ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೋಕ್ಸೋ ಕಾಯ್ದೆಯಡಿ ಶಿಕ್ಷೆ ಕಡಿತಕ್ಕೆ ಅಧಿಕಾರವಿಲ್ಲ; ಹೈಕೋರ್ಟ್

By ಎಸ್‌ಎಸ್‌ಎಸ್
|
Google Oneindia Kannada News

ಬೆಂಗಳೂರು, ಜನವರಿ 20; ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಅಪರಾಧ ಕೃತ್ಯಕ್ಕೆ ನಿಗದಿತ ಪ್ರಮಾಣದ ಶಿಕ್ಷೆಯನ್ನು ಕಡಿಮೆ ಮಾಡುವ ಯಾವುದೇ ಅಧಿಕಾರ ಪೋಕ್ಸೋ ವಿಶೇಷ ನ್ಯಾಯಾಲಯಕ್ಕಿಲ್ಲ.

ಹೀಗೆಂದು ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್, ಪೋಕ್ಸೋ ಕಾಯಿದೆಯಡಿ ಅಧೀನ ನ್ಯಾಯಾಲಯಗಳಿಗೆ ಲಭ್ಯವಿರುವ ಅಧಿಕಾರವನ್ನು ವಿಶ್ಲೇಷಿಸಿದೆ. ಎಂತಹುದೇ ಪ್ರಕರಣದಲ್ಲೂ ಶಿಕ್ಷೆಯನ್ನು ಕಡಿಮೆ ಮಾಡಲು ಅವಕಾಶವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದ ಮೇಲ್ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ.

ಪೋಕ್ಸೊ ಜಾತ್ಯತೀತ ಕಾನೂನು, ಎಲ್ಲರಿಗೂ ಅನ್ವಯ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪೋಕ್ಸೊ ಜಾತ್ಯತೀತ ಕಾನೂನು, ಎಲ್ಲರಿಗೂ ಅನ್ವಯ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಶಿಕ್ಷೆ ಹೆಚ್ಚಳ: ಅಲ್ಲದೆ, ಪ್ರಕರಣದಲ್ಲಿ ಆರೋಪಿ ಶೇಖ್ ರೌಫ್ ಅನ್ನು ದೋಷಿಯಾಗಿ ತೀರ್ಮಾನಿಸಿರುವ ಪೋಕ್ಸೋ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಆತನಿಗೆ ವಿಧಿಸಲಾಗಿದ್ದ ಐದು ವರ್ಷ ಜೈಲು ಶಿಕ್ಷೆಯನ್ನು ಏಳು ವರ್ಷಕ್ಕೆ ಹೆಚ್ಚಿಸಿದೆ.

 22ರ ಆಕೆಗೆ 17ರ 'ಪತಿ'; ಪೋಕ್ಸೊ ಕಾಯ್ದೆ ಅಡಿ ಜೈಲು ಸೇರಿದಳು ತಾಯಿ 22ರ ಆಕೆಗೆ 17ರ 'ಪತಿ'; ಪೋಕ್ಸೊ ಕಾಯ್ದೆ ಅಡಿ ಜೈಲು ಸೇರಿದಳು ತಾಯಿ

POSCO Case: Trial Court Has Not Power To Reduce Sentence HC Ordered

ಅಲ್ಲದೆ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಅಡಿಯಲ್ಲಿ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ಕೃತ್ಯಕ್ಕೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ನಿಗದಿಪಡಿಸಲಾಗಿದೆ. ಈ ಅಂಶಗಳನ್ನು ನಿರ್ಲಕ್ಷಿಸಿ ವಿಶೇಷ ನ್ಯಾಯಾಲಯ ಆರೋಪಿಗೆ ಕೇವಲ 5 ವರ್ಷ ಜೈಲು ಶಿಕ್ಷೆ ವಿಧಿಸಿರುವ ಕಾನೂನು ಬಾಹಿರ. ಈ ಆದೇಶದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅಗತ್ಯ ಕಂಡುಬರುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ದಲಿತ ಯುವಕನ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಗುಬ್ಬಿ ಹುಡುಗಿ ದೂರುದಲಿತ ಯುವಕನ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಗುಬ್ಬಿ ಹುಡುಗಿ ದೂರು

ಸರ್ಕಾರದ ವಿಶೇಷ ಅಭಿಯೋಜಕರು ಶೇಖ್ ರೌಫ್ ಎಸಗಿರುವ ಅಪರಾಧ ಕೃತ್ಯವನ್ನು ಪ್ರಾಸಿಕ್ಯೂಷನ್ ಎಲ್ಲಾ ಸಾಕ್ಷ್ಯಾಧಾರಗಳ ಸಹಿತ ಸಾಬೀತುಪಡಿಸಿತ್ತು. ಅದನ್ನು ಪರಿಗಣಿಸಿದ ಪೋಕ್ಸೋ ನ್ಯಾಯಾಲಯವು ಶೇಖರ್ ರೌಫ್ ಅನ್ನು ದೋಷಿಯಾಗಿ ತಿರ್ಮಾನಿಸಿದೆ.

ಹೀಗಿದ್ದರೂ ಅಪರಾಧಿಗೆ ಶಿಕ್ಷೆ ಮತ್ತು ದಂಡ ಮೊತ್ತವನ್ನು ಕಾಯ್ದೆಯಡಿ ನಿಗದಿಪಡಿಸಿರುವ ಪ್ರಮಾಣಕ್ಕಿಂತ ಕಡಿಮೆ ವಿಧಿಸಿರುವುದು ಸರಿಯಲ್ಲ. ಈ ರೀತಿ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಲು ವಿಶೇಷ ನ್ಯಾಯಾಲಯಕ್ಕೆ ಯಾವುದೇ ವಿವೇಚನಾತ್ಮಕ ಅಧಿಕಾರ ಇಲ್ಲ ಎಂದು ವಾದಿಸಿದ್ದರು.

ಜತೆಗೆ, ಆರೋಪಿಯು 12 ವರ್ಷದ ಬಾಲಕಿ ಮೇಲೆ ಹೀನ ಕೃತ್ಯ ಎಸಗಿ ಆಕೆಯ ಭವಿಷ್ಯವನ್ನೇ ಹಾಳು ಮಾಡಿದ್ದೇನೆ. ಆದ್ದರಿಂದ ವಿಶೇಷ ನ್ಯಾಯಾಲಯವು ವಿಧಿಸಿರುವ ಜೈಲು ಶಿಕ್ಷೆ ಮತ್ತು ದಂಡ ಪ್ರಮಾಣ ತುಂಬಾ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಎಂದು ಕೋರಿದ್ದರು.

ಪ್ರಕರಣದ ಹಿನ್ನೆಲೆ: 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶೇಖರ್ ರೌಪ್ ಅನ್ನು ಅಪರಾಧಿಯಾಗಿ ಪರಿಗಣಿಸಿದ್ದ ಪೋಕ್ಸೋ ವಿಶೇಷ ನ್ಯಾಯಾಲಯ, ಆತನಿಗೆ ಐದು ವರ್ಷ ಸಾಧಾರಣಾ ಜೈಲು ಶಿಕ್ಷೆ ವಿಧಿಸಿ 2015ರ ಸೆ.7ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಬಾಲ್ಕಿ ಟೌನ್ ಪೊಲೀಸರು ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

English summary
In POSCO case trial court has not power to reduce sentence Karnataka high court ordered.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X