ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಕೊರತೆ : 3,500 ಮೆಗಾವಾಟ್ ವಿದ್ಯುತ್ ಖರೀದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ರಾಜ್ಯದಲ್ಲಿನ ವಿದ್ಯುತ್ ಕೊರತೆಯನ್ನು ನೀಗಿಸಲು 3,500 ಮೆಗಾವಾಟ್ ವಿದ್ಯುತ್ ಖರೀದಿ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಸರ್ಕಾರ ಖಾಸಗಿ ಅವರಿಂದ 1,133 ಮೆಗಾವಾಟ್ ವಿದ್ಯುತ್ ಖರೀದಿ ಮಾಡುತ್ತಿದೆ.

ಗುರುವಾರ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ನಂತರ ಪತ್ರಿಕಾಗೋಷ್ಠಿ ನಡೆಸಿದರು. ಇಲಾಖೆ 3,500 ಮೆಗಾವಾಟ್ ವಿದ್ಯುತ್ ಖರೀದಿ ಮಾಡಲು ಮುಂದಾಗಿದೆ ಎಂದರು. [ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು]

dk shivakumar

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 'ಮುಂದಿನ 10 ವರ್ಷಗಳ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿದ್ದೇವೆ. ದೀರ್ಘಾವಧಿ ಬೇಡಿಕೆ ಪೂರೈಸಲು 2 ಸಾವಿರ ಮೆಗಾವಾಟ್‌, ಅಲ್ಪಾವಧಿ ಬೇಡಿಕೆ ಪೂರೈಸಲು 1 ಸಾವಿರ ಮೆಗಾವಾಟ್‌ ವಿದ್ಯುತ್ ಖರೀದಿ ಮಾಡಲಾಗುತ್ತಿದೆ' ಎಂದರು. [ವಿದ್ಯುತ್ ಸಮಸ್ಯೆ ಏಕೆ, ನಿವಾರಣೆ ಹೇಗೆ?]

'ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ ವಿದ್ಯುತ್‌ ಬೇಡಿಕೆ ದುಪ್ಪಟ್ಟಾಗಲಿದೆ. ಎಷ್ಟು ವಿದ್ಯುತ್‌ ಉತ್ಪಾದಿಸಲು ಸಾಧ್ಯವಿದೆ, ಎಲ್ಲೆಲ್ಲಿ ವಿದ್ಯುತ್‌ ಉತ್ಪಾದಿಸಬಹುದು, ಜಲವಿದ್ಯುತ್‌, ಉಷ್ಣ ವಿದ್ಯುತ್‌, ಅನಿಲ ಆಧಾರಿತ ವಿದ್ಯುತ್‌ ಉತ್ಪಾದನೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ' ಎಂದು ಸಚಿವರು ಹೇಳಿದರು.

'ವಿದ್ಯುತ್ ಕೊರತೆಯ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಅವಧಿ ಹೆಚ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಖಾಸಗಿ ಕಂಪೆನಿಗಳಿಂದ 688 ಮೆಗಾವಾಟ್‌, ಮಹಾರಾಷ್ಟ್ರದಿಂದ 165 ಮೆಗಾವಾಟ್‌ ಹಾಗೂ ಕರ್ನಾಟಕ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11 ಜಾರಿಗೊಳಿಸಿ 260 ಮೆಗಾವಾಟ್‌ ವಿದ್ಯುತ್‌ ಪಡೆಯುತ್ತಿದ್ದೇವೆ' ಎಂದು ಮಾಹಿತಿ ನೀಡಿದರು.

'ವಿದ್ಯುತ್‌ ಖರೀದಿ ಮಾಡಲು ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಅನುದಾನ ಒಸಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ವಿದ್ಯುತ್‌ ಕಂಪೆನಿಗಳೂ ಯಾವುದೇ ಹಣಪಾವತಿ ಬಾಕಿ ಉಳಿಸಿಕೊಂಡಿಲ್ಲ' ಎಂದು ಸಚಿವರು ಹೇಳಿದರು.

English summary
Energy Minister D.K. Shivakumar said, Karnataka Power Corporation Limited (KPCL) will buy 3500 mw power to solve power crisis in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X