Get Updates
Get notified of breaking news, exclusive insights, and must-see stories!

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅಗಲಿಕೆಗೆ ಗಣ್ಯರ ಸಂತಾಪ

ಮುಂಬೈ ಫೆಬ್ರವರಿ 6: ಭಾರತದ ಖ್ಯಾತ ಹಿರಿಯ ಗಾಯಕಿ ಹಾಗೂ ಭಾರತ ರತ್ನ ಪುರಸ್ಕೃತರಾದ ಲತಾ ಮಂಗೇಶ್ಕರ್ ನಿಧನರಾಗಿದ್ದು ಸಂಗೀತ ಲೋಕಕ್ಕೆ ತುಂಬಲಾಗದಷ್ಟು ನಷ್ಟವಾಗಿದೆ. ಕಳೆದ ತಿಂಗಳು ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ನಂತರ ಅವರನ್ನು ಜನವರಿ 8 ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ ಅಂತ್ಯದ ವೇಳೆಗೆ, ಅವರ ಸ್ಥಿತಿ ಸ್ವಲ್ಪ ಸುಧಾರಿಸಿತು. ಇದರಿಂದಾಗಿ ಅವರನ್ನು ವೆಂಟಿಲೇಟರ್‌ನಿಂದ ಶಿಫ್ಟ್‌ ಮಾಡಲಾಗಿತ್ತು. ಆದರೆ 4-5 ದಿನಗಳ ನಂತರ ಅವರ ಸ್ಥಿತಿ ಮತ್ತೆ ಹದಗೆಟ್ಟಿತು. ಬಳಿಕ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಗಾನ ಕೋಗಿಲೆ ಲತಾ ಮಂಗೇಷ್ಕರ್ ಅವರ ಅಗಲಿಕೆಗೆ ಕರ್ನಾಟಕ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

ಲತಾ ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಅವರ ನಿವಾಸಕ್ಕೆ ಬೆಳಗ್ಗೆ 11 ಗಂಟೆಯಿಂದ 2.30ರೊಳಗೆ ತರಲಾಗುತ್ತದೆ. ಕುಟುಂಬಸ್ಥರು ಸಂಪ್ರದಾಯಕ್ಕೆ ತಕ್ಕಂತೆ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆ ಸರ್ಕಾರ ಎರಡು ದಿನ ಶೋಕಾಚರಣೆಗೆ ಆದೇಶ ಹೊರಡಿಸಿದೆ. ಲತಾ ಮಂಗೇಶ್ಕರ್ ಅವರ ಅಂತ್ಯ ಸಂಸ್ಕಾರವನ್ನು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದೆ.

ಸಂತಾಪ ಸೂಚಿಸಿದ ಅಬಕಾರಿ ಸಚಿವ ಕೆ ಗೋಪಾಲಯ್ಯ

ಸಂತಾಪ ಸೂಚಿಸಿದ ಅಬಕಾರಿ ಸಚಿವ ಕೆ ಗೋಪಾಲಯ್ಯ

'ಗಾನ ಕೋಗಿಲೆ, ಭಾರತರತ್ನ ಲತಾ ಮಂಗೇಷ್ಕರ್ ವಿಧಿವಶರಾಗಿರುವುದು ಭಾರತೀಯ ಸಂಗೀತಲೋಕದ ಪಾಲಿಗೆ ಎಂದಿಗೂ ತುಂಬಲಾರದ ದೊಡ್ಡ ನಷ್ಟ. ವಿವಿಧ ಭಾಷೆಗಳಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ಲತಾ ಅವರು, ಸಂಗೀತಾಸಕ್ತರ ಪಾಲಿಗೆ ಆರಾಧಕ ಸ್ಪೂರ್ತಿಯಾಗಿದ್ದರು. ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದರು. ಇಂದು ಭೌತಿಕವಾಗಿ ನಮ್ಮನ್ನು ಅಗಲಿದ ಆ ಮಹಾನ್ ಸಾಧಕಿಗೆ ನಮನಗಳನ್ನು ಸಲ್ಲಿಸುತ್ತಾ, ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಪಾರ ಅಭಿಮಾನಿ, ಬಂಧು ಬಳಗಕ್ಕೆ ನೋವು ಸಹಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಸಂತಾಪ ಸೂಚಿಸಿದ ಅಬಕಾರಿ ಸಚಿವ ಕೆ ಗೋಪಾಲಯ್ಯ ಟ್ವೀಟ್ ಮಾಡಿದ್ದಾರೆ.

ನಳಿನ್‍ಕುಮಾರ್ ಕಟೀಲ್ ತೀವ್ರ ಸಂತಾಪ

ನಳಿನ್‍ಕುಮಾರ್ ಕಟೀಲ್ ತೀವ್ರ ಸಂತಾಪ

'ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನವು ಗಾಯನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ' ಎಂದು ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಹಾಡಿದ 'ಏ ಮೇರೆ ದೇಶ್ ಕೆ ವತನ್ ಕೆ ಲೋಗೊ', 'ಲಗ್ ಜಾ ಗಲೇ', 'ಯೇ ಗಲಿಯಾನ್ ಯೇ ಚೌಬಾರಾ', 'ಪ್ಯಾರ್ ಕಿಯಾ ತೊ ಡರ್ನಾ ಕ್ಯಾ', 'ಬಾಹೋನ್ ಮೇ ಚಲೇ ಆವೋ', 'ವೀರ್ ಜರಾ'ದ 'ತೇರೆ ಲಿಯೇ' ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ. ಅಪಾರ ದೇಶಭಕ್ತಿಯನ್ನು ಹೊಂದಿದ್ದ ಅವರು ರಾಷ್ಟ್ರ, ಧರ್ಮಕ್ಕೆ ಹಾಗೂ ಪಕ್ಷಕ್ಕೆ ನೀಡಿದ ಕೊಡುಗೆ ಅಪಾರ ಎಂದು ನೆನಪಿಸಿದ್ದಾರೆ.

ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಅವರು ಹಾಡಿದ್ದಾರೆ. ಭಾರತದ ನೈಟಿಂಗೇಲ್ (ಗಾನ ಕೋಗಿಲೆ) ಎಂದು ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರು ಭಾರತರತ್ನ, ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ ಎಂದು ಅವರು ನೆನಪಿಸಿದ್ದಾರೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಬಂಧುಗಳಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ

ಭಾರತದ ಹೃದಯಗೀತೆ, ಸಪ್ತಸ್ವರಗಳ ಸಾಮ್ರಾಜ್ಞಿ ಆಗಿದ್ದ ಪ್ರಖ್ಯಾತ ಗಾಯಕರು, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರೂ ಭಾರತರತ್ನ ಲತಾ ಮಂಗೇಶ್ಕರ್ ಅವರ ನಿಧನ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರೋಗ್ಯವಾಗಿ ಮನೆಗೆ ಮರಳುತ್ತಾರೆ ಎನ್ನುವ ಸಮಸ್ತ ಭಾರತೀಯರ ನಿರೀಕ್ಷೆಯನ್ನು ಹುಸಿ ಮಾಡಿ ಭಾರತವನ್ನು ಮೌನವಾಗಿಸಿ ತಮ್ಮ ಪಯಣ ಮುಗಿಸಿದ್ದಾರೆ. ಆದರೆ, ಅವರು ಸ್ವರ ತುಂಬಿದ ಸಾವಿರಾರು ಅನರ್ಘ್ಯ ಗೀತೆಗಳ ರೂಪದಲ್ಲಿ ನಮ್ಮ ನಡುವೆ ಅಜರಾಮರವಾಗಿರಲಿವೆ. ಲತಾ ಮಂಗೇಶ್ಕರ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಆಗಲಿಕೆಯನ್ನು ಭರಿಸುವ ಶಕ್ತಿಯನ್ನು ಕುಟುಂಬದವರು, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ

'ಭಾರತದ 'ಗಾನ ಕೋಗಿಲೆ' ಎಂದೇ ಪ್ರಖ್ಯಾತಿ ಪಡೆದಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 13ನೇ ವಯಸ್ಸಿಗೆ ಕಲಾ ಸರಸ್ವತಿಯ ಸೇವೆ ಆರಂಭಿಸಿದ ಅವರು, ಇದುವರೆಗೂ ವಿವಿಧ ಭಾಷೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿಕೊಂಡು ನಾವು ಬೆಳೆದಿದ್ದೇವೆ. ಏ ಮೇರೆ ವತನ್ ಕೆ ಲೋಗೊ, ಲಗ್ ಜಾ ಗಲೇ ಸೇರಿದಂತೆ ಹಲವು ಸುಮಧುರ ಹಿಂದಿ ಹಾಡುಗಳು ಸದಾ ನಮ್ಮ ಕಿವಿಯಲ್ಲಿವೆ. 1967 ರಲ್ಲಿ ಬಿಡುಗಡೆಯಾದ ಕನ್ನಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ 'ಬೆಳ್ಳನೆ ಬೆಳಗಾಯಿತು', 'ಎಲ್ಲಾರೆ ಇರತೀರೋ ಎಂದಾರೆ ಬರತೀರೋ' ಹಾಡನ್ನು ಲತಾ ಮಂಗೇಶ್ಕರ್ ಅವರು ಹಾಡಿದ್ದಾರೆ.

ಅವರ ಕಲಾ ಸೇವೆಗೆ ದೇಶದ ಪ್ರತಿಷ್ಠಿತ ನಾಗರೀಕ ಪ್ರಶಸ್ತಿ 'ಭಾರತ ರತ್ನ' ಸೇರಿದಂತೆ ಪದ್ಮ ಪ್ರಶಸ್ತಿಗಳು, ದಾದಾ ಸಾಹೇಬ್ ಪಾಲ್ಕೆ, ಫಿಲ್ಮ್ ಫೇರ್ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಇವರ ಮುಕುಟ ಅಲಂಕರಿಸಿವೆ. ಇಂದು ದೇಶದ ಕಲಾರತ್ನವೊಂದು ನಮ್ಮಿಂದ ಕಣ್ಮರೆಯಾಗಿದ್ದು, ಹಾಡುಗಳ ಮೂಲಕ ಅವರು ಸದಾ ಜೀವಂತವಾಗಿರಲಿದ್ದಾರೆ. ಅವರ ಅಗಲಿಕೆ ದೇಶದ ಕಲಾಕ್ಷೇತ್ರಕ್ಕೇ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+