ಈ ವಾರದಲ್ಲಿ ಉನ್ನತ ಶಿಕ್ಷಣ ಖಾತೆ ಬದಲು : ಜಿಟಿಡಿ

ಬೆಂಗಳೂರು, ಜೂನ್ 12 : ಎಚ್.ಡಿ.ಕುಮಾರಸ್ವಾಮಿ ಅವರು ಸಂಪುಟ ರಚನೆ ಮಾಡಿದ ಬಳಿಕ ಉನ್ನತ ಶಿಕ್ಷಣ ಖಾತೆ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಎರಡು ಮೂರು ದಿನದಲ್ಲಿ ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಭೇಟಿಯ ಬಳಿಕ ಮಾತನಾಡಿದ ಅವರು, 'ಜನರಿಗೆ ಹತ್ತಿರವಿರುವ ಖಾತೆ ನೀಡುವಂತೆ ಕೇಳಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಅವರು ಒಪ್ಪಿಗೆ ನೀಡಿದ್ದಾರೆ' ಎಂದರು.

Portfolio will change in two days says GT Devegowda

'ಇನ್ನು ಎರಡು ಅಥವ ಮೂರು ದಿನದಲ್ಲಿ ಖಾತೆ ಬದಲಾವಣೆ ಆಗಲಿದೆ. ಕುಮಾರಸ್ವಾಮಿ ಅವರು ಸಹ ಖಾತೆ ಬದಲಾವಣೆಗೆ ಒಪ್ಪಿಗೆ ನೀಡಿದ್ದಾರೆ' ಎಂದು ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಕುಮಾರಸ್ವಾಮಿ ಸಂಪುಟ ಸೇರಿದ್ದರು. ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಲಾಗಿತ್ತು. ಆದರೆ, ಜಿ.ಟಿ.ದೇವೇಗೌಡ ಬೆಂಬಲಿಗರು ಈ ಖಾತೆ ಬೇಡ, ಬೇರೆ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದರು.

ಜಿ.ಟಿ.ದೇವೇಗೌಡ ಅವರು 8ನೇ ತರಗತಿ ವ್ಯಾಸಂಗ ಮಾಡಿದ್ದಾರೆ. ಪದವಿಯನ್ನು ಪಡೆಯದವರಿಗೆ ಉನ್ನತ ಶಿಕ್ಷಣ ಖಾತೆಯ ಹೊಣೆಯನ್ನು ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿತ್ತು.

ಎಪಿಎಂಸಿ ಮತ್ತು ಸಹಕಾರ ಸಂಘಗಳ ಚುನಾವಣೆಗಳನ್ನು ಎದುರಿಸಿ ರಾಜಕೀಯ ಪ್ರವೇಶ ಮಾಡಿದ ಜಿ.ಟಿ.ದೇವೇಗೌಡ ಅವರು ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದರು.

ಈ ಬಾರಿಯೂ ಅವರು ಸಹಕಾರ, ಕಂದಾಯ ಖಾತೆಗಳ ಆಕಾಂಕ್ಷಿಯಾಗಿದ್ದರು. ಆದರೆ, ಖಾತೆಗಳು ಕಾಂಗ್ರೆಸ್, ಜೆಡಿಎಸ್ ನಡುವೆ ಹಂಚಿಕೆಯಾಗಿವೆ. ಆದ್ದರಿಂದ, ಜಿ.ಟಿ.ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+