ಅಪ್ರಾಪ್ತರ ಪ್ರೀತಿಗೆ ಅನುಮತಿ, ದೈಹಿಕ ಸಂಪರ್ಕಕಲ್ಲ; ಹೈಕೋರ್ಟ್
ಬೆಂಗಳೂರು, ಏಪ್ರಿಲ್ 06; ಹದಿನೆಂಟು ವರ್ಷದೊಳಗಿನ ಅಪ್ರಾಪ್ತರಿಗೆ ಪ್ರೀತಿಸಲು ಅನುಮತಿ ಇರಬಹುದೇನೋ, ಆದರೆ ದೈಹಿಕ ಸಂಪರ್ಕ ಬೆಳೆಸಲು ಅಲ್ಲ. ಹೀಗೆಂದು ಕರ್ನಾಟಕ ಹೈಕೋರ್ಟ್ ಪೋಸ್ಕೋ ಪ್ರಕರಣದಲ್ಲಿ ಅಭಿಪ್ರಾಯವ್ಯಕ್ತಪಡಿಸಿ, ಅಪ್ರಾಪ್ತೆಯೊಂದಿಗೆ ಪ್ರೇಮ ವಿವಾಹವಾಗಿ ಸಮ್ಮತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕನೋರ್ವನಿಗೆ ಜಾಮೀನು ನೀಡಲು ನಿರಾಕರಿಸಿದೆ.
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಬುಜ್ಜಿ ಅಲಿಯಾಸ್ ಬಾಬು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ಸ್ವಯಂ ಪ್ರಮಾಣಿಕೃತ ಹೇಳಿಕೆಯಲ್ಲಿ ಖುದ್ದು ಸಂತ್ರಸ್ತೆಯೇ, ಆರೋಪಿ ನನಗೆ ಮಂಗಳ ಸೂತ್ರ ಕಟ್ಟಿದ್ದ. ನಾವಿಬ್ಬರು ದಂಪತಿಯಂತೆ ಜೀವಿಸಿದ್ದು, ಸ್ವಇಚ್ಛೆ ಮೇರೆಗೆ ಲೈಂಗಿಕ ಸಂಪರ್ಕ ಬೆಳೆಸಿರುವುದಾಗಿ ತಿಳಿಸಿದರೂ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಕೋರ್ಟ್ ಆದೇಶವೇನು?;
ಸಂತ್ರಸ್ತೆಯ ಸ್ವಯಂ ಹೇಳಿಕೆಯನ್ನೇ ಮುಂದಿಟ್ಟು ಜಾಮೀನು ಕೋರಿದ ಆರೋಪಿಯ ಪ್ರಯತ್ನವನ್ನು ಒಪ್ಪದ ನ್ಯಾಯಪೀಠ, ಪೋಕ್ಸೋ ಕಾಯ್ದೆಯ ಪ್ರಕಾರ 18 ವರ್ಷದೊಳಗಿನವರು ಅಪ್ರಾಪ್ತರು. ಸಂತ್ರಸ್ತೆಯು 18 ವರ್ಷದ ಒಳಗಿನವರೇ ಆಗಿದ್ದಾರೆ. ಅವರು ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಿದರೂ ಅದು ಸಮ್ಮತಿಯಾಗುವುದಿಲ್ಲ ಎಂದು ಪೋಕ್ಸೋ ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದರಂತೆ ಅಪ್ರಾಪ್ತರ ಸಮ್ಮತಿ ಪಕ್ಷಕಾರರು ಆಗುವುದಿಲ್ಲ ಮತ್ತು ಅವರ ಸಮ್ಮತಿ ಅಗಣ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.
ಸ್ವಯಂ ಪ್ರಮಾಣಿಕೃತ ಹೇಳಿಕೆಯನ್ನು ಪ್ರಕರಣದ ವಿಚಾರಣೆ ವೇಳೆ ಪರೀಕ್ಷೆಗೊಳಪಡಿಸಬೇಕು. ವಿಚಾರಣಾ ನ್ಯಾಯಾಲಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳುವರೆಗೂ, ಯಾವುದೇ ನ್ಯಾಯಾಲಯಕ್ಕೆ ಪೋಕ್ಸೋ ಪ್ರಕರಣದಲ್ಲಿ ಅರ್ಜಿದಾರನ ಪಾತ್ರದ ಬಗ್ಗೆ ನಿರ್ದಿಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶವಿಲ್ಲ ಎಂದು ಪೀಠ ಹೇಳಿದೆ.
ಪ್ರೇಮ ವ್ಯವಹಾರವಿರುವ ಬಗ್ಗೆ ಆರೋಪ ಕೇಳಿ ಬಂದ ಪ್ರಕರಣಗಳಲ್ಲಿ ಅದು ವಿಭಿನ್ನವಾಗಿ ನಿಲ್ಲುತ್ತದೆ. 18 ವರ್ಷ ಒಳಗಿನ ಅಪ್ರಾಪ್ತರಿಗೆ ಪ್ರೀತಿ ವ್ಯವಹಾರ ನಡೆಸುವ ಅನುಮತಿ ಇರಬಹುದೇನಾದರೂ, ಖಂಡಿತವಾಗಿ ದೈಹಿಕ ಸಂಪರ್ಕ ಬೆಳೆಸಲು ಅಲ್ಲವೇ ಅಲ್ಲ. ದೈಹಿಕ ಸಂಪರ್ಕ ಬೆಳೆಸಲು ಅನುಮತಿ ಎಂದಾದರೆ ಪೋಕ್ಸೋಕಾಯ್ದೆ ಜಾರಿ, ಪ್ರಕರಣ ದಾಖಲಾತಿ, ತನಿಖೆ ಮತ್ತು ವಿಚಾರಣೆ ನಡೆಸುವ ಉದ್ದೇಶವೇ ವಿಫಲವಾಗುತ್ತದೆ. ಈ ಉದ್ದೇಶವನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ನ್ಯಾಯಾಲಯಗಳು ತೀರ್ಪು ಕೈಗೊಳ್ಳಬಾರದು ಎಂದು ತಿಳಿಸಿದೆ.

