ಗೃಹ ಲಕ್ಷ್ಮೀ ಯೋಜನೆ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿರುವುದರ ಹಿಂದೆ ಇದೆ ಲೋಕಸಮರದ ಲೆಕ್ಕಾಚಾರ!?
ಬೆಂಗಳೂರು, ಆಗಸ್ಟ್ 24: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆ ಆಗಸ್ಟ್ 30 ರಂದು ಜಾರಿಯಾಗಲಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀಗೆ ಚಾಲನೆ ನೀಡಲಿದ್ದಾರೆ. ಲಕ್ಷ್ಮೀ ಯೋಜನೆಗೆ ಮೊದಲು ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು. ಆದರೆ, ಇದೀಗ ಈ ಕಾರ್ಯಕ್ರ, ಮೈಸೂರಿಗೆ ಶಿಫ್ಟ್ ಆಗಿದ್ದು, ಹಲವು ಚರ್ಚೆಗೆ ಗ್ರಾಸವಾಗಿದೆ.
ಹೌದು, ವಿಧಾನಸಭಾ ಚುನಾವಣೆಯ ಬಳಿಕ 2024 ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನವನ್ನ ಗೆಲ್ಲಲು ಚಿಂತನೆಯನ್ನ ನಡೆಸಿದ್ದು, ಇತ್ತ ಸಿದ್ದರಾಮಯ್ಯ ಅವರಿಗೆ ತಮ್ಮ ಪುತ್ರನ ರಾಜಕೀಯ ಭವಿಷ್ಯವು ಮುಖ್ಯವಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ವಿಧಾನಸಭಾ ಕ್ಷೇತ್ರವನ್ನ ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ ಅವರ ಭವಿಷ್ಯವನ್ನ ರೂಪಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನದೇ ಆದ ವರ್ಚಸ್ಸನ್ನ ಹೊಂದಿದ್ದು, ಗೃಹ ಲಕ್ಷ್ಮೀ ಯೋಜನೆ ಉದ್ಘಾಟನೆ ಹೆಸರಿನಲ್ಲಿ ಲೋಕಸಮರಕ್ಕೆ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಈಗಾಗಲೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮೇಲೆ ಹಿಡಿತವನ್ನ ಇನ್ನಷ್ಟು ಹೆಚ್ಚಿಸುವ ಸಲುವಾಗಿ ಬೆಳಗಾವಿಯಿಂದ ಮೈಸೂರಿಗೆ ಯೋಜನೆ ಜಾರಿಗೆ ಸಿದ್ದರಾಮಯ್ಯ ತಂತ್ರಗಾರಿಕೆ ನಡೆಸಿದ್ದಾರೆ ಎನ್ನಲಾಗಿದೆ.
ಗೃಹ ಲಕ್ಷ್ಮೀ ಉದ್ಘಾಟನೆ ನೆಪದಲ್ಲಿ ಮೈಸೂರು ಲೋಕಸಭಾ ವಶಕ್ಕೆ ಪಡೆಯಲು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿದ್ದತೆ ನಡೆಸಿದ್ದು, ಉದ್ಘಾಟನೆ ನೆಪದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನ ಕರೆಸುವ ಮೂಲಕ ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಒಂದು ಕಡೆ ಪುತ್ರ ಯತೀಂದ್ರ ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಒಂದುಕಡೆಯಾದ್ರೆ, ಇತ್ತ ಪದೇ ಪದೇ ವಾಗ್ದಾಳಿ ನಡೆಸುವ ಹಾಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನ ಈ ಬಾರೀ ಸೋಲಿಸುವ ಮೂಲಕ ಮೈಸೂರು ಗೆಲ್ಲುವ ತಂತ್ರವನ್ನ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಮೈಸೂರು ಕ್ಷೇತ್ರದಲ್ಲಿ ಈ ಬಾರೀ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕಣಕ್ಕಿಳಿಸಲು ಕುರಿತು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಆದರೆ, ಕರ್ನಾಟಕದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸದಿದ್ದರೆ, ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾತ್ರ ಪಕ್ಕಾ ಎನ್ನಲಾಗಿದ್ದು, ಪುತ್ರ ರಾಜಕೀಯ ಭವಿಷ್ಯಕ್ಕಾಗಿ ಸಿದ್ದರಾಮಯ್ಯ ಗೃಹ ಲಕ್ಷ್ಮೀ ಯೋಜನೆಯನ್ನ ತವರಿನಲ್ಲಿ ಜಾರಿಗೊಳಿಸುವ ಮೂಲಕ ಮತಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications