• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತುರ್ತು ದುರಸ್ಥಿ ಕಾರ್ಯ: ಮೇ 11ಕ್ಕೆ ಹಾವೇರಿ, ರಾಯಚೂರಿನಲ್ಲಿ ವಿದ್ಯುತ್ ವ್ಯತ್ಯಯ

|
Google Oneindia Kannada News

ತುರ್ತು ದುರಸ್ಥಿ ಕಾರ್ಯ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ರಾಜ್ಯದ ರಾಯಚೂರು ಜಿಲ್ಲೆ ಹಾಗೂ ಹಾವೇರಿಯಲ್ಲಿ ಮೇ 11 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಾವೇರಿ 110ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 11 ರಂದು ಬುಧವಾರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ 110ಕೆವಿ ಹಾವೇರಿ, 33 ಕೆ.ವಿ ಕೇರಿಮತ್ತಿಹಳ್ಳಿ ಹಾಗೂ ಗಾಂಧೀಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 06 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಆದ್ದರಿಂದ ಈ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಗೆ ಬರುವ ಸಂಪೂರ್ಣ ಹಾವೇರಿ ನಗರ, ಆಲದಕಟ್ಟಿ, ಚಿಕ್ಕಲಿಂಗದಹಳ್ಳಿ, ದೇವಗಿರಿ, ಡಿ.ಸಿ.ಆಫೀಸ್, ದೇವಗಿರಿಯಲ್ಲಾಪುರ, ನಾಗನೂರ, ಕೋಳುರು, ಕರ್ಜಗಿ, ಯತ್ತಿನಹಳ್ಳಿ, ದೇವಿಹೊಸೂರ, ದಿಡಗೂರ, ಹಿರೇಲಿಂಗದಹಳ್ಳಿ, ಹೊಂಬರಡಿ, ಹೊಸಳ್ಳಿ, ಕಬ್ಬೂರ, ಕಲ್ಲಾಪುರ, ಕನಕಾಪುರ, ಕೇರಿಮತ್ತಿಹಳ್ಳಿ, ಸಂಗೂರ, ತೋಟದಯಲ್ಲಾಪುರ, ವೀರಾಪುರ, ವೆಂಕಟಾಪುರ, ಗೌರಾಪುರ, ಎಸ್.ಪಿ.ಆಫೀಸ್, ಕುರುಬಗೊಂಡ, ಬಿದರಗಡ್ಡಿ, ಕೋಡಿಹಳ್ಳಿ, ತಿಮ್ಮಾಪುರ, ಕುಳೇನೂರು, ಕಲ್ಲಾಪುರ, ಹೊಸುರು ಹಾಗೂ ಸದರಿ ಫೀಡರ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು: ಮೇ.11ರಂದು ವಿದ್ಯುತ್ ವ್ಯತ್ಯಯ

ನಗರದ ಎಪಿಎಂಸಿ 20ಎಂವಿಎ, 110/11 ಕೆವಿ ಪವರ್ ಟ್ರಾನ್ಸ್ಫಾರ್ಮರ್ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ 2022ರ ಮೇ.11ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಜವಾಹಾರನಗರ, ಚಂದ್ರಬಂಡಾ 33/11 ಕೆವಿ ಉಪ ಕೇಂದ್ರಗಳಿಂದ ವಿದ್ಯುತ್ ಸರಜರಾಜುವಾಗುವ ಎಲ್ಲಾ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ರಾಯಚೂರು ಗ್ರಾಮೀಣ ಉಪ ವಿಭಾಗ ಜೆಸ್ಕಾಂ ಕಾ ಮತ್ತು ಪಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The power cut will occur on May 11 in Raichur district and Haveri in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X