ಪೋಕ್ಸೋ ಕೇಸ್ ; ಖುಲಾಸೆಯಾಗಿದ್ದ ಆರೋಪಿಗೆ ಮತ್ತೆ ಶಿಕ್ಷೆ!

ಬೆಂಗಳೂರು, ಮಾರ್ಚ್‌ 17: ಪೋಕ್ಸೋ ಕಾಯಿದೆಯಡಿಯಲ್ಲಿ ಖುಲಾಸೆಯಾಗಿದ್ದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಮತ್ತೆ ಶಿಕ್ಷೆಯನ್ನು ವಿಧಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿರುವುದು ದೋಷಪೂರಿತವಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್. ಬಿ. ಪ್ರಭಾಕರ ಶಾಸ್ತ್ರಿ ಮತ್ತು ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯಪೀಠ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಿ, ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿದೆ.

Posco Case Acquittal HC Reversed Lower Court Order Convicted Accused

ಅಲ್ಲದೆ, ಅಪ್ರಾಪ್ತೆಯೊಂದಿಗೆ ಒಪ್ಪಿತ ಲೈಂಗಿಕ ಕ್ರಿಯೆ ನಡೆದಿದೆ ಎಂಬುದಾಗಿ ಪರಿಗಣಿಸಿ ವಿಚಾರಣಾ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿರುವುದು ದೋಷಪೂರಿತವಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

25 ಸಾವಿರ ರೂ. ದಂಡ: ಅಲ್ಲದೆ, ಅಪರಾಧಿಗೆ 10 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದ್ದು 25 ಸಾವಿರ ರೂ.ಗಳ ದಂಡ ವಿಧಿಸಿದೆ. ಈ ದಂಡದ ಮೊತ್ತದಲ್ಲಿ 20 ಸಾವಿರ ರೂ.ಗಳನ್ನು ಸಂತ್ರಸ್ತೆಗೆ ಪಾವತಿ ಮಾಡಬೇಕು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠ, ಪ್ರಕರಣ ಸಂಬಂಧ ನಡೆದ ತನಿಖೆಯಲ್ಲಿ ಸಂತ್ರಸ್ತೆ ಅಪ್ರಾಪ್ತೆ ಎಂಬುದು ಗೊತ್ತಾಗಲಿದೆ. ಆದರೆ, ವಿವಾಹವಾಗುವುದಾಗಿ ಆರೋಪಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ಘಟನೆ ನಡೆದ ತಕ್ಷಣ ದೂರು ನೀಡಿರಲಿಲ್ಲ. ಆದ ಕಾರಣ ಆರೋಪಿಯನ್ನು ಖುಲಾಸೆಗೊಳಿಸಲಾಗದು ಎಂದು ಪೀಠ ತಿಳಿಸಿದೆ.

ಸರ್ಕಾರದ ಪರ ವಕೀಲರು, ಘಟನೆ ನಡೆದ ಸಂದರ್ಭದಲ್ಲಿ ಸಂತ್ರಸ್ತೆ ಅಪ್ರಾಪ್ತರಾಗಿದ್ದರು. ಹಾಗಿರುವಾಗ ಅಪ್ರಾಪ್ತೆಯೊಂದಿಗೆ ಒಪ್ಪಿತ ಲೈಂಗಿಕ ಕ್ರಿಯೆ ನಡೆದರೂ ಅದು ಅಪರಾಧವಾಗಲಿದೆ. ಅಲ್ಲದೆ, ಸಂತ್ರಸ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಎರಡು ದಿನದಲ್ಲಿಯೇ ಮಗು ಮೃತಪಟ್ಟಿದೆ ಎಂದು ವಿವರಿಸಿದರು. ಆದ್ದರಿಂದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಪಡಿಸಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: 2016ರ ಏಪ್ರಿಲ್ 3ರಂದು ಸಂತ್ರಸ್ತೆಯ ಪೋಷಕರು ಹೊನ್ನಾಳಿ ಠಾಣೆಗೆ ದೂರು ನೀಡಿದ್ದು, 15 ವರ್ಷದ ಅಪ್ರಾಪ್ತೆಯಾಗಿರುವ ತಮ್ಮ ಮಗಳನ್ನು ಆರೋಪಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಆಕೆ ಗರ್ಭಿಣಿಯಾಗಿದ್ದು. ಇದೀಗ ವಿವಾಹವಾಗುವುದಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ್ದ ದಾವಣಗೆರೆ ವಿಶೇಷ ನ್ಯಾಯಾಲಯ 2017ರ ಅ. 13ರಂದು ಘಟನೆ ನಡೆದ ಸಂದರ್ಭದಲ್ಲಿ ಸಂತ್ರಸ್ತೆ ಅಪ್ರಾಪ್ತರಾಗಿದ್ದು, ಒಪ್ಪಿತ ಲೈಂಗಿಕ ಕ್ರಿಯೆ ನಡೆಸಲಾಗಿದೆ ಎಂದು ತಿಳಿಸಿ ಆರೋಪಿಯನ್ನು ಖುಲಾಸೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೊನ್ನಾಳಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+