BREAKING: ಯೋಗಿ ಆದಿತ್ಯನಾಥ್ ಭೇಟಿ ಮಾಡಿದ ಪ್ರಭು ಚೌಹಾಣ್!
ಬೆಂಗಳೂರು, ಡಿ. 03: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ ಕುರಿತು ಪರ ಹಾಗೂ ವಿರೋಧದ ಚರ್ಚೆ ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಉತ್ತರ ಪದೇಶದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮಾಡಲಾಗಿದೆ. ಹೀಗಾಗಿ ಕಾನೂನಿನ ರೂಪರೇಷೆ, ಪರ ವಿರೋಧ ಅಂಶಗಳು, ಕಾನೂನು ಅನುಷ್ಟಾನ ಸೇರಿದಂತೆ ಹಲವು ವಿಚಾರಗಳ ಕುರಿತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಸಲಹೆಯನ್ನು ಸಚಿವ ಪ್ರಭು ಚೌಹಾಣ್ ಅವರು ಪಡೆದಿದ್ದಾರೆ ಎನ್ನಲಾಗಿದೆ. ಜೊತೆಗೆ ಸಂಪುಟ ಪುನಾರಚನೆ ಸಂದರ್ಭದಲ್ಲಿ ತಮ್ಮನ್ನು ಸಂಪುಟದಿಂದ ಕೈ ಬಿಡಬಹುದು ಎಂಬ ಆತಂಕ ಕೂಡ ಸಚಿವ ಪ್ರಭು ಚೌಹಾಣ್ ಅವರಿಗೆ ಇದೆ ಎನ್ನಲಾಗಿದೆ. ಹೀಗಾಗಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ಮೂಲಕ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವುದು ಕೂಡ ಪ್ರಭು ಚೌಹಾಣ್ ಪ್ರಯತ್ನ ಎನ್ನಲಾಗಿದೆ.

Recommended Video
ಗೋಹತ್ಯೆ ನಿಷೇಧ ಕಾಯಿದೆ ಪರ ಇರುವವರಿಂದ ಬೆಂಬಲವೂ ಸಿಗುತ್ತದೆ. ಜೊತೆಗೆ ಇದು ರಾಜಕೀಯವಾಗಿ ಬಿಜೆಪಿಗೆ ಅನುಕೂಲವಾಗಲಿದೆ ಎಂಬ ಚರ್ಚೆಗಳು ನಡೆದಿವೆ. ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಬಿಬಿಎಂಪಿ ಚುನಾವಣೆ ಕೂಡ ಘೋಷಣೆಯಾಗುವ ಸಾಧ್ಯತೆಗಳಿವೆ. ಗೋಹತ್ಯೆ ನಿಷೇಧ ಕಾನೂನಿನಿಂದ ಬಿಜೆಪಿಗೆ ಹಿಂದೂ ಮತಗಳ ಕ್ರೂಢೀಕರಣ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ ಎನ್ನಲಾಗಿದೆ. ಒಟ್ಟಾರೆ ಸಚಿವ ಪ್ರಭು ಚೌಹಾಣ್ ಅವರು ಯುಪಿ ಸಿಎಂ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications