ಪೋಕ್ಸೋ ಪ್ರಕರಣದಲ್ಲಿ ಜಾಮೀನು ಅರ್ಜಿ: ಸಂತ್ರಸ್ತರ ಕುಟುಂಬದವರಿಗೆ ಕಡ್ಡಾಯ ನೋಟಿಸ್‌ಗೆ ಆದೇಶ
ಬೆಂಗಳೂರು, ಮಾ.5. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ 2012 (ಪೋಕ್ಸೋ) ಪ್ರಕರಣಗಳ ಆರೋಪಿಗಳು ಜಾಮೀನು ಕೋರಿ ನ್ಯಾಯಾಲಯಗಳಿಗೆ ಸಲ್ಲಿಸಿದಾಗ ಆ ಅರ್ಜಿಗಳನ್ನು ವಿಚಾರಣೆಗೆ ಪರಿಗಣಿಸುವ ಮುನ್ನ ಕಡ್ಡಾಯವಾಗಿ ಸಂತ್ರಸ್ತರ ಕುಟುಂಬದವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
ಇದು ಸಂತ್ರಸ್ತ ಮಕ್ಕಳ ಹಕ್ಕುಗಳ ರಕ್ಷಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳ ಜೊತೆ ಶಾಮೀಲಾಗಿ ಎಷ್ಟೋ ಬಾರಿ ಸಂತ್ರಸ್ತರಿಗೆ ತಿಳಿಯದಂತೆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದು ಸಂತ್ರಸ್ತರ ಕುಟುಂದವರಿಗೆ ಬೆದರಿಕೆ ಹಾಕುತ್ತಿದ್ದವು. ಆಂತಹ ಪ್ರಕರಣ ಹೆಚ್ಚಾಗುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ.
ಬೆಂಗಳೂರಿನ ಬಿಬಿ ಆಯೆಷಾ ಖಾನುಂ, ದಿವ್ಯಾ ಕ್ರಿಸ್ಟೈನ್ ಹಾಗೂ ಪೆಂಚಿಲಮ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಲಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠ ವಿಚಾರಣೆ ನಡೆಸಿ ಹಲವು ಸರಣಿ ನಿರ್ದೇಶನಗಳನ್ನು ನೀಡಿತು.

"ಇಂತಹ ಪ್ರಕರಣಗಳಲ್ಲಿ ಆರೋಪ ಸಾಬೀತುಪಡಿಸುವುದು ರಾಜ್ಯ ಸರ್ಕಾರ ಹೊಣೆಗಾರಿಕೆಯಾಗಿದೆ, ಆದರೆ ಅಭಿಯೋಜನಾ ವ್ಯವಸ್ಥೆ ಅಧಿಕ ಭಾರದಿಂದ ನಲುಗುತ್ತಿದೆ. ಹಲವು ಬಾರಿ ಅಭಿಯೋಜಕರ ನೇಮಕ ವಿಳಂಬವಾಗಲಿದೆ. ಸಂತ್ರಸ್ತೆ ಅಥವಾ ದೂರುದಾರರು ಅಭಿಯೋಜಕರಿಗೆ ಸೂಕ್ತ ಸಹಕಾರ ನೀಡಿದರೆ ಆದರೆ ಹಲವು ಪ್ರಕರಣಗಳಲ್ಲಿ ಅದು ನಡೆಯುವುದಿಲ್ಲ. ಸಂತ್ರಸ್ತರಿಗೆ ಆರೋಪಿಗಳ ಜಾಮೀನು ಅರ್ಜಿಗಳ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಹಾಗಾಗಿ ವಿಶೇಷ ನ್ಯಾಯಾಲಯಗಳು ಇಂತಹ ಪ್ರಕರಣಗಳಲ್ಲಿ ಸಂತ್ರಸ್ತರು ಕುಟುಂದವರು ಅಥವಾ ಪೋಷಕರು ಅಥವಾ ವಕೀಲರಿಗೆ ಮಾಹಿತಿಯನ್ನು ನೀಡುವುದು ಕಡ್ಡಾಯವೆಂದು '' ನ್ಯಾಯಾಲಯ ಹೇಳಿದೆ.
ನ್ಯಾಯಾಲಯದ ನಿರ್ದೇಶನಗಳೇನು?
*ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದರೆ ತನಿಖಾಧಿಕಾರಿ ಸಂತ್ರಸ್ರರ ಕುಟುಂಬಕ್ಕೆ ಮತ್ತು ಅಭಿಯೋಜಕರಿಗೆ ಆ ಬಗ್ಗೆ ಮಾಹಿತಿ ನೀಡಬೇಕು
*ಸರ್ಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ತಕ್ಷಣವೇ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು
*ಇದಕ್ಕೆ ಪ್ರಾಸಿಕ್ಯೂಟರ್ ಗೆ ತನಿಖಾಧಿಕಾರಿ ಹಾಗೂ ಸಂತ್ರಸ್ತರ ಕುಟುಂದವರು ಅಗತ್ಯ ಮಾಹಿತಿ, ಸಹಾಯ ಮಾಡಬೇಕು
*ಒಂದು ವೇಳೆ ಇಂತಹ ಪ್ರಕರಣದಲ್ಲಿ ಆರೋಪಿ ಕುಟುಂಬಕ್ಕೆ ಪರಿಚಯಸ್ಥರೇ ಆಗಿದ್ದರೆ ಆಗ ಜಾಮೀನು ಆಕ್ಷೇಪಣೆ ಸಲ್ಲಿಸಿರುವ ದಾಖಲೆಗಳನ್ನು ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲೂಸಿ)ಗಳಿಗೂ ಸಲ್ಲಿಸಬೇಕು
*ಆನಂತರ ಸಂಬಂಧಿಸಿದ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಸಂತ್ರಸ್ತರ ಕುಟುಂಬದವರಿಗೆ ನೋಟಿಸ್ ಜಾರಿಯಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು
*ಒಂದು ವೇಳೆ ನೋಟಿಸ್ ಜಾರಿ ನಂತರವೂ ಸಂತ್ರಸ್ತರ ಕಡೆಯಿಂದ ಯಾರೂ ಹಾಜರಾಗದಿದ್ದರೆ ಆಗ ವಿಶೇಷ ನ್ಯಾಯಾಲಯ ತನ್ನ ವಿಚಾರಣಾ ಪ್ರಕ್ರಿಯೆಯನ್ನು ಮುಂದುವರಿಸಬಹುದು.
* ನ್ಯಾಯಾಲಯ ಇಂತಹ ಪ್ರಕರಣಗಳಲ್ಲಿ ಜಾಮೀನು ನೀಡುವಾಗ ಯಾವ್ಯಾವ ಸೆಕ್ಷನ್ ವಿಧಿಸಲಾಗಿದೆ, ಅವುಗಳಲ್ಲಿನ ಶಿಕ್ಷೆ ಪ್ರಮಾಣ ಎಷ್ಟಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು
*ಈ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಸಹಕರಿಸುವ ಅಭಿಯೋಜಕರಿಗೆ ಸೂಕ್ತ ಸಂಭಾವನೆ ನೀಡಲು ಸರ್ಕಾರ ಹಣ ಒದಗಿಸಬೇಕು.
ಕಳೆದ ವಾರ ಅರ್ಜಿ ವಿಚಾರಣೆಗೆ ಬಂದಾಗ ನ್ಯಾಯಪೀಠ, ಪೋಕ್ಸೋ ಕಾಯ್ದೆಯಡಿಯ ಪ್ರಕರಣಗಳಲ್ಲಿ ಆರೋಪಿಗಳು ಸಿಆರ್‌ಪಿಸಿ ಸೆಕ್ಷನ್ 438ರ ಅನುಸಾರ ನೀರಿಕ್ಷಣಾ ಜಾಮೀನು ಅರ್ಜಿ ಅಥವಾ ಸೆಕ್ಷನ್ 439ರ ಅನುಸಾರ ಜಾಮೀನು ಅರ್ಜಿ ಸಲ್ಲಿಸಿದರೆ ಸಂತ್ರಸ್ತರ ಪಾಲಕರಿಗೆ ಕಡ್ಡಾಯವಾಗಿ ನೋಟಿಸ್ ಜಾರಿಗೊಳಿಸಬೇಕು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದೀಗ ಆದೇಶವನ್ನು ಹೊರಡಿಸಿದ್ದು, ಆ ಆದೇಶವನ್ನು ಪ್ರತಿ ಜಿಲ್ಲೆಯ ಪ್ರಧಾನ ನ್ಯಾಯಾಧೀಶರ ಮುಂದಿಟ್ಟು, ಅವರಿಂದ ಎಲ್ಲ ನ್ಯಾಯಾಲಯಗಳಿಗೆ ರವಾನಿಸಿ, ಹೈಕೋರ್ಟ್ ಆದೇಶ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದೆ.
ಅರ್ಜಿದಾರರ ವಾದ:
ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಕಡ್ಡಾಯವಾಗಿ ಸಂತ್ರಸ್ತರಿಗೂ ನೋಟಿಸ್ ನೀಡಿ, ಅವರ ವಾದವನ್ನೂ ಆಲಿಸಬೇಕೆಂದು ದೆಹಲಿ, ಬಾಂಬೆ ಹಾಗೂ ಅಲಹಾಬಾದ್ ಹೈಕೋರ್ಟ್‌ಗಳು ತೀರ್ಪು ನೀಡಿವೆ. ಇಂಥದೇ ಆದೇಶವನ್ನು ರಾಜ್ಯದಲ್ಲೂ ಹೊರಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯವನ್ನು ಕೋರಿದರು.
ಅಲ್ಲದೆ, ಸಂತ್ರಸ್ತರ ಪಾಲಕರಿಗೆ ನೋಟಿಸ್ ಜಾರಿಗೊಳಿಸುವುದರ ಜತೆಗೆ, ಕುಟುಂಬ ಸದಸ್ಯರೇ ಆರೋಪಿಗಳಾಗಿರುವ ಪೋಕ್ಸೋ ಪ್ರಕರಣಗಳಲ್ಲಿ ಮಕ್ಕಳ ಕಲ್ಯಾಣ ಸಮಿತಿಗಳಿಗೆ (ಸಿಡಬ್ಲೂಸಿ) ನೋಟಿಸ್ ಜಾರಿಗೊಳಿಸಬೇಕಾಗುತ್ತದೆ ಎಂದು ತಿಳಿಸಿದ್ದರು.
Recommended Video
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications