ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 8ರಂದು ಚುನಾವಣೆ!

By Nayana
|
Google Oneindia Kannada News

ಬೆಂಗಳೂರು, ಮೇ 14: ವಿಧಾನಸಭೆ ಚುನಾವಣೆಗೆ ತೆರೆ ಬೀಳುತ್ತಿರುವ ಬೆನ್ನಲ್ಲೇ ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಜೂನ್ 8ರಂದು ಮತದಾನ ನಡೆಯಲಿದೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರ, ದಕ್ಷಿಣ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಶಿಕ್ಷಕರ ಮತಕ್ಷೇತ್ರ, ನೈಋತ್ಯ ಪದವೀಧರ ಮತಕ್ಷೇತ್ರ, ಬೆಂಗಳೂರು ಪದವೀಧರ ಮತಕ್ಷೇತ್ರ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಮೇ 15ರಂದು ಅಧಿಸೂಚನೆ ಹೊರಬೀಳಲಿದೆ.

ಕರ್ನಾಟಕದಲ್ಲಿ ಮತ್ತೊಂದು ಚುನಾವಣೆಗೆ ಮುಹೂರ್ತ ನಿಗದಿಕರ್ನಾಟಕದಲ್ಲಿ ಮತ್ತೊಂದು ಚುನಾವಣೆಗೆ ಮುಹೂರ್ತ ನಿಗದಿ

ಮೇ 22ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 23ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 25ರೊಳಗೆ ವಾಪಸ್ ಪಡೆಯಬಹುದು. ಜೂನ್ 8ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಜೂನ್ 12ರಂದು ಮತ ಎಣಿಕೆ ನಡೆಯಲಿದೆ. ಜೂನ್ 15ರೊಳಗೆ ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಕೊನೆಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

Polling for 6 MLC seats on June 8

ಸದ್ಯ ಕರ್ನಾಟಕ ಆಗ್ನೇಯ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ರಮೇಶ್‌ಬಾಬು, ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮರಿತಿಬ್ಬೇಗೌಡ, ನೈಋತ್ಯ ಶಿಕ್ಷಕರ ಮತಕ್ಷೇತ್ರದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನೈಋತ್ಯ ಪದವೀಧರ ಮತಕ್ಷೇತ್ರದ ಡಿ.ಎಚ್.ಶಂಕರಮೂರ್ತಿ, ಬೆಂಗಳೂರು ಪದವೀಧರ ಮತಕ್ಷೇತ್ರದ ರಾಮಚಂದ್ರಗೌಡ ಹಾಗೂ ಈಶಾನ್ಯ ಪದವೀಧರ ಮತಕ್ಷೇತ್ರದ ಅಮರನಾಥ್ ಪಾಟೀಲ್ ಅವರ ಅವಧಿ ಜೂನ್ 21ರಂದು ಕೊನೆಗೊಳ್ಳಲಿದೆ

English summary
Election commission has announced elections for six members of legislative council on June 8. Graduate and teachers will be the voters from different districts of the state for these constituencies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X