕ ಕೋಮು ಸಂಘರ್ಷಗಳಿಗೆ ಸಾಕ್ಷಿಯಾಗಿದೆ ಎಂದು ಗಮನಾರ್ಹ ಸಂಗತಿಯಾಗಿದೆ.












Click it and Unblock the Notifications