ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಲವೆಡೆ ಹೆದ್ದಾರಿ ತಡೆದು ಪ್ರತಿಭಟನೆ: ಯಲಹಂಕದಲ್ಲಿ ಪ್ರತಿಭಟನಾಕಾರರ ಬಂಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 6: ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ದೆಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ದೇಶದಾದ್ಯಂತ ಶನಿವಾರ 'ಚಕ್ಕಾ ಜಾಮ್' ಹೆದ್ದಾರಿ ಮತ್ತು ರಸ್ತೆ ತಡೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಯಲಹಂಕ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸುತ್ತಮುತ್ತಲಿನ ಪ್ರಮುಖ ಹೆದ್ದಾರಿಗಳಲ್ಲಿ ತಡೆಯೊಡ್ಡಿರುವ ರೈತರ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಇಂದು ಬೃಹತ್ ಪ್ರತಿಭಟನೆ: ರಾಜ್ಯದಲ್ಲಿ ಹೆದ್ದಾರಿ ತಡೆ ಎಲ್ಲೆಲ್ಲಿ?ಇಂದು ಬೃಹತ್ ಪ್ರತಿಭಟನೆ: ರಾಜ್ಯದಲ್ಲಿ ಹೆದ್ದಾರಿ ತಡೆ ಎಲ್ಲೆಲ್ಲಿ?

ವಿಜಯಪುರಲ್ಲಿ ಸಿಂದಗಿ ಬೈಪಾಸ್ ಬಳಿ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218ಅನ್ನು ಬಂದ್ ಮಾಡಿ ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಹಸಿರು ಸೇನೆ, ಪ್ರಾಂತ ರೈತ ಸಂಘಟನೆ, ಸಿಐಟಿಯು, ಅಖಿಲ ಭಾರತ ಕಿಸಾನ್ ಸಭಾ, ಎಐಡಿಎಸ್‌ಒ, ಎಐಯುಟಿಯುಸಿ ಮುಂತಾದ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

Police Detain Protesters Agitators Outside Yelahanka Police Station Against Farm Laws

ಹುನಗುಂದ ಪಟ್ಟಣದ ಹೊರವಲಯದಲ್ಲಿನ ಚಿತ್ರದುತರ್ಗ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಮಂಡ್ಯ, ಚಿಕ್ಕಮಗಳೂರು, ಹಿರೇಬಾಗೇವಾಡಿ ಟೋಲ್ ಮುಂತಾದ ಕಡೆ ಬೃಹತ್ ಪ್ರತಿಭಟನೆಗಳು ನಡೆದಿವೆ.

Recommended Video

ಉತ್ತರಾಖಂಡ ದುರ್ಘಟನೆಯ ಬಗ್ಗೆ ಮೊದಲೇ ಸೂಚನೆ ಇತ್ತಾ? | Oneindia Kannada

English summary
Police detained agitators who were protesting outside Yelahanka police station against farm laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X