ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುರುಪಾದಪ್ಪ ನಾಗಮಾರಪಲ್ಲಿ ಸಾವಿಗೆ ಕಂಬನಿ ಮಿಡಿದ ಗಣ್ಯರು

|
Google Oneindia Kannada News

ಬೆಂಗಳೂರು, ನವೆಂಬರ್ 17 : ಸಹಕಾರ ಸಂಘಗಳ ಧುರೀಣ, ಹಿರಿಯ ರಾಜಕಾರಣಿ, ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಡಾ. ಗುರುಪಾದಪ್ಪ ನಾಗಮಾರಪಲ್ಲಿ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಯನ್ನು ಗಣ್ಯರು ನೆನೆಪಿಸಿಕೊಂಡಿದ್ದಾರೆ.

ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಅವರು ಮಂಗಳವಾರ ಮುಂಜಾನೆ ಹೃದಯಾಘಾತದಿಂದಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನವೆಂಬರ್ 18ರ ಬುಧವಾರ ಬೆಳಗ್ಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.[ಗುರುಪಾದಪ್ಪ ನಾಗಮಾರಪಲ್ಲಿ ಅವರ ಪರಿಚಯ]

ಗುರುಪಾದಪ್ಪ ನಾಗಮಾರಪಲ್ಲಿ ಅವರ ಸಾವಿಗೆ ಕಂಬನಿ ಮಿಡಿದಿರುವ ಗಣ್ಯರು, ಗುರುಪಾದಪ್ಪ ನಾಗಮಾರಪಲ್ಲಿ ಅವರ ಸಾವು ಸಹಕಾರಿ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದ್ದಾರೆ. 1987ರಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಬೀದರ್ ಜಿಲ್ಲೆಯಲ್ಲಿ ಸ್ವ-ಸಹಾಯ ಗುಂಪುಗಳನ್ನು ರಚನೆ ಮಾಡಿದ ಕಾರ್ಯವನ್ನು ನೆನೆಪು ಮಾಡಿಕೊಂಡಿದ್ದಾರೆ.[ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ]

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂತಾದವರು ಗುರುಪಾದಪ್ಪ ನಾಗಮಾರಪಲ್ಲಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

'ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ಕೊಡಲಿ'

'ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ಕೊಡಲಿ'

'ಗುರುಪಾದಪ್ಪ ನಾಗಮಾರಪಲ್ಲಿ ಅವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ. 15 ದಿನಗಳ ಹಿಂದೆ ಕ್ಷೇತ್ರದ ಕೆಲಸಗಳಿಗಾಗಿ ನನ್ನನ್ನು ಭೇಟಿಯಾಗಿದ್ದರು. ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

'ಸಹಕಾರಿ ಕ್ಷೇತ್ರಕ್ಕೆ ತುಂಬಲಾರದ ನಷ್ಟ'

'ಸಹಕಾರಿ ಕ್ಷೇತ್ರಕ್ಕೆ ತುಂಬಲಾರದ ನಷ್ಟ'

'ಗುರುಪಾದಪ್ಪ ನಾಗಮಾರಪಲ್ಲಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಸಹಕಾರಿ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರವಾದದ್ದು, ಅವರ ಸಾವಿನಿಂದ ಸಹಕಾರಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ' ಎಂದು ಶಿವಮೊಗ್ಗ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಂಬನಿ ಮಿಡಿದಿದ್ದಾರೆ.

'ಎಲ್ಲರಿಗೂ ಮಾದರಿಯಾಗಿದ್ದರು'

'ಎಲ್ಲರಿಗೂ ಮಾದರಿಯಾಗಿದ್ದರು'

'ಗುರುಪಾದಪ್ಪ ನಾಗಮಾರಪಲ್ಲಿ ಅವರು ಸಹಕಾರಿ ಕ್ಷೇತ್ರಕ್ಕಾಗಿ ಜೀವನವನ್ನು ಮೀಸಲಾಗಿಟ್ಟಿದ್ದರು. ಜನನಾಯಕರಾಗಿ ವಿವಿಧ ಕ್ಷೇತ್ರದಲ್ಲಿ ಹೇಗೆ ಕೆಲಸ ಮಾಡಬೇಕು? ಎಂಬುದಕ್ಕೆ ಅವರು ಮಾದರಿಯಾಗಿದ್ದರು' ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

'ಅಭಿವೃದ್ಧಿ ಬಗ್ಗೆ ಅಪಾರವಾದ ಕಾಳಜಿ ಇತ್ತು'

'ಅಭಿವೃದ್ಧಿ ಬಗ್ಗೆ ಅಪಾರವಾದ ಕಾಳಜಿ ಇತ್ತು'

'ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅಪಾರವಾದ ಕಾಳಜಿ ಇತ್ತು. ಅವರ ಸಾವು ತುಂಬಲಾರದ ನಷ್ಟ' ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕಂಬನಿ ಮಿಡಿದಿದ್ದಾರೆ.

'ತುಂಬಲಾರದ ನಷ್ಟ'

'ತುಂಬಲಾರದ ನಷ್ಟ'

'ಗುರುಪಾದಪ್ಪ ನಾಗಮಾರಪಲ್ಲಿ ಅವರ ಸಾವು ತುಂಬಲಾರದ ನಷ್ಟ. ಶಾಸಕರಾಗಿ ಅವರು ತಮ್ಮ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅವರು ಮಾಡಿರುವ ಕೆಲಸಗಳು ಎಲ್ಲರಿಗೂ ಮಾದರಿ' ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕಂಬನಿ ಮಿಡಿದಿದ್ದಾರೆ.

English summary
Political leaders mourned the death of Bidar constituency KJP MLA and Former minister Gurupadappa Nagamarapalli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X