POSCO Case: ಬಿಎಸ್ ಯಡಿಯೂರಪ್ಪಗೆ ಜೈಲಾ ಅಥವಾ ಬೇಲಾ..!?;ಇಂದು ನಿರ್ಧಾರ
ಬೆಂಗಳೂರು, ಜೂನ್. 14: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ನಿರ್ಧಾರವಾಗಲಿದೆ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಇಂದು ಮಧ್ಯಾಹ್ನ 2,30ಕ್ಕೆ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಹಾಗಾಗಿ ಎಲ್ಲರ ಕಣ್ಣು ಇದೀಗ ನ್ಯಾಯಾಲಯದತ್ತ ನೆಟ್ಟಿದೆ. ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಪೀಠದ ಮುಂದೆ ಬಿಎಸ್ ವೈ, ತಮ್ಮ ವಿರುದ್ಧ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿರುವ ಎರಡೂ ಅರ್ಜಿಗಳು ವಿಚಾರಣೆಗೆ ಬರಲಿವೆ.

ತಮ್ಮ ವಿರುದ್ಧ ಸಂಚು ಎಂದ ಮಾಜಿ ಸಿಎಂ ಬಿಎಸ್‌ವೈ
ಬಿಎಸ್ ಯಡಿಯೂರಪ್ಪ ತಮ್ಮ ಅರ್ಜಿಯಲ್ಲಿ ವಿರೋಧ ಪಕ್ಷದ ಕೆಲ ರಾಜಕೀಯ ಮುಖಂಡರು ದೊಡ್ಡಮಟ್ಟದ ಸಂಚು ರೂಪಿಸಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದಿದ್ದರೂ ತನ್ನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ಮಾಡಿ ಘನತೆಗೆ ಧಕ್ಕೆ ತರುವ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಈಗಾಗಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ನೋಟಿಸ್ ಒಂದು ದಿನ ಮಾತ್ರ ಅವಕಾಶ ನೀಡಿದ್ದು, ಆದರೆ, ಅರ್ಜಿದಾರರು ಸಭೆಯೊಂದರಲ್ಲಿ ಭಾಗಿಯಾಗಲು ದೆಹಲಿಯಲ್ಲಿ ಉಳಿದಿದ್ದಾರೆ. ಅಲ್ಲದೆ, ಜೂನ್ 12ರ ಬದಲಿಗೆ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಭರವಸೆ ನಿಡಿದ್ದಾರೆ.

ಪ್ರಕರಣ ಸಂಬಂಧ ತನಿಖಾಧಿಕಾರಿಗಳು 2024ರ ಮಾರ್ಚ್ 28ರಂದು ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದು, ಅದರಂತೆ ಏಪ್ರಿಲ್ 12ರಂದು ತನಿಖೆಗೆ ಹಾಜರಾಗಲಾಗಿದೆ. ಈ ವೇಳೆ ಯಾವುದೇ ಹೇಳಿಕೆಗಳನ್ನು ದಾಖಲಿಸಿಕೊಳ್ಳದ ತನಿಖಾಧಿಕಾರಿಗಳು ಕೇವಲ ಧ್ವನಿ ಮಾದರಿಯನ್ನು ಮಾತ್ರದ ಪಡೆದು ತನಿಖಾಧಿಕಾರಿಗಳು ಕಳುಹಿಸಿದ್ದಾರೆ. ಆದರೆ, ಅರ್ಜಿದಾರರು ವಿಚಾರಣೆಗೆ ಹಾಜರಾಗಿಲ್ಲ ಎಂದು ತಿಳಿಸಿ ಅವರ ವಿರುದ್ಧ ಬಂಧನ ವಾರೆಂಟ್ ಪಡೆಯಲಾಗಿದೆ.
ಅರ್ಜಿದಾರರು 81 ವರ್ಷ ವಯಸ್ಸಿನವರಾಗಿದ್ದು, ಹಲವು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜತೆಗೆ, ಕಾಲ ಕಾಲಕ್ಕೆ ವೈದ್ಯರ ಭೇಟಿ ಮಾಡುವುದು ಔಷಧಗಳನ್ನು ಪಡೆದುಕೊಳ್ಳಬೇಕಾಗುತ್ತದೆ. ಅಲ್ಲದೆ, ಅರ್ಜಿದಾರರ ವಿರುದ್ಧ ಮರಣದಂಡನೆಯಂತೆ ಆರೋಪ ಇಲ್ಲ. ಕೇವಲ ಏಳು ವರ್ಷಗಳ ಶಿಕ್ಷೆಯಾಗುವಂತಹ ಆರೋಪವಿದ್ದು, ವಿಚಾರಣಾ ಸಂದರ್ಭದಲ್ಲಿ ಬಂಧನ ಮಾಡುವಂತಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ತಿಳಿಸಿದೆ.
ಜತೆಗೆ, ಪ್ರಸ್ತುತ ಪ್ರಕರಣ ಐಪಿಸಿ 354(ಎ) ಅಡಿಯಲ್ಲಿ ಲೈಂಗಿಕ ಕಿರುಕುಳದ ಅಡಿಯಲ್ಲಿ ಬರುವುದಿಲ್ಲ. ಅಲ್ಲದೆ, ಫೋಕ್ಸೋ ಕಾಯಿದೆಯಡಿಯಲ್ಲಿ ದೂರು ದಾಖಲಿಸಲು ಯಾವುದೇ ಅಂಶಗಳು ಇಲ್ಲ. ಘಟನೆ ನಡೆದ ದಿನದಂದು ಸ್ಥಳದಲ್ಲಿದ್ದ ಅರ್ಜಿದಾರರ ಮನೆಯ ಸಿಬ್ಬಂದಿ ಆ ರೀತಿಯ ಕೃತ್ಯ ನಡೆದಿಲ್ಲ ಎಂಬುದಾಗಿ ಅರ್ಜಿಯಲ್ಲಿ ವಿವರಿಸಿದ್ದಾರೆ.
ದೂರುದಾರ ಮಹಿಳೆಗೆ ಸಂಬಂಧಿಕರು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಮತ್ತಿಯರರ ವಿರುದ್ಧ ವಿರುದ್ಧ ವಿನಾ ಕಾರಣ ದೂರು ದಾಖಲಿಸುವುದು ಹವ್ಯಾಸವಾಗಿದೆ. ಅದೇ ರೀತಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮತ್ತು ಅರ್ಜಿದಾರ ಯಡಿಯೂರಪ್ಪನವರನ್ನು ಅಪರಾಧ ಕೃತ್ಯದಲ್ಲಿ ತಪ್ಪಾಗಿ ಸಿಲುಕಿಸುವ ಸಲುವಾಗಿ ಸಂಘಟಿತ ಪ್ರಯತ್ನ ನಡೆದಿದೆ.
ಜತೆಗೆ, ಅರ್ಜಿದಾರರಿಗೆ ಕಿರುಕುಳ ನೀಡುವ ಉದ್ದೇಶದಿಂದ ಈ ದೂರು ದಾಖಲಾಗಿದೆ. ಅಲ್ಲದೆ, ಘಟನೆ ನಡೆದ ಒಂದೂರವರೆ ತಿಂಗಳ ಬಳಿಕ ದೂರು ದಾಖಲಿಸಲಾಗಿದೆ. ದೂರು ದಾಖಲಿಸುವ ಮುನ್ನ ದೂರುದಾರೆ ಅರ್ಜಿದಾರರ ಮನೆಗೆ ಭೇಟಿ ನೀಡಿದ್ದರೂ, ಮಗಳ ಮೇಲೆ ಲೈಂಗಿಕ ಕಿರುಕುಳದ ಕುರಿತು ಮಾತನಾಡಿಲ್ಲ ಎಂದು ತಿಳಿಸಲಾಗಿದೆ. ಅರ್ಜಿದಾರರು ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಲಾಗಿದೆ.
ಫೋಕ್ಸೋ ಪ್ರಕರಣದ ಹಿನ್ನೆಲೆ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3 ರಂದು ಅರ್ಜಿದಾರರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ದೂರನ್ನು ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನ ಗಂಭೀರತೆ ಪರಿಗಣಿಸಿದ್ದ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಇತ್ತೀಚೆಗೆ ಸಿಐಡಿ ಅಧಿಕಾರಿಗಳ ಯಡಿಯೂರಪ್ಪನವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಎರಡನೇ ಬಾರಿ ಸೂಚನೆ ನೀಡಿತ್ತು.












Click it and Unblock the Notifications