• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಧ್ಯಪ್ರದೇಶ ಹೈಡ್ರಾಮ; ಕರ್ನಾಟಕಕ್ಕೆ 3 ಕಾಂಗ್ರೆಸ್ ಶಾಸಕರು

|

ಬೆಂಗಳೂರು, ಮಾರ್ಚ್ 04 : ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಪ್ರಯತ್ನ ನಡೆಸಿದೆ. ಕಾಂಗ್ರೆಸ್ ಶಾಸಕರುನ್ನು ಹರ್ಯಾಣ ಮತ್ತು ಕರ್ನಾಟಕಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ಪಕ್ಷ ಆರೋಪಿಸಿದೆ.

ಉನ್ನತ ಶಿಕ್ಷಣ ಸಚಿವರಾದ ಜಿತು ಪತ್ವಾರಿ ಈ ಕುರಿತು ಹೇಳಿಕೆ ನೀಡಿದ್ದು, "ನಾಲ್ವರು ಶಾಸಕರನ್ನು ಹರ್ಯಾಣಕ್ಕೆ, ಮೂವರು ಶಾಸಕರನ್ನು ಕರ್ನಾಟಕದ ರೆಸಾರ್ಟ್‌ಗೆ ಕರೆದುಕೊಂಡು ಹೋಗಲಾಗಿದೆ" ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ.

ಆಪರೇಷನ್ ಕಮಲ; ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮ!

ಮಧ್ಯಪ್ರದೇಶದಿಂದ ಸಮಾಜವಾದಿ ಪಕ್ಷದ ಶಾಸಕನನ್ನು ದೆಹಲಿಗೆ ಖಾಸಗಿ ವಿಮಾನದಲ್ಲಿ ಕರೆದುಕೊಂಡು ಹೋಗಲಾಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರ ಜೊತೆ ಹೋಟೆಲ್‌ನಲ್ಲಿ ಇದ್ದಾರೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಜಿತು ಪತ್ವಾರಿ ಹೋಟೆಲ್‌ಗೆ ಮನವೊಲಿಕೆ ಮಾಡಲು ಹೋಗಿದ್ದರು.

ಮತ್ತೆ ಆಪರೇಷನ್ ಕಮಲ; ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ?

"ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಮಾಜಿ ಸಚಿವ ಭೂಪೇಂದ್ರ ಸಿಂಗ್ ನೇತೃತ್ವದಲ್ಲಿ 8 ಕಾಂಗ್ರೆಸ್ ಶಾಸಕರನ್ನು ಬೇರೆ-ಬೇರೆ ರೆಸಾರ್ಟ್‌ಗಳಿಗೆ ಕರೆದುಕೊಂಡು ಹೋಗಲಾಗಿದೆ. ಹರ್ಯಾಣದಲ್ಲಿ 4 ಶಾಸಕರು ಇದ್ದಾರೆ" ಎಂದು ಪತ್ವಾರಿ ಆರೋಪಿಸಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಮಲನಾಥ್ : ಕಾಂಗ್ರೆಸ್

ಮುಖ್ಯಮಂತ್ರಿ ಕಮಲನಾಥ್ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ್ದು, "ಎಲ್ಲವೂ ನಮ್ಮ ನಿಯಂತ್ರಣದಲ್ಲಿಯೇ ಇದೆ. ಶಾಸಕರು ವಾಪಸ್ ಬರುತ್ತಾರೆ" ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ 4 ಶಾಸಕರು ಐಟಿಸಿ ಮೌರ್ಯ ಹೋಟೆಲ್‌ನಲ್ಲಿದ್ದಾರೆ. ಒಬ್ಬ ಕಾಂಗ್ರೆಸ್ ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳನ್ನು ಕರ್ನಾಟಕದ ರೆಸಾರ್ಟ್‌ಗೆ ಕರೆದುಕೊಂಡು ಹೋಗಲಾಗಿದೆ ಎಂದು ಕಾಂಗ್ರೆಸ್ ದೂರಿದೆ.

English summary
Political drama in Madhya Pradesh to topple Kamal Nath government. Congress alleged BJP took 3 MLA's to Karnataka resort.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X