ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ನಿಧನಕ್ಕೆ ಗಣ್ಯರ ಸಂತಾಪ!

ಬೆಂಗಳೂರು, ಡಿ. 29: ವಿಧಾನ ಪರಿಷತ್ ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Recommended Video

      ಧರ್ಮೆ ಗೌಡ ಕಾರ್ ಚಾಲಕ ಪ್ರತಿಕ್ರಿಯೆ| Dharme Gowda Car Driver | Oneindia Kannada

      ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಾಪ: ವಿಧಾನಪರಿಷತ್ ಉಪಸಭಾಪತಿ ಹಾಗೂ ಜೆಡಿಎಸ್ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

      Political Leaders Condolences death of SL Dharmegowda

      ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!

      ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಂತಾಪ: ವಿಧಾನಪರಿಷತ್ ಉಪಸಭಾಪತಿ ಎಸ್. ಧರ್ಮೆಗೌಡರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+