ರಾಘವೇಶ್ವರಶ್ರೀಗಳಿಗೆ ಪುರುಷತ್ವ, ವೀರ್ಯಾಣು ಪರೀಕ್ಷೆ
ಬೆಂಗಳೂರು, ಸೆಪ್ಟೆಂಬರ್ 29 : ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಶ್ರೀಗಳಿಗೆ ಸೆ. 30ರಂದು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ. ಬುಧವಾರ ಶ್ರೀಗಳಿಗೆ ಮೂರು ವಿವಿಧ ಪರೀಕ್ಷೆಗಳು ನಡೆಯಲಿವೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕ ಡಾ.ಟಿ.ದುರ್ಗಣ್ಣ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬುಧವಾರ ಶ್ರೀಗಳಿಗೆ ಪರೀಕ್ಷೆ ಮಾಡಲು ನಾಲ್ಕು ತಜ್ಞ ವೈದ್ಯರ ತಂಡವನ್ನು ರಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. [ಪುರುಷತ್ವ ಪರೀಕ್ಷೆ ಎಂದರೇನು? ಏಕೆ ಮಾಡ್ಬೇಕು?]

ಶ್ರೀಗಳಿಗೆ ದೈಹಿಕ ಪರೀಕ್ಷೆ, ವೀರ್ಯಾಣು ಪರೀಕ್ಷೆ, ಪುರುಷತ್ವ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬುಧವಾರ ಬೆಳಗ್ಗೆ 9 ಗಂಟೆಗೆ ಖಾಲಿ ಹೊಟ್ಟೆಯಲ್ಲಿ ಬರುವಂತೆ ರಾಘವೇಶ್ವರ ಶ್ರೀಗಳಿಗೆ ಸೂಚನೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. [ರಾಘವೇಶ್ವರ ಶ್ರೀ ವಿರುದ್ಧದ ಚಾರ್ಜ್ ಶೀಟ್ ನಲ್ಲೇನಿದೆ?]
ಕೋರ್ಟ್‌ನಲ್ಲಿ ವಿಚಾರಣೆ : ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಸಿಐಡಿ ನೀಡಿರುವ ನೋಟಿಸ್‌ಅನ್ನು ಪ್ರಶ್ನಿಸಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೆ.28ರಂದು ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ಇಂದಿಗೆ ಮುಂದೂಡಿದೆ. [ರಾಘವೇಶ್ವರ ಶ್ರೀ ಭಕ್ತರಿಂದ ಮಾಧ್ಯಮಗಳಿಗೆ 13 ಪ್ರಶ್ನೆಗಳು]
ಒಂದು ವೇಳೆ ಇಂದು ಕರ್ನಾಟಕ ಹೈಕೋರ್ಟ್ ಸಿಐಡಿ ನೋಟಿಸ್‌ಗೆ ತಡೆಯಾಜ್ಞೆ ನೀಡಿದರೆ ಶ್ರೀಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರೀಗಳ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಡೆಯಲಿದೆಯೇ? ಇಲ್ಲವೇ? ಎಂಬುದು ಕೋರ್ಟ್ ತೀರ್ಪಿನ ಮೇಲೆ ನಿರ್ಧಾರವಾಗಲಿದೆ.












Click it and Unblock the Notifications