ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಂಬಿಡೆಂಟ್ ವಂಚನೆ ಪ್ರಕರಣ : ಜನಾರ್ದನ ರೆಡ್ಡಿಗೆ ತಾತ್ಕಾಲಿಕ ನೆಮ್ಮದಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 04 : ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಪ್ರಕರಣದಲ್ಲಿ ಯಾವುದೇ ಕ್ರಮವನ್ನು ಕೈಗೊಳ್ಳದಂತೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ.

ತಮ್ಮ ವಿರುದ್ಧದ ಆಂಬಿಡೆಂಟ್ ವಂಚನೆ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಜನಾರ್ದನ ರೆಡ್ಡಿ ಮತ್ತು ಅಲಿಖಾನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿಯ ವಿಚಾರಣೆಯನ್ನು ಮುಂದುವರೆಸಿದ ಕೋರ್ಟ್ ಮಧ್ಯಂತರ ಆದೇಶವನ್ನು ವಿಸ್ತರಣೆ ಮಾಡಿತು.

ಆಂಬಿಡೆಂಟ್ ಪ್ರಕರಣ : ಜನಾರ್ದನ ರೆಡ್ಡಿಗೆ ತಾತ್ಕಾಲಿಕ ರಿಲೀಫ್ಆಂಬಿಡೆಂಟ್ ಪ್ರಕರಣ : ಜನಾರ್ದನ ರೆಡ್ಡಿಗೆ ತಾತ್ಕಾಲಿಕ ರಿಲೀಫ್

ದೂರುದಾರರಿಗೆ ನೋಟಿಸ್ ತಲುಪುವ ತನಕ ಜನಾರ್ದನ ರೆಡ್ಡಿ ಅವರ ವಿರುದ್ಧ ಬಲವಂತವಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಹೈಕೋರ್ಟ್ ಹಿಂದೆ ಮಧ್ಯಂತರ ಆದೇಶ ನೀಡಿತ್ತು. ಮಂಗಳವಾರ ಆದೇಶವನ್ನು ವಿಸ್ತರಣೆ ಮಾಡಿ, ವಿಚಾರಣೆಯನ್ನು ಮುಂದೂಡಿತು.

ಎರಡು ಕಾಲಿನ ಪುಣ್ಯಕೋಟಿ ಮಣ್ಣು ಅಗೆದು ತಿಂದಿದೆ: ರೆಡ್ಡಿ ವಿರುದ್ಧ ಜೆಡಿಎಸ್ ಲೇವಡಿಎರಡು ಕಾಲಿನ ಪುಣ್ಯಕೋಟಿ ಮಣ್ಣು ಅಗೆದು ತಿಂದಿದೆ: ರೆಡ್ಡಿ ವಿರುದ್ಧ ಜೆಡಿಎಸ್ ಲೇವಡಿ

Ponzi scam case : Karnataka High Court extends interim order

ಜನಾರ್ದನ ರೆಡ್ಡಿ ಅವರು ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ. ಸಿಸಿಬಿ ಪೊಲೀಸರು ವಂಚನೆ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ರೆಡ್ಡಿ ಆಪ್ತರಾದ ಅಲಿಖಾನ್ ಅವರು ಸಹ ಈ ಪ್ರಕರಣದಲ್ಲಿ ಆರೋಪಿ.

12 ವರ್ಷದ ದ್ವೇಷ ತೀರಿಸಿಕೊಂಡ ಕುಮಾರಸ್ವಾಮಿ : ಜನಾರ್ದನ ರೆಡ್ಡಿ12 ವರ್ಷದ ದ್ವೇಷ ತೀರಿಸಿಕೊಂಡ ಕುಮಾರಸ್ವಾಮಿ : ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು. ಮುಂದಿನ ಆದೇಶದ ತನಕ ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳುವಂತಿಲ್ಲ.

English summary
Karnataka High Court on December 4, 2018 extended its interim order on Ponzi scam case. High Court directed CCB police not take any action against Former minister Janardhana Reddy till further order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X