ನಿನ್ನೆ ಮಠಗಳು, ಇಂದು ಮದುವೆ- ಸಿಎಂ ಬ್ಯುಸಿ: ಉಳಿದಂತೆ ರಾಜಕೀಯ ಬೆಳವಣಿಗೆ ಹೀಗಿವೆ

ಬೆಂಗಳೂರು, ಏ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುತೇಕ ಐದು ದಿನಗಳ ರಾಜ್ಯ ಪ್ರವಾಸದಲ್ಲಿ ಇದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ದಾವಣಗೆರೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬುಧವಾರ ಶಿವಮೊಗ್ಗದಲ್ಲಿ ಉಳಿದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲಿನ ಹೋಟೆಲೊಂದರಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ವಿವಿಧ ಸಭೆಗಳಲ್ಲಿ ಪಾಲ್ಗೊಳಲ್ಲಿದ್ದಾರೆ. ರಾತ್ರಿ ಇಲ್ಲಿನ ಶುಭಶ್ರೀ ಸಮುದಾಯ ಭವನದಲ್ಲಿ ನಡೆಯುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಏ.19ರಿಂದಲೇ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾ ದೇವಿಯ ದರ್ಶನ ಪಡೆದರು. ನಂತರ ಪೀಠಾಧ್ಯಕ್ಷ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠ ದ ವತಿಯಿಂದ ಹರಿಹರಪುರದಲ್ಲಿ ಆಯೋಜಿಸಲಾಗಿದ್ದ ಮಹಾಕುಂಭಾಭಿಷೇಕ ವೈಭವ 2022 ಚಾಲನೆ ನೀಡಿದರು. ಸಂಜೆ ವೇಳೆಗೆ ಶಿವಮೊಗ್ಗಕ್ಕೆ ಬಂದು ಬಿಜೆಪಿ ವಿಭಾಗ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

Karnataka Political News & Developments Today (20-04-2022): Political Parties News and Updates

ಕಾಂಗ್ರೆಸ್:

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣವಾಗಿರುವ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಮತ್ತು ರಾಜ್ಯದ ಶೇ.40% ಕಮಿಷನ್ ಹಗರಣಗಳ ಬಗ್ಗೆ ಜನಜಾಗೃತಿ ಮೂಡಿಸಲು ಕೆಪಿಸಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಬುಧವಾರವೂ ಮುಂದುವರಿಯುತ್ತಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರು ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ಮುನ್ನಡೆಸಲಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿವೆ.

Karnataka Political News & Developments Today (20-04-2022): Political Parties News and Updates

ಡಾ.ಕೆ. ಸುಧಾಕರ್:

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಬೆಳಗ್ಗೆ 10ಕ್ಕೆ ಕೆ.ಸಿ. ಜನರಲ್ ಪಿಐಸಿಇಯು ವಾರ್ಡ್ ಬಲವರ್ದನೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಬೆಳಗ್ಗೆ 11ಕ್ಕೆ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಕಾರ್ಯ ನಡೆಸಲಿದ್ದಾರೆ.

Recommended Video

      RCB ಯ ಬೌಲಿಂಗ್ ಮತ್ತು ಬ್ಯಾಟಿಂಗ್ ದಾಳಿಗೆ ಲಕ್ನೋ ಧೂಳೀಪಟ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+