National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್
National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆ ಆಗುತ್ತಿದೆ. ಹಾಗೆಯೇ ದಶಕಗಳ ಬೇಡಿಕೆಯಾಗಿರುವ ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕೆಲಸಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಹೊಸ ವೇಗ ನೀಡಲು ಮುಂದಾಗಿದ್ದಾರೆ. ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದರೂ ನಿರೀಕ್ಷಿತ ಫಲ ಸಿಗದ ಹಿನ್ನೆಲೆಯಲ್ಲಿ ಈಗ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಭೇಟಿಗೆ ಅವಕಾಶ ಕೇಳಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮರಿಯಮ್ಮನಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಿ ಮನವಿ ಸಲ್ಲಿಸಿರುವುದಾಗಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಶೀಘ್ರದಲ್ಲೇ ಭೇಟಿಗೆ ಅವಕಾಶ ಸಿಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದರು.

'ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಿದ್ದೇನೆ'
ದಾವಣಗೆರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೆದ್ದಾರಿ ಅಭಿವೃದ್ಧಿ ಸಂಬಂಧವಾಗಿ ಈಗಾಗಲೇ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಮೂರು ಬಾರಿ ಭೇಟಿಯಾಗಿ ಮನವಿ ಮಾಡಿದ್ದೇನೆ. ಸಂಸತ್ತಿನಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಆದರೂ, ತೃಪ್ತಿಕರ ಪ್ರತಿಕ್ರಿಯೆ ದೊರಕದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ನೇರವಾಗಿ ಭೇಟಿ ಮಾಡಲು ಅವಕಾಶ ಕೇಳಿದ್ದೇನೆ ಎಂದು ವಿವರಿಸಿದರು.
'ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು'
ವಿಜಯನಗರ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಮಾರ್ಗವಾಗಿ ಸಾಗುವ ಈ ರಸ್ತೆಯಲ್ಲಿ ಬಹಳಷ್ಟು ವಾಹನಗಳು ಸಂಚಾರ ಮಾಡುತ್ತವೆ. ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಪಘಾತಗಳ ಪ್ರಮಾಣವೂ ಏರಿಕೆಯಾಗುತ್ತಿದೆ. ಹಲವೆಡೆ ರಸ್ತೆ ಕಿರಿದಾಗಿರುವುದರಿಂದ ಅಗಲೀಕರಣ ಹಾಗೂ ಸಮಗ್ರ ಅಭಿವೃದ್ಧಿ ಅಗತ್ಯವಾಗಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ-ಎಕ್ಸ್‌ಪ್ರೆಸ್‌ವೇ
ದೇಶದ ಆರ್ಥಿಕ ಪ್ರಗತಿಯಲ್ಲಿ ರಸ್ತೆಗಳ ಪಾತ್ರ ಅತಿ ದೊಡ್ಡದು. ದೂರದ ಊರುಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಒಂದು ಕಡೆಯಾದರೆ, ವೇಗದ ಪ್ರಯಾಣಕ್ಕೆ ಹೊಸ ಭಾಷ್ಯ ಬರೆಯುತ್ತಿರುವ ಎಕ್ಸ್‌ಪ್ರೆಸ್ ವೇಗಳು ಇನ್ನೊಂದು ಕಡೆ. ಮೇಲ್ನೋಟಕ್ಕೆ ಇವೆರಡೂ ಒಂದೇ ಎನಿಸಿದರೂ, ಇವುಗಳ ವಿನ್ಯಾಸ, ವೇಗ ಮತ್ತು ತಂತ್ರಜ್ಞಾನದಲ್ಲಿ ಅಜಗಜಾಂತರ ವ್ಯತ್ಯಾಸಗಳಿವೆ. ಹಾಗಾದ್ರೆ, ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್ ವೇ ನಡುವಿನ ವ್ಯತ್ಯಾಸಗಳೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ರಾಷ್ಟ್ರೀಯ ಹೆದ್ದಾರಿಗಳು (National Highways)
* ರಾಷ್ಟ್ರಿ ಹೆದ್ದಾರಿಗಳ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಳ್ಳಲಿದೆ. ಇವುಗಳು ಹಲವು ಜಿಲ್ಲೆ, ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತವೆ.
* ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಮಿತಿ ಕಡಿಮೆ ಇರಲಿದ್ದು, ಗಂಟೆಗೆ 80-100 ಕಿಲೋ ಮೀಟರ್ ವರೆಗೆ ನಿಗದಿ ಪಡಿಸಲಾಗಿರುತ್ತದೆ.
