ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆಗೆ ಡಾ. ಡಿ.ವೀರೇಂದ್ರ ಹೆಗ್ಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಹರ್ಷ

|
Google Oneindia Kannada News

ಬೆಂಗಳೂರು, ಜುಲೈ 7: ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ ಜನಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವ ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ವೀರೇಂದ್ರ ಹೆಗ್ಗಡೆ, ಇಳಯರಾಜ, ಪಿ.ಟಿ. ಉಷಾ ರಾಜ್ಯಸಭೆಗೆ ನಾಮನಿರ್ದೇಶನವೀರೇಂದ್ರ ಹೆಗ್ಗಡೆ, ಇಳಯರಾಜ, ಪಿ.ಟಿ. ಉಷಾ ರಾಜ್ಯಸಭೆಗೆ ನಾಮನಿರ್ದೇಶನ

ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ಅವರೊಂದಿಗೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಒಲಿಂಪಿಯನ್ ಅಥ್ಲೀಟ್ ಆಗಿದ್ದ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಖ್ಯಾತ ಚಿತ್ರ ನಿರ್ದೇಶಕ, ಚಿತ್ರ ಸಾಹಿತಿ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

Karnataka Political Leaders Congratulates Veerendra Heggade after nominated to Rajya Sabha

ಅಭಿನಂದನೆ ಸಲ್ಲಿಸಿದ ಆರಗ ಜ್ಞಾನೇಂದ್ರ

ಪ್ರತಿಷ್ಟಿತ ರಾಜ್ಯ ಸಭಾ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಗಳಾದ ಗೌರವಾನ್ವಿತ ವೀರೇಂದ್ರ ಹೆಗ್ಗಡೆ ಯವರನ್ನುಗೃಹ ಸಚಿವ ಆರಗ ಜ್ಞಾನೇಂದ್ರ ರವರು ಅಭಿನಂದಿಸಿದ್ದಾರೆ

ಈ ಕುರಿತು ಹೇಳಿಕೆ ನೀಡಿರುವ, ಗೃಹ ಸಚಿವರು, ಮಾನ್ಯ ಹೆಗ್ಗಡೆಯವರ ನೇಮಕ, ಇಡೀ ರಾಜ್ಯದ ಜನತೆಗೆ ಸಂತಸ ತಂದಿದೆ, ಎಂದಿದ್ದಾರೆ.

ರಾಜ್ಯ ಸಭಾ ನಾಮ ನಿರ್ದೇಶಕ ಸದಸ್ಯರನ್ನಾಗಿ ನೇಮಕ ಮಾಡಿದ ಕೇಂದ್ರ ಸರಕಾರ ವನ್ನೂ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

Karnataka Political Leaders Congratulates Veerendra Heggade after nominated to Rajya Sabha

ವೀರೇಂದ್ರ ಹೆಗ್ಗಡೆ ಯವರ ದೂರದರ್ಶಿತ್ವ ಸಮಾಜಸೇವಾ ಕಾರ್ಯಗಳಿಂದ, ಗ್ರಾಮೀಣ ಜನತೆಯ ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಕಾರ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಿದೆ ಎಂದು ಸಚಿವರು ಹೇಳಿದ್ದಾರೆ. ನೇಮಕಕ್ಕೆ ಕಾರಣರಾದ, ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನೂ ಸಚಿವರು ಅಭಿನಂದಿಸಿದ್ದಾರೆ.

ಪಿ.ಟಿ. ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಪೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳು ಮಾದರಿಯಾಗಿದೆ, ಕಳೆದ ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವೂ ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

"ಇಳಯರಾಜಯವರ ಸೃಜನಶೀಲ ಪ್ರತಿಭೆ ತಲೆಮಾರುಗಳಿಂದ ಜನರನ್ನು ಆಕರ್ಷಿಸಿದೆ. ಅವರ ಗೀತೆಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅವರ ಜೀವನ ಪಯಣ ಕೂಡ ಅಷ್ಟೇ ಸ್ಫೂರ್ತಿದಾಯಕವಾಗಿದೆ. ಅವರು ವಿನಮ್ರ ಹಿನ್ನೆಲೆಯಿಂದ ಬೆಳೆದು ತುಂಬಾ ಸಾಧಿಸಿದ್ದಾರೆ. ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಸಂತೋಷವಾಗಿದೆ. ಸಭೆ" ಎಂದು ಪ್ರಧಾನಿ ಮೋದಿ ಹೇಳಿದರು

Recommended Video

PT Usha ಓಡುವ ಟ್ರ್ಯಾಕ್ ‌ನಿಂದ ಈಗ ರಾಜ್ಯಸಭೆ ಕಡೆಗೆ | *Sports | OneIndia Kannada

English summary
Karnataka Political Leaders including CM Basavaraj Bommai, Araga Jnanendra and other Congratulates Veerendra Heggade after nominated to Rajya Sabha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X