ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಗಣ್ಯರ ಸಂತಾಪ

|
Google Oneindia Kannada News

ಬೆಂಗಳೂರು, ಜುಲೈ 02: ಹಿರಿಯ ವಿಜ್ಞಾನಿ ಹಾಗೂ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಮಂದಿ ಸಂತಾಪ ಸೂಚಿಸಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರು ಇಂದು ನಿಧನರಾಗಿದ್ದಾರೆ, ಒಂದು ವಾರದ ಹಿಂದಷ್ಟೆ ಅವರಿಗೆ ತೀವ್ರ ಹೃದಯಾಘಾತವಾಗಿತ್ತು, ಬಳಿಕ ಮೆದುಳಿಗೆ ಆಮ್ಲಜನಕ ಸರಬರಾಜು ಸಂಪೂರ್ಣ ಸ್ಥಗಿತಗೊಂಡು ಮೆದುಳು ನಿಷ್ಕ್ರಿಯವಾಗುವ ಹಂತಕ್ಕೆ ಹೋಗಿತ್ತು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Breaking: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ Breaking: ವಿಜ್ಞಾನಿ ಹಾಗೂ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು. ತಂದೆ ಆಸೆಯಂತೆಯೆ ಕುಟುಂಬಸ್ಥರು ಅವರ ದೇಹದಾನ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಆರೆಸ್ಸೆಸ್ ತೀವ್ರ ಸಂತಾಪ. ಸಂದೇಶವನ್ನು ಮಾಧ್ಯಮಗಳಲ್ಲಿ ಬಳಸಿಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇವೆ.

ಸುಧೀಂದ್ರ ಹಾಲ್ದೊಡೇರಿ ಅವರ ನಿಧನ ಅತೀವ ದುಖಃ ತಂದಿದೆ. ವಿಜ್ಞಾನಿಯಾಗಿ, ವಿಜ್ಞಾನ ವಿಷಯಗಳ ಅಂಕಣಕಾರರಾಗಿ ಉಪನ್ಯಾಸಕಾರರಾಗಿ ನಾಡಿಗೆ ಅನುಪಮ ಸೇವೆಯನ್ನು ಸಲ್ಲಿಸದ್ದರು. ಸರಳ ಭಾಷೆಯಲ್ಲಿ ವಿಜ್ಞಾನದ ಅಂಶಗಳನ್ನು ಎಂಥವರೂ ಅರ್ಥಮಾಡಿಕೊಳ್ಳಬಹುದಾಗಿ ವಿವರಿಸುತ್ತಿದ್ದ ಸುಧೀಂದ್ರ ಅವರ ನಿಧನದಿಂದ ವಿಜ್ಞಾನ ಬರವಣಿಗೆಯಲ್ಲಿ ನಿರ್ವಾತ ಮೂಡಲಿರುವುದು ನಿಸ್ಸಂಶಯ.

ಅವರು ಸಂಘದ ಹಿತೈಷಿಗಳಾಗಿದ್ದರು. ಸಂಘದ ಕಾರ್ಯಕ್ರಮಗಳಲ್ಲಿಯೂ ಅವರು ಭಾಗವಹಿಸಿದ್ದವರು. ಅವರ ಆತ್ಮಕ್ಕೆ ಸದ್ಗತಿಯನ್ನು ಮತ್ತು ಕುಟುಂಬಕ್ಕೆ ದುಖಃವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪರಮಾತ್ಮನನ್ನು ಪ್ರಾರ್ಥಿಸುತ್ತೇನೆ ಎಂದು ಆರೆಸ್ಸೆಸ್ ನ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾದ ವಿ ನಾಗರಾಜ್ ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 ಯಡಿಯೂರಪ್ಪ ಸಂತಾಪ

ಯಡಿಯೂರಪ್ಪ ಸಂತಾಪ

ಖ್ಯಾತ ವಿಜ್ಞಾನ ಬರಹಗಾರ, ಹಿರಿಯ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಲ್ಹಾದ್ ಜೋಶಿ ಸಂತಾಪ

ವಿಜ್ಞಾನಿ ಸುಧೀಂದ್ರ ಅವರ ನಿಧನಕ್ಕೆ ಪ್ರಲ್ಹಾದ್ ಜೋಶಿ ಸಂತಾಪ ಸೂಚಿಸಿದ್ದಾರೆ. DRDO ಮಾಜಿ ವಿಜ್ಞಾನಿ, ಎಚ್‌.ಎ.ಎಲ್‌ ಸಂಸ್ಥೆಯ ಹಿರಿಯ ನಿವೃತ್ತ ಎಂಜಿನಿಯರ್, ಖ್ಯಾತ ವಿಜ್ಞಾನ ಬರಹಗಾರರಾದ ಶ್ರೀ ಸುಧೀಂದ್ರ ಹಾಲ್ದೊಡ್ಡೇರಿ ಅವರು ನಿಧನರಾಗಿರುವುದು ತುಂಬಾ ನೋವಿನ ಸಂಗತಿ ಎಂದು ಹೇಳಿದ್ದಾರೆ.

 ಅರವಿಂದ ಲಿಂಬಾವಳಿ ಕಂಬನಿ

ಅರವಿಂದ ಲಿಂಬಾವಳಿ ಕಂಬನಿ

ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ , ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಅವರಿಗೆ ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಡಾ . ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾದದ್ದು ತುಂಬಾ ದುರಾದೃಷ್ಟಕರ ಸಂಗತಿ, ಅಭಿನಂದನೆ ಹೇಳಬೇಕಾದ ಕಡೆ ಸಂತಾಪ ಹೇಳಬೇಕಾದ ಸಂಕಟ ಎಂದಿರುವ ಸಚಿವ ಅರವಿಂದ ಲಿಂಬಾವಳಿ, ಕನ್ನಡ ವಿಜ್ಞಾನ ಸಾಹಿತ್ಯಕ್ಕೆ ಸುಧೀಂದ್ರ ಹಾಲ್ದೊಡ್ಡೇರಿ ಅವರ ಕೊಡುಗೆ ಅನನ್ಯವಾದದ್ದು , ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಅವರು ಜನಪ್ರಿಯರಾಗಿದ್ದರು.

Recommended Video

Bengaluru : 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಉದ್ಘಾಟನೆ | Nirmala Sitharaman |Oneindia Kannada
 ಬಿಸಿ ಪಾಟೀಲ್ ಸಂತಾಪ

ಬಿಸಿ ಪಾಟೀಲ್ ಸಂತಾಪ

ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಕೃಷಿ ಸಚಿವ ಬಿಸಿ ಪಾಟೀಲ್ ಸಂತಾಪ ಸೂಚಿಸಿದ್ದು, ಅವರು ವಿಧಿವಶರಾದ ಸುದ್ದಿ ಕೇಳಿ ನೋವಾಗಿದೆ, ದೇವರು ಆತ್ಮಕ್ಕೆ ಶಾಂತಿಯನ್ನು ನೀಡಲಿ, ಕುಟುಂಬ ವರ್ಗ ಹಾಗೂ ಆಪ್ತರಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

English summary
Political Leaders Express Condolence To Former DRDO Scientist Sudhindra Haldodderi Death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X