* ರಾಷ್ಟ್ರೀಯ ಹೆದ್ದಾರಿಗಳು 2-6 ಲೇನ್‌ಗಳನ್ನು ಹೊಂದಿರುತ್ತವೆ.
* ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
* ರಾಷ್ಟ್ರೀಯ ಹೆದ್ದಾರಿಗಳು ಸಾಮಾನ್ಯವಾಗಿ ಬಹು ಪ್ರವೇಶ ಮತ್ತು ನಿರ್ಗಮನ ಬಿಂದುಗಳನ್ನು ಹೊಂದಿರುತ್ತವೆ. ಆದ್ದರಿಂದ ಸ್ಥಳೀಯ ರಸ್ತೆಗಳಿಗೆ ಸುಲಭವಾಗಿ ಪ್ರವೇಶ ಮಾಡಬಹುದು.
* ರಾಷ್ಟ್ರೀಯ ಹೆದ್ದಾರಿಗಳು ಪ್ರಮುಖ ನಗರಗಳು, ಪಟ್ಟಣಗಳು ಮತ್ತು ರಾಜ್ಯಗಳನ್ನು ಸಂಪರ್ಕಿಸುತ್ತವೆ. ಈ ಮೂಲಕ ಅಂತಾರಾಜ್ಯ ಸಾರಿಗೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತವೆ.
* ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಫ್ಲೈಓವರ್‌ಗಳನ್ನು ಹೊಂದಿರುತ್ತವೆ.
ಎಕ್ಸ್‌ಪ್ರೆಸ್ ವೇಗಳು (Expressways)
* ಎಕ್ಸ್‌ಪ್ರೆಸ್‌ಗಳ ಮಾಲೀಕತ್ವವನ್ನು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳು ಸಹ ಹೊಂದಬಹುದು.
* ವೇಗದ ಮಿತಿಯನ್ನು ಗಂಟೆಗೆ 100-120ರ ವರಗೆ ನಿಗದಿಪಡಿಸಲಾಗುತ್ತದೆ.
* ಎಕ್ಸ್‌ಪ್ರೆಸ್ ವೇಗಳನ್ನು 6-10 ಅಥವಾ ಅದಕ್ಕಿಂತ ಹೆಚ್ಚು ಲೇನ್‌ಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ.
* ಇಲ್ಲಿ ನಿಧಾನಗತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತದೆ. ಉದಾಹರಣೆಗೆ ದ್ವಿಚಕ್ರ ವಾಹನಗಳು, ಆಟೋ, ಟ್ರ್ಯಾಕ್ಟರ್‌ಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ದೊಡ್ಡ ವಾಹನಗಳು ಅಂದ್ರೆ, ಕಾರು, ಲಾರಿ ಸೇರಿದಂತೆ ದೊಡ್ಡ ವಾಹನಗಳಿಗೆ ಮಾತ್ರ ಅವಕಶ ಇರುತ್ತದೆ.
* ಇವು ಎಲ್ಲೆಂದರಲ್ಲಿ ಪ್ರವೇಶ ದ್ವಾರಗಳನ್ನು ಹೊಂದಿರುವುದಿಲ್ಲ. ಒಂದು ವೇಳೆ ನಿಮಗೆ ಅವಶ್ಯ ಇರುವ ಜಿಲ್ಲೆಗಳಿಗೆ ಎಂಟ್ರಿ ಕೊಡಬೇಕಂದ್ರೆ, ಇಂಟರ್‌ಚೆಂಜ್ ಇರುವ ಕಡೆಗಳಲ್ಲಿಯೇ ಪ್ರವೇಶ ಮಾಡಬೇಕಾಗುತ್ತದೆ.
* ಎಕ್ಸ್‌ಪ್ರೆಸ್‌ವೇಗಳನ್ನು ತಡೆರಹಿತ ವಾಹನ ಸಂಚಾರದ ಉದ್ದೇಶಕ್ಕಾಗಿ ನಿರ್ಮಾಣ ಮಾಡಲಾಗಿರುತ್ತದೆ.
* ಎಕ್ಸ್‌ಪ್ರೆಸ್‌ವೇಗಳು ಅಗತ್ಯ ಇರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಹೊಂದಿರುತ್ತವೆ.
* ವೇಗ ನಿಯಂತ್ರಣಕ್ಕಾಗಿ ಅತ್ಯಾಧುನಿಕ ಎಐ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗುತ್ತದೆ. ಅಪಘಾತಗಳ ನಿಯಂತ್ರಣಕ್ಕೆ ಈ ಕ್ರಮ ತೆಗೆದುಕೊಳ್ಳಲಾಗುತ್ತದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications