ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಶಾಸಕರಲ್ಲಿ ಯಾರ್ಯಾರು ಕಾಂಗ್ರೆಸ್‌ಗೆ ವಾಪಸಾಗುವ ಸಾಧ್ಯತೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22: ಒಂದೆಡೆ ಅನರ್ಹ ಶಾಸಕರು ಕಾಂಗ್ರೆಸ್‌ಗೆ ಮರಳಲು ಯತ್ನಿಸುತ್ತಿದ್ದಾರೆ, ಇನ್ನೊಂದೆಡೆ ಮೂಲ ಕಾಂಗ್ರೆಸ್ಸಿಗರ ಮನವೊಲಿಸುವ ಪ್ರಯತ್ನವೂ ನಡೆದಿದೆ.

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಸಜ್ಜಾಗಿದ್ದಾರೆ ಎನ್ನಲಾದ ಕೆಲ ಅನರ್ಹ ಶಾಸಕರು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮೂಲ ಕಾಂಗ್ರೆಸ್ಸಿಗರ ಮನವೊಲಿಸುವ ಪ್ರಯತ್ನವೂ ಆರಂಭವಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬೆಂಗಳೂರು ನಗರದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಹಿರಿಯ ನಾಯಕ ಎಚ್‌ಕೆ ಪಾಟೀಲ್ ಹಾಗೂ ರಾಮಲಿಂಗಾರೆಡ್ಡಿ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ಈ ಮಾತುಕತೆ ವೇಳೆ ಕೆಲ ಅನರ್ಹ ಶಾಸಕರು ಮತ್ತೆ ಪಕ್ಷಕ್ಕೆ ಹಿಂತಿರುಗುವ ಆಸಕ್ತಿ ತೋರಿರುವ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಮೈತ್ರಿ ಸರ್ಕಾರ ಪತನಗೊಳಿಸಿ ಬಿಎಸ್​ವೈ ನೇತೃತ್ವ ಬಿಜೆಪಿ ಸರ್ಕಾರ ರಚನೆಗೆ ಮೂಲ ಕಾರಣವಾಗಿರುವ ಅನರ್ಹ ಶಾಸಕರ ಪಾಳಯ ಹಿಂದೆಯಿಂದಲೂ ಗೊಂದಲದ ಗೂಡಾಗಿತ್ತು.

ಯಡಿಯೂರಪ್ಪ ಸರ್ಕಾರಕ್ಕೆ ಕೈಕೊಡಲಿದ್ದಾರೆಯೇ ಅನರ್ಹ ಶಾಸಕರು?ಯಡಿಯೂರಪ್ಪ ಸರ್ಕಾರಕ್ಕೆ ಕೈಕೊಡಲಿದ್ದಾರೆಯೇ ಅನರ್ಹ ಶಾಸಕರು?

ಇಷ್ಟು ದಿನವಾದರೂ ಅವರ ಹಣೆಬರಹ ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ಕೂಡ ತ್ವರಿತ ವಿಚಾರಣೆಗೆ ನಿರಾಕರಿಸುತ್ತಿದೆ. ಬಿಜೆಪಿಯವರು ತಮಗೆ ಕೈಕೊಟ್ಟುಬಿಟ್ಟರೆಂಬ ಆತಂಕದಲ್ಲಿಯೂ ಅನರ್ಹರಿದ್ದಾರೆ.

ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀವ್ರ ವಿರೋಧ

ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀವ್ರ ವಿರೋಧ

ಕಾಂಗ್ರೆಸ್‌ನಲ್ಲಿ ಅನರ್ಹ ಶಾಸಕರನ್ನು ಮತ್ತೆ ಪಕ್ಷಕ್ಕೆ ತೆಗೆದುಕೊಳ್ಳಲು ತೀವ್ರ ವಿರೋಧವಿದೆ. ಅದರಲ್ಲೂ ವಿಶೇಷವಾಗಿ ಮೂಲ ಕಾಂಗ್ರೆಸ್ಸಿಗರು ಇದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಅನರ್ಹರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದರು.

ಪಕ್ಷಕ್ಕೆ ಮರಳಲಿರುವ ಅನರ್ಹ ಶಾಸಕರು ಇವರೇ?

ಪಕ್ಷಕ್ಕೆ ಮರಳಲಿರುವ ಅನರ್ಹ ಶಾಸಕರು ಇವರೇ?

ಇಷ್ಟಾಗಿಯೂ ಅನರ್ಹ ಶಾಸಕರ ಪೈಕಿ ಬೆಂಗಳೂರು ನಗರದ ವಿಧಾನಸಭಾ ಕ್ಷೇತ್ರಗಳನ್ನು ಪ್ರತಿನಿಧಿಸುವ ಎಸ್‌ಟಿ ಸೋಮಶೇಖರ್, ಮುನಿರತ್ನ, ಭೈರತಿ ಬಸವರಾಜು, ಮತ್ತೆ ಪಕ್ಷಕ್ಕೆ ತೆಕ್ಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಚರ್ಚೆ ಮತ್ತೆ ಪಕ್ಷದಲ್ಲಿ ಆರಂಭವಾಗಿದೆ.

ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದಿದ್ದ ಸತೀಶ್ ಜಾರಕಿಹೊಳಿ

ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದಿದ್ದ ಸತೀಶ್ ಜಾರಕಿಹೊಳಿ

ಉಪ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಸಿಗದ‌ ಕೆಲವರು ನಮ್ಮ ಹೈಕಮಾಂಡ್ ಜತೆಗೆ ಮಾತುಕತೆ ನಡೆಸಿದ್ದಾರೆ. ಆಯಾ ಕ್ಷೇತ್ರದ ಆಗುಹೋಗು ನೋಡಿ ಪಕ್ಷಕ್ಕೆ ಸೇರಿಸಿಕೊಳ್ಳುವ ಚಿಂತನೆ ಇದೆ. ಕಾಂಗ್ರೆಸ್​ಗೆ ಬಂದವರಿಗೆ ಹೈಕಮಾಂಡ್ ಟಿಕೆಟ್ ಕೊಡಬಹುದು‌ ಎಂದರು ನಾವೆಲ್ಲರೂ ಒಂದೇ ಇದ್ದೇವೆ ಎಂಬ ಭ್ರಮೆಯಲ್ಲಿ ಜನರಿದ್ದಾರೆ. ನಾವು ಒಂದೇ ಅಲ್ಲ ಎಂದು ತೋರಿಸಲು ಗೋಕಾಕ್​​​ನಲ್ಲಿ ಹೋರಾಟ ನಡೆಸಲಾಗಿದೆ. ಜನರ ಬಳಿ ಹೋಗಿ ರಮೇಶ್ ಮತ್ತು ನಾವು ಬೇರೆ ಬೇರೆ ಎಂದು ಹೇಳುವ ಸರ್ಕಸ್ ಮಾಡುತ್ತಿದ್ದೇವೆ. ರಾಜಕೀಯ ವಿಚಾರದಲ್ಲಿ ನಾನು ಮತ್ತು ರಮೇಶ್ ಒಂದೇ ರೀತಿ ಇಲ್ಲ.

ಕಾಂಗ್ರೆಸ್ ಪಕ್ಷಕ್ಕೆ ಯಾರು ಬೇಕಾದರೂ ಸೇರಿಕೊಳ್ಳಬಹುದು

ಕಾಂಗ್ರೆಸ್ ಪಕ್ಷಕ್ಕೆ ಯಾರು ಬೇಕಾದರೂ ಸೇರಿಕೊಳ್ಳಬಹುದು

ಯಾರೂ ಬೇಕಾದರೂ ಕಾಂಗ್ರೆಸ್‌ ಸೇರಬಹುದು, ಯಾರೇ ಪಕ್ಷದ ಸಿದ್ಧಾಂತವನ್ನು ಬಂಬಿ ಬಂದರೂ ಅಂತವರಿಗೆ ಸ್ವಾಗತ ಇದೆ. ನಮ್ಮ ಪಕ್ಷದ ಸಿದ್ದಾಂತವನ್ನು ಮೊದಲು ಅವರು ಒಪ್ಪಬೇಕು. ಆದರೆ, ಉಪಚುನಾವಣೆಯಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ನಾನು ಯಾವುದೇ ಖಾತ್ರಿ ನೀಡುವುದಿಲ್ಲ. ಅದೆಲ್ಲಾ, ದೊಡ್ಡವರಿಗೆ ಬಿಟ್ಟ ವಿಚಾರ" ಎಂದು ಅನರ್ಹ ಶಾಸಕರನ್ನು ಉಲ್ಲೇಖಿಸದೇ ಪರೋಕ್ಷವಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

English summary
On the one hand, Disqualified mlas are trying to get back to Congress, while on the other hand there is an attempt to persuade the original Congressmen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X