ಅರ್ಜಿದಾರನ ವಾದ ಒಪ್ಪಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಪ್ರಕರಣದ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ನಂತರ ಸಾಂದರ್ಭಿಕ ಸನ್ನಿವೇಶಗಳು ಸಕಾರಾತ್ಮಕವಾಗಿ ಬದಲಾವಣೆಯಾದರೆ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರನಿದ್ದಾನೆ ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣದ ಹಿನ್ನೆಲೆ:
ನನ್ನ 16 ವರ್ಷದ ಮಗಳು (ಸಂತ್ರಸ್ತೆ) 2022ರ ಏಪ್ರಿಲ್ 7ರಂದು ಚರ್ಚ್‌ಗೆ ಹೋಗಿದ್ದಾಗ ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಸಂತ್ರಸ್ತೆ ಮತ್ತು ಆರೋಪಿಯನ್ನು ಪತ್ತೆ ಹಚ್ಚಿದ್ದರು. ಅಧೀನ ನ್ಯಾಯಾಲಯವು ಆರೋಪಿಯನ್ನುನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಂತರ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಐಪಿಸಿ ಸೆಕ್ಷನ್‌ಗೆ ಸಂಬಂಧಿಸಿದ ಕೆಲ ಆರೋಪಗಳ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
2022ರ ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಆರೋಪಿಯು ಸಂತ್ರಸ್ತೆಯನ್ನು ನಂದಿಬೆಟ್ಟ ಕರೆದೊಯ್ದಿದ್ದ. ಬೆಟ್ಟದ ಪ್ರವೇಶ ದ್ವಾರದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದು, ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯ ತಿರಸ್ಕರಿಸಿದ್ದರಿಂದ ಆರೋಪಿ ಹೈಕೋರ್ಟ್ ಮೊರೆ ಹೋಗಿದ್ದ.
'ದೊಡ್ಡಬಳ್ಳಾಪುರದ ಆಂಜನೇಯ ಸ್ವಾಮಿ ದೇವಸ್ಥಾನದ ಹೊರಗಡೆ ಆರೋಪಿ ನನಗೆ ಮಂಗಳ ಸೂತ್ರ ಕಟ್ಟಿದ್ದ. ನಂತರ ನಾವಿಬ್ಬರು ಗಂಡ-ಹೆಂಡತಿಯಂತೆ ಬುದುಕಿದ್ದೇವು. ದಿನಬಿಟ್ಟು ದಿನ ನಾವು ಲೈಂಗಿಕ ಸಂಪರ್ಕ ಬೆಳೆಸಿದ್ದೇವೆ. ಅದಕ್ಕೆ ನನ್ನ ಸಮ್ಮತಿ ಇತ್ತು. ಆರೋಪಿ ನನ್ನೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿಲ್ಲ. ನಾವಿಬ್ಬರು ಸಂತೋಷದಿಂದ ಜೀವಿಸುತ್ತಿದ್ದೆವು'ಎಂಬುದಾಗಿ ದೃಢೀಕರಿಸಿ ಅಧೀನ ನ್ಯಾಯಾಲಯದ ಮುಂದೆ ಸಂತ್ರಸ್ತೆ ಸ್ವಯಂ ಪ್ರಮಾಣಿಕೃತ ಹೇಳಿಕೆ ದಾಖಲಿಸಿದ್ದರು.
ಅದನ್ನು ಕೋರ್ಟ್‌ಗೆ ಸಲ್ಲಿಸಿದ ಅರ್ಜಿದಾರ ಪರ ವಕೀಲರು, ಸ್ವಯಂ ಪ್ರಮಾಣಿಕೃತ ಹೇಳಿಕೆ ಗಮನಿಸಿದರೆ ಪ್ರಕರಣದಲ್ಲಿ ಸಂತ್ರಸ್ತೆಯೊಂದಿಗೆ ಆರೋಪಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿಲ್ಲ. ಲೈಂಗಿಕ ಸಂಪರ್ಕ ಬೆಳೆಸಲು ಸಂತ್ರಸ್ತೆ ಒಪ್ಪಿಗೆ ನೀಡಿದ್ದರು. ಇದರಿಂದ ಪೋಕ್ಸೋ ಕಾಯ್ದೆ ಅನ್ವಯಿಸುವುದಿಲ್ಲ ಎಂಬುದಾಗಿ ಮೇಲ್ನೊಟಕ್ಕೆ ದೃಢಪಡಲಿದ್ದು, ಆರೋಪಿಗೆ ಜಾಮೀನು ನೀಡಬೇಕು ಎಂದು ಕೋರಿದರು.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications