ವಿದ್ಯುತ್ ದರ ಏರಿಕೆ: ಜೂನ್ 22 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ

ಬೆಂಗಳೂರು, ಜೂನ್. 18: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಕೆಸಿಸಿ&ಐ) ರಾಜ್ಯದಲ್ಲಿ ಹೆಚ್ಚಾಗಿರುವ ವಿದ್ಯುತ್ ಶುಲ್ಕವನ್ನು ವಿರೋಧಿಸಿ ಜೂನ್ 22 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಹೊಸ ವಿದ್ಯುತ್ ಶುಲ್ಕದ ಮೇಲಿನ ಪರಿಣಾಮದ ಬಗ್ಗೆ ಸರ್ಕಾರಕ್ಕೆ ತಿಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಬಂದ್‌ಗೆ ಕರೆ ನೀಡಲು ನಿರ್ಧರಿಸಿದ್ದೇವೆ ಎಂದು ಒಕ್ಕೂಟ ತಿಳಿಸಿದೆ.

ವಿದ್ಯುತ್ ದರ ಏರಿಕೆ ಪರಿಣಾಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಸಂದೇಶವನ್ನು ಕಳುಹಿಸಲು ಸಂಘದ ಎಲ್ಲಾ ಸದಸ್ಯರು ಮುಷ್ಕರದಲ್ಲಿ ಭಾಗವಹಿಸುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (KCCI&I) ಒತ್ತಾಯಿಸಿದೆ. ಎಲ್ಲಾ ಸದಸ್ಯರಿಗೆ ಪತ್ರದಲ್ಲಿ ಒಕ್ಕೂಟವು ಮನವಿ ಮಾಡಿರುವುದು ಹೀಗೆ.

Power tariff hike: KCC&I called for state wide strike on June 22

"ಜೂನ್ 22 ರಂದು ತಮ್ಮ ಸಂಸ್ಥೆಗಳನ್ನು ಮುಚ್ಚಲು ನಾವು ಎಲ್ಲಾ ವ್ಯಾಪಾರ ಸಂಸ್ಥೆಗಳು ಮತ್ತು ಕೈಗಾರಿಕೆಗಳಿಗೆ ವಿನಂತಿಸುತ್ತೇವೆ. ಎಸ್ಕಾಂನ ವಿದ್ಯುತ್ ಶುಲ್ಕದಲ್ಲಿ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಮುಷ್ಕರ ನಡೆಯಲಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಪರಿಹಾರ ದೊರೆಯುತ್ತಿಲ್ಲ" ಎಂದಿದೆ.

"ಇನ್ನಾದರೂ ಸರಕಾರ ಇತ್ತ ಗಮನಹರಿಸಿ ವಿದ್ಯುತ್‌ ಶುಲ್ಕವನ್ನು ಕಡಿಮೆ ಮಾಡಲಿ ಎಂದು ಒಕ್ಕೂಟ ಆಶಿಸುತ್ತದೆ. ಸರ್ಕಾರದ ಗಮನ ಸೆಳೆಯಲು ನಾವು ಈ ಬಂದ್‌ಗೆ ಕರೆ ನೀಡಿದ್ದೇವೆ. ನಾವು ಪರಿಹಾರವನ್ನು ಕಂಡುಕೊಳ್ಳಲು ಮತ್ತು ವಿದ್ಯುತ್ ಶುಲ್ಕದಲ್ಲಿ ಕಡಿತ ಬೇಕು. ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಪತ್ರದಲ್ಲಿ ಬರೆಯಲಾಗಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಮೇ 12 ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 70 ಪೈಸೆ ದರವನ್ನು ಹೆಚ್ಚಿಸಿತ್ತು. ರಾಜ್ಯದಲ್ಲಿ ಹೊಸ ಸರ್ಕಾರವು ಚುನಾಯಿತವಾದ ನಂತರ 'ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕ' (ಎಫ್‌ಪಿಪಿಸಿಎ) ನೆಪದಲ್ಲಿ ಪ್ರತಿ ಯೂನಿಟ್‌ಗೆ 51 ಪೈಸೆಯ ಮತ್ತೊಂದು ಹೆಚ್ಚಳವನ್ನು ಘೋಷಿಸಿದೆ..

ವಿದ್ಯುತ್ ಶುಲ್ಕ ಹೆಚ್ಚಳದ ವಿಚಾರವಾಗಿ ಸಿದ್ದರಾಮಯ್ಯ ಅವರು ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. "ನಾವು ವಿದ್ಯುತ್ ದರವನ್ನು ಹೆಚ್ಚಿಸಲು ನಿರ್ಧರಿಸಿಲ್ಲ. ಕರ್ನಾಟಕ ವಿದ್ಯುತ್ ನಿಯಂತ್ರಣ ಪ್ರಾಧಿಕಾರವಿದೆ. ಅದು ನಿರ್ಧರಿಸಿದೆ. ಈ ಹಿಂದೆಯೇ ನಿರ್ಧರಿಸಲಾಗಿತ್ತು. ನಾವು ಅದನ್ನು ಜಾರಿಗೆ ತಂದಿದ್ದೇವೆ" ಎಂದು ವಿವರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+